ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (H D Kumaraswamy) ಅವರ ವಿರುದ್ಧ ಕಾಂಗ್ರೆಸ್ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಬಿಜೆಪಿ ಶಾಸಕ ಅಶ್ವಥ್ ನಾರಾಯಣ್ (Ashwath Narayan) ಕಿಡಿಕಾರಿದರು.
ವಿಧಾನಸೌಧದಲ್ಲಿ ಕುಮಾರಸ್ವಾಮಿ ಅವರ ಜಮೀನು ಒತ್ತುವರಿ ತೆರವು ಕಾರ್ಯಾಚರಣೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ದ್ವೇಷದ ರಾಜಕಾರಣ ಮಾಡುವವರು ಅದರ ಬಗ್ಗೆ ಪ್ರತಿಕ್ರಿಯೆ ನೀಡಬೇಕು. ಇವರಿಗೆ ಅಧಿಕಾರ ಕೊಟ್ಟು, ಪೆನ್ನು ಪೇಪರ್ ಕೊಟ್ಟಿದ್ದಾರೆ. ಅದಕ್ಕೆ ಇವರು ಹೇಗೆ ಬೇಕೋ ಹಾಗೆ ಬರೆದುಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು. ಇದನ್ನೂ ಓದಿ: ಜಮೀನು ತೆರವು ವಿಚಾರ; ಮಿಕ್ಕಿದ್ದಕ್ಕೆಲ್ಲಾ ದಾಖಲೆ ಇರುತ್ತೆ, ಇದಕ್ಕೆ ಇರಲ್ವಾ? – ಹೆಚ್‌ಡಿಕೆ ವಿರುದ್ಧ ಪ್ರಿಯಾಂಕ್ ಖರ್ಗೆ ವ್ಯಂಗ್ಯ
ಇವರದ್ದು ದ್ವೇಷದ ರಾಜಕಾರಣ. ಕಾಂಗ್ರೆಸ್‌ನವರೇನೂ ಪ್ರೀತಿಯ ರಾಜಕಾರಣ ಮಾಡ್ತಾರಾ? ದ್ವೇಷ, ರಾಜಕೀಯ ಪ್ರೇರಿತವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ನಿಮ್ಮನ್ನು ಭಾರತದಲ್ಲಿ ನೋಡಲು ಕಾತರದಿಂದ ಕಾಯುತ್ತಿದ್ದೇವೆ: ಸುನಿತಾ ವಿಲಿಯಮ್ಸ್‌ಗೆ ಮೋದಿ ಪತ್ರ