ಬೆಂಗಳೂರು: ಬಿಜೆಪಿ-ಜೆಡಿಎಸ್ (BJP – JDS) ಒಳ ಒಪ್ಪಂದ ಆಗಿದೆ ಎಂದು ಶಾಸಕ ಪ್ರೀತಂ ಗೌಡ ನೀಡಿದ್ದ ಹೇಳಿಕೆಗೆ ಸಚಿವ ಅಶ್ವಥ್ ನಾರಾಯಣ್ (Ashwath Narayan) ವಿರೋಧ ವ್ಯಕ್ತಪಡಿಸಿದ್ದಾರೆ. ಪ್ರೀತಂ ಗೌಡರ (Preetam Gowda) ಹೇಳಿಕೆ ಖಂಡನೀಯ. ಬೇಜವಾಬ್ದಾರಿಯಿಂದ ಕೂಡಿದೆ ಎಂದು ಪ್ರತಿಕ್ರಿಯಿಸಿದ್ದಾರೆ.
Advertisement
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರೂ ಸಹ ಈ ತರಹದ ಹೇಳಿಕೆಗಳನ್ನ ನೀಡಬಾರದು. ಇದು ತಪ್ಪು ಸಂದೇಶ ರವಾನೆ ಮಾಡುತ್ತೆ. ಜೆಡಿಎಸ್ ಅಥವಾ ಕಾಂಗ್ರೆಸ್ ಇಬ್ಬರೂ ಸಹ ಬಿಜೆಪಿ ಪ್ರತಿಸ್ಪರ್ಧಿಗಳು. ಮೋದಿ ಹೆಸರು ಹೇಳಿಕೊಂಡು ಈ ರೀತಿಯ ಹೇಳಿಕೆ ಕೊಡೋದು ಸರಿಯಲ್ಲ ಎಂದು ವಿರೋಧ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಸಿದ್ದರಾಮನಹುಂಡಿಯಲ್ಲಿ ಕಾರು-ಬೈಕ್ ಡಿಕ್ಕಿಯಿಂದ ಜಗಳ: ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ
Advertisement
Advertisement
ಚುನಾವಣೆ ಕುರಿತು ಪ್ರತಿಕ್ರಿಯಿಸಿದ ಅವರು, ಚುನಾವಣೆ ಪ್ರಜಾಪ್ರಭುತ್ವದ ಹಬ್ಬ. ಜನರ ಬೇಡಿಕೆ, ಆಶೋತ್ತರಗಳನ್ನು ಈಡೇರಿಸುವ ನಿಟ್ಟಿನಲ್ಲಿ ಚುನಾವಣೆ ನಡೆಯುತ್ತೆ. ಇದರಲ್ಲಿ ಎಲ್ಲರೂ ಭಾಗಿಯಾಗ್ತಾರೆ. ನಾವು ಮಾಡಿರೋ ಅಭಿವೃದ್ಧಿ ಕೆಲಸಗಳ ಬಗ್ಗೆ ಜನತೆಗೆ ತಿಳಿಸುತ್ತೇವೆ. ಕಾಂಗ್ರೆಸ್ ಪಕ್ಷದ ಶಕ್ತಿ ಎಲ್ಲಿದೆ ಎಂಬ ಬಗ್ಗೆ ಅಧ್ಯಕ್ಷರಿಗೆ ತಿಳುವಳಿಕೆ ಇಲ್ಲ. 21 ಶತಮಾನ ಜ್ಞಾನ ಆಧಾರಿತ ಶತಮಾನ ಅನ್ನೋದು ಗೊತ್ತಿಲ್ಲ. ಮಾಹಿತಿ ತಂತ್ರಜ್ಞಾನ, ಶಿಕ್ಷಣ, ಬ್ಯಾಂಕಿಂಗ್ ಬಗ್ಗೆ ಏನೂ ಗೊತ್ತಿಲ್ಲ ಎಂದು ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ.
Advertisement
ಡಿಕೆಶಿ ವಿರುದ್ಧ ಹರಿಹಾಯ್ದ ಅಶ್ವಥ್ ನಾರಾಯಣ, ಅವರು ಮನಸ್ಥಿತಿ ಹೇಗಿದೆ ಅನ್ನೋದು ಗೊತ್ತಾಗ್ತಿದೆ. ಈ ಕಾಂಗ್ರೆಸ್ ಪಕ್ಷಕ್ಕೆ ಏನೂ ಗೊತ್ತಿಲ್ಲ. ಈ ವ್ಯಕ್ತಿಗೆ ಯಾವುದೇ ಜ್ಞಾನ ಇಲ್ಲ. ಆನ್ ರೆಕಾರ್ಡ್ ಹೇಳೋದಲ್ಲ, ರೆಕಾರ್ಡ್ ಇಲ್ಲದ ಹಾಗೆ ಹೋಗುತ್ತೆ ಎಂದು ಟಾಂಗ್ ಕೊಟ್ಟಿದ್ದಾರೆ. ಇದನ್ನೂ ಓದಿ: ಮೋದಿ ರೋಡ್ ಶೋಗೆ ಸಿದ್ಧವಾಗಿದೆ ಸ್ಪೆಷಲ್ ಬುಲೆಟ್ ಪ್ರೂಫ್ ವಾಹನ