ಹಿಜಬ್ ಧರಿಸಿ ಬರಲು ಬಿಡಲ್ಲ: ಸಚಿವ ಅಶ್ವತ್ಥ ನಾರಾಯಣ

Public TV
1 Min Read
ASHWATH NARAYAN 1

ಚಾಮರಾಜನಗರ: ನ್ಯಾಯಾಲಯದ ಸೂಚನೆಯ ನಂತರವೂ ಹಿಜಬ್ ಧರಿಸಿ ಬರುವುದು ತಪ್ಪಾಗುತ್ತದೆ. ಯಾವುದೇ ಕಾರಣಕ್ಕೂ ಹಿಜಬ್ ಧರಿಸಿ ಬರಲು ಬಿಡಲ್ಲ ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ ತಿಳಿಸಿದರು.

ಚಾಮರಾಜನಗರದಲ್ಲಿ ಮಾತನಾಡಿದ ಅವರು, ಪದವಿ ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯ ಇಲ್ಲ. ಆದರೆ ಹಿಜಬ್ ಧರಿಸಿ ಶಾಲೆಗೆ ಬರಲು ಕಾನೂನಿನಲ್ಲಿ ಅವಕಾಶವಿಲ್ಲ. ಕಾನೂನು ಗೌರವಿಸುವುದನ್ನು ವಿದ್ಯಾರ್ಥಿಗಳು ಕಲಿತುಕೊಳ್ಳಬೇಕು‌. ಹೈಕೋರ್ಟ್ ಸೂಚನೆಯ ನಡುವೆಯೂ ಹಿಜಬ್ ಧರಿಸಿ ಬರುವುದು ಸರಿಯಲ್ಲ ಎಂದು ಹೇಳಿದರು. ಇದನ್ನೂ ಓದಿ: ಕೋರ್ಟ್ ತೀರ್ಪು ಬರುವವರೆಗೂ ಮಗಳು ಮನೆಯಲ್ಲೇ ಇರಲಿ: ಮಂಡ್ಯ ಪೋಷಕರು

HIJAB HIGHCOURT

ಕಾನೂನು ಉಲ್ಲಂಘಿಸುವವರನ್ನು ಕ್ಷಮಿಸುವ ಪ್ರಶ್ನೆಯೇ ಇಲ್ಲ. ಶಾಲಾ-ಕಾಲೇಜುಗಳಿಗೆ ಹೊರಗಿನ ಶಕ್ತಿಗಳು ಪ್ರವೇಶ ಮಾಡಬಾರದು. ಹೊರಗಿನವರು ಬಾರದಂತೆ ನೋಡಿಕೊಳ್ಳುವುದು ಪ್ರಾಂಶುಪಾಲರು ಹಾಗೂ ಅಧ್ಯಾಪಕರ ಜವಾಬ್ದಾರಿ. ಯಾರೂ ಯಾರನ್ನು ಟೀಕೆ, ಆರೋಪ ಮಾಡಿ ಗೊಂದಲ ನಿರ್ಮಾಣ ಮಾಡುವುದು ಬೇಡ. ನಾಳೆಯಿಂದ ಪದವಿ ಕಾಲೇಜುಗಳು ಪುನರಾರಂಭವಾಗಲಿವೆ ಎಂದರು.

ಸರ್ಕಾರ ಸಾಲದ ಸುಳಿಯಲ್ಲಿ ಸಿಲುಕಿದೆ ಎಂಬ ಸಿದ್ದರಾಮಯ್ಯ ಆರೋಪ ಕುರಿತು ಪ್ರತಿಕ್ರಿಯಿಸಿ, ಸಿದ್ದರಾಮಯ್ಯ ಆರ್ಥಿಕ ತಜ್ಞರು. ಅವರ ಕಾಲದಲ್ಲಿ ಎಷ್ಟೆಷ್ಟು ಸಾಲ ಮಾಡಿದ್ದಾರೆ. ಸಮಾಜದ ಮೇಲೆ ಎಷ್ಟೆಷ್ಟು ಸಾಲದ ಭಾರ ಹೊರಿಸಿದ್ದಾರೆ ಎಂಬುದರ ಬಗ್ಗೆ ಅವರು ಮಾತನಾಡಬೇಕು. ಸಿದ್ದರಾಮಯ್ಯ ತಮ್ಮ ಬೆನ್ನನ್ನು ನೋಡಿಕೊಳ್ಳಲಿ ಎಂದು ತಿರುಗೇಟು ನೀಡಿದರು. ಇದನ್ನೂ ಓದಿ: ಮುಂದಿನ ವರ್ಷದಿಂದ ಸಮವಸ್ತ್ರ ಗೊಂದಲ ಇಲ್ಲದಂತೆ ಕಾನೂನು : ಬಿ.ಸಿ ನಾಗೇಶ್

Siddaramaiah

ಜಮೀರ್ ಅಹ್ಮದ್‌ ಹೇಳಿಕೆ ಬಗ್ಗೆ ಮಾತನಾಡಿ, ಇದು ಜಮೀರ್ ಅಥವಾ ಮತ್ತೊಬ್ಬರ ಪ್ರಶ್ನೆ ಅಲ್ಲ. ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಹಿಜಬ್ ಹಾಕಲು ಬಿಡಲ್ಲ. ಸರ್ಕಾರ ನಿಗದಿ ಮಾಡಿರುವ ಸಮವಸ್ತ್ರವನ್ನೇ ವಿದ್ಯಾರ್ಥಿಗಳು ಧರಿಸಿ ಬರಬೇಕು ಎಂದು ಸ್ಪಷ್ಟಪಡಿಸಿದರು.

Share This Article
Leave a Comment

Leave a Reply

Your email address will not be published. Required fields are marked *