– ಏರ್ ಪೋರ್ಟ್ ನಲ್ಲಿಯೇ ಉಳಿದ ಅರ್ಧ ಹಣ
ಕಾಬೂಲ್: ತಾಲಿಬಾನಿಗಳಿಗೆ ಅಧಿಕಾರ ಹಸ್ತಾಂತರಿಸಿ ಮಾಜಿ ಅಧ್ಯಕ್ಷ ಅಶ್ರಫ್ ಘನಿ ದೇಶ ತೊರೆಯುವಾಗ ನಾಲ್ಕು ಕಾರ್ ಮತ್ತು ಒಂದು ಹೆಲಿಕಾಪ್ಟರ್ ನಲ್ಲಿ ಅಪಾರ ಪ್ರಮಾಣದ ನಗದು ತೆಗೆದುಕೊಂಡು ಹೋಗಿರುವ ಬಗ್ಗೆ ವರದಿಯಾಗಿದೆ. ಆದ್ರೆ ಎಲ್ಲವೂ ಹಣ ತೆಗೆದುಕೊಂಡ ಹೋಗಲಾಗದೇ ಕೆಲ ನಗದನ್ನು ಕಾಬೂಲ್ ವಿಮಾನ ನಿಲ್ದಾಣದಲ್ಲಿಯೇ ಬಿಟ್ಟುಹೋಗಿರೋದು ರಷ್ಯಾದ ರಾಯಭಾರಿ ಕಚೇರಿ ದೃಢಪಡಿಸಿದೆ.
Advertisement
ತಾಲಿಬಾನಿಗಳು ಸಹ ವಿಮಾನ ನಿಲ್ದಾಣದಲ್ಲಿ ಅಪಾರ ಪ್ರಮಾಣದ ನಗದು ಪತ್ತೆಯಾಗಿರೋದನ್ನು ಹೇಳಿಕೊಂಡಿದ್ದರು. ಇದು ಸುಮಾರು 50 ಲಕ್ಷ ಡಾಲರ್ ಎಂದು ಹೇಳಲಾಗುತ್ತಿದ್ದು, ಆದ್ರೆ ಈ ವರದಿಯನ್ನು ದೃಢಪಡಿಸಿರಲಿಲ್ಲ. ಇದೀಗ ಕಾಬೂಲ್ ನಲ್ಲಿರುವ ರಷ್ಯಾದ ರಾಯಭಾರಿ ಕಚೇರಿ ಈ ಸುದ್ದಿಯನ್ನು ಖಚಿತಪಡಿಸಿದೆ. ಅಫ್ಘಾನಿಸ್ತಾನ ತಾಲಿಬಾನಿಗಳ ಕೈ ವಶವಾದ್ರೂ ತನ್ನ ರಾಯಭಾರಿ ಕಚೇರಿಯನ್ನು ಮುಚ್ಚದಿರಲು ರಷ್ಯಾ ನಿರ್ಧರಿಸಿದೆ. ನಾವು ತಾಲಿಬಾನಿಗಳ ಚಲನವಲನಗಳನ್ನು ಇಲ್ಲಿಂದಲೇ ಗಮನಿಸುತ್ತೇವೆ. ಅಂದ್ರೆ ಅವರ ಸರ್ಕಾರವನ್ನು ಒಪ್ಪಿಕೊಂಡಂತೆ ಅಲ್ಲ ಎಂದು ಸ್ಪಷ್ಟಪಡಿಸಿದೆ.
Advertisement
Advertisement
ಈ ಕುರಿತು ಮಾಹಿತಿ ನೀಡಿರುವ ಕಾಬೂಲ್ ನಲ್ಲಿರುವ ದೂತವಾಸ ಕಚೇರಿಯ ವಕ್ತಾರೆ ನಿಕಿತಾ ಐಚಿಂಕೋ, ಭಾನುವಾರವೇ ಘನಿ ದೇಶ ತೊರೆದಿದ್ದಾಯ್ತು. ಹೋಗುವಾಗ ನಾಲ್ಕು ಕಾರ್ ಮತ್ತು ಹೆಲಿಕಾಪ್ಟರ್ ನಲ್ಲಿ ನಗದು ರವಾನಿಸಲಾಗಿತ್ತು. ಆದ್ರೆ ಏಕಕಾಲದಲ್ಲಿ ಅಷ್ಟು ನಗದು ತೆಗೆದುಕೊಂಡ ಹೋಗಲಾರದ ಘಣಿ ಕೆಲ ಹಣವನ್ನು ವಿಮಾನ ನಿಲ್ದಾಣದಲ್ಲಿ ಬಿಟ್ಟು ಹೋಗಿರುವ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ತಾಲಿಬಾನಿಗಳಿಗೆ ಹೆದರಿ 1 ವಿಮಾನದಲ್ಲಿ ಪ್ರಯಾಣಿಸಲು ಮುಗಿಬಿದ್ದ ನೂರಾರು ಜನ
Advertisement
ಅಶ್ರಫ್ ಘನಿ ಮತ್ತು ಮಾಜಿ ಉಪಾಧ್ಯಕ್ಷ ಸಾಲೇಹ ಭಾನುವಾರವೇ ತಮ್ಮ ದೇಶದ ಜನತೆಯನ್ನು ಬಿಟ್ಟು ಅಫ್ಘಾನಿಸ್ತಾನ ತೊರೆದಿದ್ದರು. ಈ ವೇಳೆ ಇಬ್ಬರ ಜೊತೆ ಆಪ್ತರು ಮಾತ್ರ ಪ್ರಯಾಣಿಸಿದ್ದಾರೆ ಎನ್ನಲಾಗಿದೆ. ಆದ್ರೆ ಕಾಬೂಲ್ ನಿಂದ ಯಾವ ವಿಮಾನದಿಂದ ಎಲ್ಲಿಗೆ ಹೋದ್ರು ಎಂಬುದರ ಬಗ್ಗೆ ಇದುವರೆಗೂ ಖಚಿತ ಮಾಹಿತಿ ಲಭ್ಯವಾಗಿಲ್ಲ. ಕೆಲ ಮಾಧ್ಯಮಗಳ ಪ್ರಕಾರ ಘನಿ ತಜಕೀಸ್ತಾನ ಎಂದು ಹೇಳುತ್ತಿದ್ರೆ, ಕೆಲವರ ಪ್ರಕಾರ ಅಮೆರಿಕ ತಲುಪಿರುವ ಬಗ್ಗೆ ಅನುಮಾನಗಳು ವ್ಯಕ್ತವಾಗಿವೆ. ಇದನ್ನೂ ಓದಿ: ರಕ್ತಪಾತ ತಡೆಗಾಗಿ ದೇಶ ತೊರೆದೆ- ಅಫ್ಘಾನಿಸ್ತಾನದ ಅಧ್ಯಕ್ಷ ಅಶ್ರಫ್ ಘನಿ
ಅಶ್ರಫ್ ಘನಿ ಹೇಳಿದ್ದೇನು?:
ನನಗೆ ಕಠಿಣ ಸವಾಲು ಎದುರಾಗಿತ್ತು. ತಾಲಿಬಾನಿಗಳನ್ನು ಎದುರಿಸಲು ನಿಂತಿದ್ದೆ. ಅವರೆಲ್ಲರೂ ಶಸ್ತ್ರಸಜ್ಜಿ ತರಾಗಿ ರಾಷ್ಟ್ರಪತಿ ಭವನ ಪ್ರವೇಶಿಸಲು ಸಿದ್ಧರಾಗಿದ್ದರು. ನಾನು ಅಫ್ಘಾನಿಸ್ತಾನದಿಂದ ದೂರ ಹೋಗಬೇಕೆಂಬುವುದು ಅವರ ಡಿಮ್ಯಾಂಡ್ ಆಗಿತ್ತು. ಕಳೆದ 20 ವರ್ಷಗಳಿಂದ ದೇಶದ ಜನರ ರಕ್ಷಣೆಯಲ್ಲಿ ತೊಡಗಿಕೊಂಡಿದ್ದೇನೆ. ಒಂದು ವೇಳೆ ಅವರ ಡಿಮ್ಯಾಂಡ್ ಒಪ್ಪದಿದ್ರೆ ಯುದ್ಧವೇ ನಡೆಯತ್ತಿತ್ತು. ಈ ಯುದ್ಧದಲ್ಲಿ ನೂರಾರು ಜನ ಪೊಲೀಸರು ಹುತಾತ್ಮರಾಗುತ್ತಿದ್ದರು. ರಕ್ತ ಹರಿಸೋದು ನನಗೆ ಇಷ್ಟವಿರಲಿಲ್ಲ. ಅವರ ಬೇಡಿಕೆಯಂತೆ ಆಧಿಕಾರ ಹಸ್ತಾಂತರಿಸಿ ದೇಶ ತೊರೆದೆ. ಇಲ್ಲವಾದಲ್ಲಿ 60 ಲಕ್ಷ ಜನಸಂಖ್ಯೆಯುಳ್ಳು ಈ ನಗರ ದೊಡ್ಡ ದುರಂತಕ್ಕೆ ಸಾಕ್ಷಿಯಾಗುತ್ತಿತ್ತು ಎಂದು ಹೇಳಿದ್ದಾರೆ. ಇದನ್ನೂ ಓದಿ: ಅಫ್ಘಾನಿಸ್ತಾನದ ಸ್ಥಿತಿ ಘನಘೋರ – ವಿಮಾನದಿಂದ ಬಿದ್ದು ಮೂವರು ಸಾವು
https://www.youtube.com/watch?v=ckd3p_Ra2VI