ಬೆಂಗಳೂರು: ಯಾವ ಸಮಯದಲ್ಲಿ ಏನು ಮಾತಾಡಬೇಕು ಅನ್ನೋ ಸೂಕ್ಷ್ಮತೆಯನ್ನು ಕಾಂಗ್ರೆಸ್ ಪಕ್ಷ ಕಳೆದುಕೊಂಡಿದೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಉಕ್ರೇನ್‍ನಲ್ಲಿರುವ ಕನ್ನಡಿಗರ ರಕ್ಷಣೆ ಮಾಡುವುದರಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎನ್ನುವ ಕಾಂಗ್ರೆಸ್ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅಶ್ವಥ್ ನಾರಾಯಣ ಕಾಂಗ್ರೆಸ್ ಯಾವಾಗಲೂ ರಾಜಕೀಯ ಪ್ರೇರಿತ ಹೇಳಿಕೆ ಕೊಡುವುದು ಅವರ ಕೆಲಸ ಎಂದು ಕಿಡಿಕಾರಿದರು.
Advertisement
ಕಾಂಗ್ರೆಸ್ ಪಕ್ಷ ಯಾವಾಗಲೂ ಜವಾಬ್ದಾರಿಯ ಹೇಳಿಕೆ ಕೊಡುವುದಿಲ್ಲ. ಯಾವಾಗ ಏನು ಹೇಳಿಕೆ ಕೊಡಬೇಕು ಅನ್ನೋ ಸೂಕ್ಷ್ಮತೆ ಕೂಡಾ ಕಾಂಗ್ರೆಸ್ ಕಳೆದುಕೊಂಡಿದೆ. ಭಾರತ ಸರ್ಕಾರ ಉತ್ತಮವಾಗಿ ಕಾರ್ಯಾಚರಣೆ ಮಾಡುತ್ತಿದೆ. ಭಾರತ ಸರ್ಕಾರ ಸುತ್ತಮುತ್ತಲ ದೇಶಗಳ ಜೊತೆ ಮಾತುಕತೆ ನಡೆಸುತ್ತಿದೆ. 2 ಸಾವಿರ ಭಾರತೀಯರನ್ನು ಈಗಾಗಲೇ ವಾಪಸ್ ಕರೆ ತಂದಿದೆ ಎಂದು ಕಾಂಗ್ರೆಸ್‍ಗೆ ತಿರುಗೇಟು ಕೊಟ್ಟರು. ಇದನ್ನೂ ಓದಿ: ನೀಟ್ ವ್ಯವಸ್ಥೆ ಬಡವರ ವೈದ್ಯ ಶಿಕ್ಷಣದ ಕನಸು ನುಚ್ಚುನೂರು ಮಾಡುತ್ತಿದೆ: ಕುಮಾರಸ್ವಾಮಿ
Advertisement
Advertisement
ರಷ್ಯಾ-ಉಕ್ರೇನ್ ಪ್ರಧಾನಿಗಳ ಜೊತೆಯೂ ನಮ್ಮ ಪ್ರಧಾನಿ ಮೋದಿ ಮಾತುಕತೆ ನಡೆಸಿದ್ದಾರೆ. ಭಾರತೀಯರ ರಕ್ಷಣೆಗೆ ಎಲ್ಲಾ ಕ್ರಮವಹಿಸುತ್ತಿದ್ದಾರೆ. ಭಾರತೀಯರ ರಕ್ಷಣೆಗೆ 4 ಕೇಂದ್ರ ಮಂತ್ರಿಗಳು ಹೋಗಿದ್ದಾರೆ. ಪ್ರಧಾನಿಗಳು ಖುದ್ದು ಮೇಲ್ ಉಸ್ತುವಾರಿ ಮಾಡುತ್ತಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಮೈದುನನ ಮೃತದೇಹವನ್ನಾದರೂ ನಮಗೆ ನೀಡಿ: ನವೀನ್ ಅತ್ತಿಗೆ ಕಣ್ಣೀರು
Advertisement
ಸದ್ಯ ಉಕ್ರೇನ್‍ನಲ್ಲಿ ಯುದ್ಧ ನಡೆಯುತ್ತಿದೆ. ಹೀಗಾಗಿ ರಕ್ಷಣೆಗೆ ಸಮಸ್ಯೆಯಾಗುತ್ತಿದೆ. ಎಲ್ಲರ ಜೀವ ಉಳಿಸಲು ನಮ್ಮ ಸರ್ಕಾರ ಆದ್ಯತೆ ನೀಡಿದೆ ಎಂದು ತಿಳಿಸಿದರು.
ನಮ್ಮ ರಾಜ್ಯದಲ್ಲೂ ನೋಡಲ್ ಅಧಿಕಾರಿ ನೇಮಕ ಮಾಡಲಾಗಿದೆ. ಸಿಎಂ ಕೂಡಾ ಈ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ. ಎಲ್ಲರನ್ನು ಕರೆದುಕೊಂಡು ಬರುವ ಕೆಲಸ ನಮ್ಮ ಸರ್ಕಾರ ಮಾಡಲಿದ್ದು, ಕಾಂಗ್ರೆಸ್ ರಾಜಕೀಯ ಮಾಡುವುದು ಬಿಡಲಿ ಎಂದು ವಾಗ್ದಾಳಿ ನಡೆಸಿದರು.