ನವದೆಹಲಿ: ಹುಬ್ಬಳ್ಳಿ, ಮೈಸೂರು ಹಾಗೂ ಮಂಗಳೂರಿನಲ್ಲಿ ನಡೆಯಲಿರುವ ‘ಬಿಯಾಂಡ್ ಬೆಂಗಳೂರು’ ಸಮಾವೇಶಗಳಿಗೆ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಮತ್ತು ರಾಜೀವ್ ಚಂದ್ರಶೇಖರ್ ಅವರನ್ನು ಐಟಿ-ಬಿಟಿ ಸಚಿವ ಡಾ. ಸಿ.ಎನ್.ಅಶ್ವತ್ಥನಾರಾಯಣ ಅವರು ರಾಜ್ಯ ಸರ್ಕಾರದ ಪರವಾಗಿ ಮಂಗಳವಾರ ಆಹ್ವಾನಿಸಿದರು.
ಸೆ.26ರಂದು ಹುಬ್ಬಳ್ಳಿಯಲ್ಲಿ ಮತ್ತು ಅಕ್ಟೋಬರ್ 19, 20ರಂದು ಮೈಸೂರಿನಲ್ಲಿ ‘ಬಿಯಾಂಡ್ ಬೆಂಗಳೂರು’ ಟೆಕ್ ಸಮಾವೇಶ ನಡೆಯಲಿದೆ. ಇವುಗಳನ್ನು ಕ್ರಮವಾಗಿ ಪ್ರಹ್ಲಾದ್ ಜೋಶಿ ಮತ್ತು ರಾಜೀವ್ ಚಂದ್ರಶೇಖರ್ ಅವರು ಉದ್ಘಾಟಿಸಲಿದ್ದಾರೆ ಎಂದು ಅವರು ತಿಳಿಸಿದರು. ಇದನ್ನೂ ಓದಿ: ಗೋವು ಕಳ್ಳಸಾಗಣೆ ಪ್ರಕರಣ – ಅನುಬ್ರತಾ ಮೊಂಡಲ್‌ಗೆ ಜಾಮೀನು ನೀಡಿ, ಇಲ್ಲವೇ..: ನ್ಯಾಯಾಧೀಶರಿಗೆ ಬೆದರಿಕೆ ಪತ್ರ
Advertisement
Advertisement
ಆಹ್ವಾನವನ್ನು ಸ್ವೀಕರಿಸಿದ ಕೇಂದ್ರ ಸಚಿವರು ಸಮಾವೇಶಕ್ಕೆ ಬರುವುದಾಗಿ ಹೇಳಿದರು. ಈ ಸಂದರ್ಭದಲ್ಲಿ ತೋಟಗಾರಿಕೆ ಸಚಿವ ಮುನಿರತ್ನ ಕೂಡ ಇದ್ದರು.
Advertisement
ಬೆಂಗಳೂರು ನಗರದ ಆಚೆಗೂ ರಾಜ್ಯದ ವಿವಿಧ ಭಾಗಗಳಲ್ಲಿ ಕೈಗಾರಿಕೆಗಳು ನೆಲೆಯೂರುವಂತೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇದರ ಭಾಗವಾಗಿ, ನವೆಂಬರ್‌ನಲ್ಲಿ ನಡೆಯಲಿರುವ ಬೆಂಗಳೂರು ತಂತ್ರಜ್ಞಾನ ಸಮಾವೇಶಕ್ಕೂ (ಬಿಟಿಎಸ್) ಮುನ್ನ ಹುಬ್ಬಳ್ಳಿ, ಮೈಸೂರು ಮತ್ತು ಮಂಗಳೂರಿನಲ್ಲಿ ‘ಬಿಯಾಂಡ್ ಬೆಂಗಳೂರು’ ಸಮಾವೇಶಗಳನ್ನು ನಡೆಸಲಾಗುವುದು ಎಂದು ಅವರು ಮಾಹಿತಿ ನೀಡಿದರು. ಇದನ್ನೂ ಓದಿ: ಪ್ರವಾದಿ ಅವಹೇಳನ – BJPಯಿಂದ ಶಾಸಕ ರಾಜಾ ಸಿಂಗ್ ಅಮಾನತು
Advertisement
ಈ ಸಮಾವೇಶಗಳಲ್ಲಿ ಉದ್ಯಮಗಳ ಸ್ಥಾಪನೆ ಮತ್ತು ಹೂಡಿಕೆಗೆ ಇರುವ ಅವಕಾಶಗಳ ಬಗ್ಗೆ ವಿಸ್ತೃತವಾಗಿ ಚರ್ಚಿಸಲಾಗುವುದು. ಕಾರ್ಯಕ್ರಮದಲ್ಲಿ ಅಪಾರ ಸಂಖ್ಯೆಯ ಉದ್ಯಮಿಗಳು ಮತ್ತು ಹೂಡಿಕೆದಾರರು ಭಾಗವಹಿಸಲಿದ್ದಾರೆ ಎಂದು ವಿವರಿಸಿದರು.