ಧಾರವಾಡ: ಪಂಚರಾಜ್ಯ ಚುನಾವಣೆ ಫಲಿತಾಂಶದಲ್ಲಿ ನಾವು ಖಂಡಿತ ಫೋರ್ ಹೊಡೆಯುತ್ತೆವೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ಹೇಳಿದ್ದಾರೆ.
ಧಾರವಾಡದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಐದು ರಾಜ್ಯದಲ್ಲಿ ನಾಲ್ಕು ರಾಜ್ಯದ ಫಲಿತಾಂಶದ ಭರವಸೆ ಇದೆ. ನಾಲ್ಕು ರಾಜ್ಯದಲ್ಲಿ ನಮ್ಮ ಸರ್ಕಾರ ಆಗುತ್ತದೆ. ಒಂದು ರಾಜ್ಯದಲ್ಲಿ ಮಾತ್ರ ಹಿನ್ನೆಡೆ ಇದೆ. ಪ್ರತಿಪಕ್ಷ ಕಾಂಗ್ರೆಸ್ ಪರಿಸ್ಥಿತಿ ಏನಾಗಿದೆ ಎಲ್ಲರಿಗೂ ಗೊತ್ತಿದೆ. ಅದು ರಾಷ್ಟ್ರೀಯ ಪಕ್ಷದ ಸ್ವರೂಪವನ್ನೇ ಕಳೆದುಕೊಂಡಿದೆ ಎಂದರು. ಇದನ್ನೂ ಓದಿ: ದೇಶಾದ್ಯಂತ ಸುದ್ದಿಯಾಗಿದ್ದ ಹತ್ರಾಸ್, ಲಖೀಂಪುರದಲ್ಲಿ ಬಿಜೆಪಿಗೆ ಮುನ್ನಡೆ
ಜನ ಸಹ ಕಾಂಗ್ರೆಸ್ ಪಕ್ಷದ ಮೇಲೆ ಭರವಸೆ ಇಟ್ಟಿಲ್ಲ. ನಮ್ಮ ರಾಜ್ಯದಲ್ಲಿಯೂ ಕಾಂಗ್ರೆಸ್ ಇರುವುದಿಲ್ಲ. 2023ಕ್ಕೆ ನಾವು ಮತ್ತೊಮ್ಮೆ ಅಧಿಕಾರಕ್ಕೆ ಬರುತ್ತೇವೆ. ಪಂಜಾಬ್‍ನಲ್ಲಿ ನಮ್ಮದು ಪಾಲ್ಗೊಳ್ಳುವಿಕೆ ಹೆಚ್ಚಿರಲಿಲ್ಲ, ಅಲ್ಲಿನ ಜನಾಭಿಪ್ರಾಯ ಸ್ವೀಕರಿಸುತ್ತೇವೆ. ಮುಂದಿನ ದಿನಗಳಲ್ಲಿಯೂ ಪಂಜಾಬ್ ಸಹ ಪಡೆಯುತ್ತೇವೆ ಎಂದು ಹೇಳಿದರು ಇದನ್ನೂ ಓದಿ: ಉತ್ತರ ಪ್ರದೇಶ ಅಂಚೆ ಮತ ಎಣಿಕೆ: ಆರಂಭದಲ್ಲಿ ಬಿಜೆಪಿ ಮುನ್ನಡೆ