ರಾಜಧಾನಿಯಲ್ಲಿ ದೋಷಗಳಿದ್ದರೆ ಸರಿಪಡಿಸೋಣ ಬೆದರಿಕೆ ಬೇಡ: ಅಶ್ವಥ್ ನಾರಾಯಣ

Public TV
2 Min Read
ASHWATH NARYANA 1

ಬೆಂಗಳೂರು: ರಾಜಧಾನಿಯಲ್ಲಿ ಮೂಲಸೌಕರ್ಯ ವಿಚಾರದಲ್ಲಿ ಚಿಕ್ಕಪುಟ್ಟ ನ್ಯೂನತೆ ಇರಬಹುದು. ಇದನ್ನು ಉದ್ಯಮಿಗಳು ಸರ್ಕಾರದ ಗಮನಕ್ಕೆ ತರುವ ಕೆಲಸ ಮಾಡಲಿ. ಅದನ್ನು ಬಿಟ್ಟು ಬೆದರಿಕೆ ಹಾಕುವ ಮಟ್ಟಕ್ಕೆ ಹೋಗಬಾರದು ಎಂದು ಐಟಿ ಮತ್ತು ಬಿಟಿ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ ಹೇಳಿದ್ದಾರೆ.

Vidah Sauda state legislature building Karnataka Bengaluru

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸ್ಟಾರ್ಟಪ್ ಸೇರಿದಂತೆ ಯಾವುದೇ ಉದ್ದಿಮೆಗಳಿಗೆ ಬೆಂಗಳೂರಿನಲ್ಲಿ ಇರುವಂತಹ ಮೂಲಸೌಕರ್ಯ ಮತ್ತು ಕಾರ್ಯ ಪರಿಸರ ಜಾಗತಿಕ ಮಟ್ಟದಲ್ಲಿ ಎಲ್ಲಿಯೂ ಇಲ್ಲ. ಹೀಗಾಗಿಯೇ ಬೆಂಗಳೂರು ದೇಶದ ಸ್ಟಾರ್ಟಪ್ ರಾಜಧಾನಿ ಎನಿಸಿ ಕೊಂಡಿದೆ. ನವೋದ್ಯಮಿಯೊಬ್ಬರು ಬೆಂಗಳೂರಿನಲ್ಲಿ ಮೂಲಸೌಕರ್ಯ ಕೊರತೆ ಇದೆ ಎಂದು ಟ್ವೀಟ್ ಮಾಡಿ, ಅಸಮಾಧಾನ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಸಚಿವರು ಹೀಗೆಂದಿದ್ದಾರೆ. ಇದನ್ನೂ ಓದಿ: ಜಟ್ಕಾ ಮೀಟ್ ಅಂಗಡಿ ತೆರೆದು ಹಿಂದೂ ಧರ್ಮದ ಯುವಕರು ಆರ್ಥಿಕವಾಗಿ ಬಲಿಷ್ಠರಾಗಿ: ಕಾಳಿ ಸ್ವಾಮಿ

ಉದ್ಯಮಿಗಳಿಗೆ ಸರ್ಕಾರವು ಯಥೇಚ್ಛ ಅನುಕೂಲಗಳನ್ನು ಒದಗಿಸುತ್ತಿದೆ. ಉದ್ಯಮಿಗಳಿಗೆ ಕೂಡ ಮೊದಲು ನಾವು ಭಾರತೀಯರು ಎನ್ನುವ ಭಾವನೆಯನ್ನು ಬೆಳೆಸಿಕೊಳ್ಳಬೇಕು. ಗುತ್ತಿಗೆದಾರರ ಎಂದಿದ್ದಾರೆ.

ಸಂಘದ ಅಧ್ಯಕ್ಷ ಕೆಂಪಣ್ಣ ಅವರು ಮಾಡಿರುವ ಭ್ರಷ್ಟಾಚಾರ ಆರೋಪದ ಬಗ್ಗೆ ಕೇಳಿದ ಪ್ರಶ್ನೆಗೆ ಖಾರವಾಗಿ ಉತ್ತರಿಸಿದ ಸಚಿವರು, ಕೆಂಪಣ್ಣನವರು ಎಷ್ಟು ವರ್ಷಗಳಿಂದ ಗುತ್ತಿಗೆದಾರರಾಗಿದ್ದಾರೆ ಎನ್ನುವುದು ನನಗೆ ಗೊತ್ತು. ಇಷ್ಟು ವರ್ಷ ಸುಮ್ಮನಿದ್ದ ಅವರು ಈಗಷ್ಟೇ ಮಾತನಾಡುತ್ತಿದ್ದಾರೆ ಅಂದರೆ ಏನರ್ಥ? ಇವರ ಹಿಂದೆ ಯಾರೆಲ್ಲ ಇದ್ದಾರೆ ಎನ್ನುವುದನ್ನು ಯಾರಬೇಕಾದರೂ ಊಹಿಸಬಹುದು. ಸಮಾಜದಲ್ಲಿ ಭ್ರಷ್ಟಾಚಾರ ಇಲ್ಲವೇ ಇಲ್ಲ ಎನ್ನಲಾರೆ. ಆದರೆ ಇದು 70 ವರ್ಷ ದೇಶವನ್ನು ಆಳಿದ ಕಾಂಗ್ರೆಸ್ ಪಕ್ಷ ಹುಟ್ಟು ಹಾಕಿದ ರೋಗಗ್ರಸ್ತ ಸಂಸ್ಕೃತಿ. ಇದು ಹೆಮ್ಮರವಾಗಿ ಬೆಳೆದಿದೆ. ಇದನ್ನು ಕಿತ್ತು ಹಾಕಲೆಂದೇ ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ಪಾರದರ್ಶಕತೆ ಮತ್ತು ಉತ್ತರದಾಯಿತ್ವವನ್ನು ತರಲಾಗುತ್ತಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ಕಾಶ್ಮೀರಿ ಪಂಡಿತರನ್ನು ಇನ್ನು ಯಾರಿಂದಲೂ ಓಡಿಸಲು ಸಾಧ್ಯವಿಲ್ಲ: ಮೋಹನ್ ಭಾಗವತ್

ಭ್ರಷ್ಟಾಚಾರವನ್ನು ಹತ್ತಿಕ್ಕಲೆಂದೇ ಡಿಜಿಟಲ್ ವ್ಯವಹಾರ ವ್ಯವಸ್ಥೆ ತರಲಾಗುತ್ತಿದೆ. ಕಳೆದ ಏಳೆಂಟು ವರ್ಷಗಳಲ್ಲಿ ಸಾಕಷ್ಟು ಸುಧಾರಣೆ ಆಗಿದೆ. ಕಾಂಗ್ರೆಸ್ ಪಕ್ಷಕ್ಕೆ ಭ್ರಷ್ಟಾಚಾರದ ವಿರುದ್ಧ ಮಾತನಾಡುವ ಕನಿಷ್ಠ ನೈತಿಕತೆಯೂ ಇಲ್ಲ. ಹೀಗಾಗಿಯೇ ಜನರು ಆ ಪಕ್ಷವನ್ನು ಮೂಲೆಗೆ ತಳ್ಳಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *