ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂ. ಹಗರಣವನ್ನು (Valmiki Corporation Corruption Scam) ಮುಚ್ಚಿ ಹಾಕೋದಕ್ಕಾಗಿ ಕೆಪಿಸಿಸಿ ಕಚೇರಿಯಲ್ಲಿ (KPCC Office) ಸಭೆ ನಡೆಸಲು ರಾಹುಲ್ ಗಾಂಧಿ ಬಂದಿದ್ದಾರಾ? ಅಥವಾ ಮುಖ್ಯಮಂತ್ರಿಯವರ ರಾಜೀನಾಮೆ ಪಡೆಯಲು ಸಭೆ ಕರೆದಿದ್ದೀರಾ? ಎಂದು ಮಾಜಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್ ಅಶ್ವಥ್ ನಾರಾಯಣ್ (Ashwath Narayan) ಅವರು ಪ್ರಶ್ನಿಸಿದರು.
Advertisement
ಮಲ್ಲೇಶ್ವರಂನ ಬಿಜೆಪಿ ರಾಜ್ಯ ಕಾರ್ಯಾಲಯದ ಜಗನ್ನಾಥ ಭವನದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ದಲಿತರ ಹಣವನ್ನು ಲೂಟಿ ಹೊಡೆದ ಸರ್ಕಾರ ಇದು. ನೀವು ಈ ಸರ್ಕಾರದ ರಾಜೀನಾಮೆ ಪಡೆಯಲು ಬಂದಿದ್ದೀರಾ? ಎಂದು ರಾಹುಲ್ ಗಾಂಧಿ ಅವರಿಗೆ ಕೇಳಿದರು. ಇದನ್ನೂ ಓದಿ: ಪೆನ್‌ಡ್ರೈವ್ ಹಂಚಿದವರು ತನಿಖಾಧಿಕಾರಿ ಎದುರೇ ಸಂಭ್ರಮಾಚರಣೆ ಮಾಡ್ತಾರೆ: ವಕೀಲ ಗೋಪಾಲಗೌಡ ಆರೋಪ
Advertisement
ನಿಗಮದ ಅಧ್ಯಕ್ಷ ಬಸವನಗೌಡ ದದ್ದಲ್ (Basavanagouda Daddal) ರಾಜೀನಾಮೆ ಪಡೆಯುತ್ತೀರಾ? ಪಕ್ಷದಿಂದ ಉಚ್ಚಾಟಿಸುತ್ತೀರಾ? ಅವರನ್ನ ಬಂಧಿಸುತ್ತೀರಾ? ಸಾಕ್ಷಿ ನಾಶ ಮಾಡುವ ಬಗ್ಗೆ ಮಹತ್ವದ ಸಭೆ ನಡೆಸಿದ್ದ ಸಚಿವ ಶರಣಪ್ರಕಾಶ್ ಪಾಟೀಲರನ್ನು ಬಂಧಿಸುವಿರಾ? ಅವರ ಉಚ್ಚಾಟನೆ ಮಾಡುವಿರಾ? ಎಂದು ಪ್ರಶ್ನೆಗಳ ಮಳೆ ಸುರಿಸಿದರು. ಇದನ್ನೂ ಓದಿ: ಕಂಗನಾಗೆ ಕಪಾಳಮೋಕ್ಷ ಮಾಡಿದ್ದ CISF ಮಹಿಳಾ ಸಿಬ್ಬಂದಿ ಕರ್ತವ್ಯದಿಂದ ಅಮಾನತು – ಬಳಿಕ ಅರೆಸ್ಟ್!
Advertisement
Advertisement
ಹಗರಣದ ಹಿಂದೆ ದೊಡ್ಡ ಜಾಲವೇ ಇದ್ದಂತಿದೆ, ಎಲ್ಲರೂ ಅನುಕೂಲ ಪಡೆದುಕೊಂಡಂತೆ ಕಾಣುತ್ತಿದೆ. ಹಾಗಾಗಿ ಎಲ್ಲ ಸಂದೇಹಗಳಿಗೆ ಉತ್ತರ ಕೊಟ್ಟು ಕ್ರಮ ವಹಿಸಬೇಕು. ಕರ್ಮಕಾಂಡ ಮಾಡಿ ಭಂಡತನದಲ್ಲಿ ಏನೂ ಉತ್ತರ ಕೊಡದೇ ನಾಗೇಂದ್ರ (BN Nagendra) ಅವರ ರಾಜೀನಾಮೆಯನ್ನು ಅತ್ಯಂತ ಕಷ್ಟಪಟ್ಟು ಪಡೆದಿದ್ದಾರೆ. ಅವರ ಬಂಧನವೂ ಆಗಬೇಕಿತ್ತು, ಬಂಧಿಸುವ ಕಾರ್ಯವನ್ನು ಸಿಬಿಐನವರಿಗೆ ಬಿಡಿ ಎಂದು ಆಗ್ರಹಿಸಿದರು. ಇದನ್ನೂ ಓದಿ: ಇವಿಎಂ ಸತ್ತಿದ್ಯಾ ಅಥವಾ ಬದುಕಿದ್ಯಾ? – ವಿಪಕ್ಷ ನಾಯಕರನ್ನ ಲೇವಡಿ ಮಾಡಿದ ಮೋದಿ
ಇಡೀ ಸರ್ಕಾರವೇ ಭ್ರಷ್ಟಾಚಾರದಲ್ಲಿದೆ:
ರಾಜ್ಯದ ಇಡೀ ಕಾಂಗ್ರೆಸ್ ಸರ್ಕಾರವೇ ಭ್ರಷ್ಟಾಚಾರದಲ್ಲಿದೆ. ದಲಿತರ ಹಣ ಬೇರೆ ರಾಜ್ಯಕ್ಕೆ ವರ್ಗಾವಣೆ ಆಗಿದೆ. ಸಾಕ್ಷಿ ನಾಶಕ್ಕೆ ನಿಮ್ಮಲ್ಲಿ ಏನು ಉತ್ತರ ಇದೆ? ಮುಖ್ಯಮಂತ್ರಿಗಳಿಗೆ ಕಿಂಚಿತ್ತೂ ನೈತಿಕತೆ, ಮೌಲ್ಯ ಇದ್ದರೆ, ಏನಾದರೂ ನಿಮ್ಮ ಅನುಭವಕ್ಕೆ ಗೌರವ ಇದ್ದರೇ ಮೊದಲು ರಾಜೀನಾಮೆ ಕೊಡಿ. ನಿಮ್ಮ ಇಲಾಖೆಯಡಿಯಲ್ಲೇ ಹಗರಣ ಆಗಿದೆ. ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಿ ಅಶ್ವಥ್ ನಾರಾಯಣ್ ಒತ್ತಾಯಿಸಿದರು.
ಎಲ್ಲರ ಭಾಗಿತ್ವ, ಸರ್ಕಾರದ ಸಹಮತ ಇಲ್ಲದೇ, ಎಲ್ಲರ ಗಮನಕ್ಕೆ ಬಾರದೇ ರಾಜ್ಯದ ಖಜಾನೆಯಿಂದ ಹಣ ವರ್ಗಾವಣೆ ಮಾಡಲು ಹೇಗೆ ಸಾಧ್ಯ? ಮುಖ್ಯ ಲೆಕ್ಕಾಧಿಕಾರಿ ಪರಶುರಾಮ್ ಅವರು ತಮ್ಮ ಅಫಿಡವಿಟ್‍ನಲ್ಲಿ ಸಾಕ್ಷಿ ನಾಶ ಆಗದಂತೆ ನೋಡಿಕೊಳ್ಳಲು ಕೋರಿದ್ದಾರೆ. ಮೇ 25ನೇ ತಾರೀಕು ವೈದ್ಯಕೀಯ ಸಚಿವ ಶರಣಪ್ರಕಾಶ್ ಪಾಟೀಲ್ ಅವರ ಕೊಠಡಿಯಲ್ಲಿ ಈ ಹಗರಣಕ್ಕೆ ಸಂಬಂಧಪಟ್ಟಂತೆ ಸಚಿವ ನಾಗೇಂದ್ರ ಹಾಗೂ ವಾಲ್ಮೀಕಿ ನಿಗಮದ ಅಧ್ಯಕ್ಷ- ಶಾಸಕ ಬಸವನಗೌಡ ದದ್ದಲ್ ಜೊತೆ ಈ ಪ್ರಕರಣದ ಚರ್ಚೆ ನಡೆದಿದೆ. ಆದ್ದರಿಂದ ಆ ಸಭೆಯ ಸಿಸಿಟಿವಿ ಫೂಟೇಜ್ ಅನ್ನೂ ಸಂರಕ್ಷಿಸುವಂತೆ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿರುವುದಾಗಿ ತಿಳಿಸಿದರು.