ಬೆಂಗಳೂರು: ಪ್ರಸಕ್ತ ಸಾಲಿನ ಸಿಇಟಿ ಪರೀಕ್ಷೆಗೆ ದಿನಾಂಕ ಪ್ರಕಟ ಮಾಡಲಾಗಿದೆ. ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದು, ವೇಳಾಪಟ್ಟಿ ಪ್ರಕಟಿಸಿದ್ದಾರೆ.
ಜೂನ್ 16, 17, 18ರಂದು ಸಿಇಟಿ ಪರೀಕ್ಷೆ ನಡೆಯಲಿದೆ. ಏಪ್ರಿಲ್ 5ರಿಂದ ಆನ್‍ಲೈನ್ ಮೂಲಕ ವಿದ್ಯಾರ್ಥಿಗಳು ಅರ್ಜಿ ಸಲ್ಲಿಕೆ ಮಾಡಬಹುದಾಗಿದ್ದು, ಏಪ್ರಿಲ್ 20ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ಏಪ್ರಿಲ್ 22ವರೆಗೆ ಶುಲ್ಕ ಪಾವತಿಗೆ ಕೊನೆದಿನ ನಿಗದಿ ಮಾಡಲಾಗಿದೆ ಎಂದು ತಿಳಿಸಿದರು.
Advertisement
Advertisement
ಜೂನ್ 16 ರಂದು ಜೀವಶಾಸ್ತ್ರ ಹಾಗೂ ಗಣಿತ ವಿಷಯಗಳ ಪರೀಕ್ಷೆ ನಡೆಯಲಿದೆ. ಜೂನ್ 17 ರಂದು ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ ಪರೀಕ್ಷೆ ನಡೆಯಲಿವೆ. ಜೂನ್ 18ರಂದು ಗಡಿನಾಡು ಮತ್ತು ಹೊರನಾಡು ಕನ್ನಡಿಗರಿಗೆ ಕನ್ನಡ ಪರೀಕ್ಷೆ ನಡೆಯಲಿದೆ ಎಂದರು. ಇದನ್ನೂ ಓದಿ: SSLC ಪರೀಕ್ಷೆಗೆ ಬರೆಯಲು ಬಂದ 6 ನಕಲಿ ವಿದ್ಯಾರ್ಥಿಗಳು ಪೊಲೀಸರ ವಶ
Advertisement
ಮೇ 2ರಿಂದ 6ರವರೆಗೂ ವಿದ್ಯಾರ್ಥಿಗಳು ಅರ್ಜಿಯಲ್ಲಿನ ಲೋಪ ಸರಿಪಡಿಸಲು ಅವಕಾಶ ನೀಡಲಾಗಿದೆ. ಮೇ 30ರಿಂದ ಪರೀಕ್ಷೆ ಪ್ರವೇಶ ಪತ್ರ ಡೌನ್‍ಲೋಡ್ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಬಾಗಲಕೋಟೆಯಲ್ಲಿ ಹಿಜಬ್‍ಗಾಗಿ ಪರೀಕ್ಷೆ ಕೈ ಬಿಟ್ಟ ವಿದ್ಯಾರ್ಥಿನಿ