ರಾಮನಗರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ದೇವರು ಆರೋಗ್ಯ, ಆಯಸ್ಸು ಕೊಡಲಿ. ಅವರು ನೂರು ಕಾಲ ಬದುಕಿ ಬಾಳಲಿ ಎಂದು ಸಚಿವ ಅಶ್ವಥ್ ನಾರಾಯಣ ಹೇಳಿದ್ದಾರೆ.
Advertisement
ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ದಿನ ಹೆಚ್ಚಾಗುತ್ತಿದ್ದು, ಕೊರೊನಾ ನಿಯಂತ್ರಿಸಲು ಸರ್ಕಾರ ಮುಂಬೈ ಮಾದರಿ ಲಾಕ್‍ಡೌನ್ ಜಾರಿಗೊಳಿಸಲಿದೆ ಎಂಬುವುದರ ಬಗ್ಗೆ ಇಂದು ರಾಮನಗರದ ಮಾಗಡಿಯ ಚಿಕ್ಕಕಲ್ಯಾ ಗ್ರಾಮದಲ್ಲಿ ಮಾತನಾಡಿದ ಅವರು, ಸಿಎಂ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಪ್ರತಿನಿತ್ಯ ಸಭೆ ನಡೆಯುತ್ತಿದೆ. ಪ್ರತಿದಿನದ ಸ್ಥಿತಿ-ಗತಿ ಗಮನದಲ್ಲಿಟ್ಟುಕೊಂಡು ಸಿಎಂ ಮುಂದಿನ ನಿರ್ಧಾರ ಕೈಗೊಳ್ಳುತ್ತಾರೆ ಎಂದಿದ್ದಾರೆ. ಇದನ್ನೂ ಓದಿ: ಕೋವಿಡ್ ಹೆಚ್ಚಾದ್ರೆ ಪಶ್ಚಿಮ ಬಂಗಾಳದಲ್ಲಿ ಶಾಲಾ-ಕಾಲೇಜ್ ಬಂದ್: ಮಮತಾ ಬ್ಯಾನರ್ಜಿ
Advertisement
Advertisement
ಮೇಕೆದಾಟು ವಿಚಾರವಾಗಿ ಹೋರಾಟ ಮಾಡಲು ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನ ಸ್ಯಾಂಕಿ ಟ್ಯಾಂಕ್ ನಲ್ಲಿ ವಾಕಿಂಗ್ ಅಭ್ಯಾಸ ಮಾಡುತ್ತಿರುವ ವಿಚಾರವಾಗಿ ಮಾತನಾಡಿದ ಅವರು, ಡಿಕೆಶಿ ವಾಕ್ ಮಾಡುತ್ತಿದ್ದಾರೆ, ಅದು ನಮ್ಮ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಪಾರ್ಕ್‍ನಲ್ಲಿ ವಾಕಿಂಗ್ ಮಾಡುತ್ತಿದ್ದಾರೆ. ಅವರ ಆರೋಗ್ಯ ಸದಾ ಚೆನ್ನಾಗಿರಲಿ. ಭಗವಂತ ಅವರಿಗೆ ಆರೋಗ್ಯ, ಆಯಸ್ಸು ನೀಡಲಿ. ಅವರು ನೂರುಕಾಲ ಬದುಕಿ ಬಾಳಲಿ ಎಂದು ಹಾರೈಸುತ್ತೇನೆ ಎಂದು ಹೇಳಿದ್ದಾರೆ.
Advertisement
ಮೇಕೆದಾಟು ಯೋಜನೆ ಕುರಿತಂತೆ ಕಾಂಗ್ರೆಸ್ ಪಾದಯಾತ್ರೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ನಮ್ಮ ಸರ್ಕಾರ ರಾಜ್ಯ – ಕೇಂದ್ರದಲ್ಲಿ ಈ ಯೋಜನೆಗೆ ಬದ್ಧವಾಗಿದೆ. ಈ ಯೋಜನೆ ಬಿಜೆಪಿ ಸರ್ಕಾರದಿಂದ ಮಾತ್ರ ಆಗಲಿದೆ. ಯಡಿಯೂರಪ್ಪನವರು ಸಿಎಂ ಆಗಿದ್ದಾಗಲೂ ಹೇಳಿದ್ದರೂ, ಈಗಿನ ಸಿಎಂ ಬಸವರಾಜ್ ಬೊಮ್ಮಾಯಿಯವರು ಯೋಜನೆ ಬಗ್ಗೆ ಹೇಳಿದ್ದಾರೆ. ಈಗಾಗಲೇ ಐದು ಬಾರಿ ಸಂಬಂಧಿಸಿದ ಕೇಂದ್ರ ಸಚಿವರನ್ನು ಭೇಟಿ ಮಾಡಿದ್ದಾರೆ. ಆದರೆ ಈಗ ಕಾಂಗ್ರೆಸ್‍ನವರು ಪಾದಯಾತ್ರೆ ಮಾಡುವುದು ಸರಿಯಲ್ಲ. ಸರ್ಕಾರ ಯೋಜನೆಯ ಬಗ್ಗೆ ಕ್ರಮವಹಿಸದಿದ್ದರೆ ಪಾದಯಾತ್ರೆ ಮಾಡಲಿ. ಆದರೆ ನಮ್ಮ ಸರ್ಕಾರ ಪ್ರತಿ ಹಂತದಲ್ಲಿಯೂ ಕ್ರಮವಹಿಸುತ್ತಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕೋವಿಡ್-19 ಪ್ರಕರಣಗಳು ಏರಿಕೆಯಾಗಿದೆ, ಆದ್ರೆ ಆತಂಕ ಪಡಬೇಡಿ: ಅರವಿಂದ್ ಕೇಜ್ರಿವಾಲ್
ಸಿಎಂ ಬಸವರಾಜ್ ಬೊಮ್ಮಾಯಿಯವರು ನಾಳೆ ಜಿಲ್ಲೆಗೆ ಬರುತ್ತಿದ್ದಾರೆ. ಮೊದಲಿಗೆ ರಾಮನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಂಬೇಡ್ಕರ್ – ಕೆಂಪೇಗೌಡರ ಪುತ್ಥಳಿ ಉದ್ಘಾಟಿಸಿ ನಂತರ ಗವರ್ನಮೆಂಟ್ ಟೂಲ್ಸ್ ಟ್ರೈನಿಂಗ್ ಸೆಂಟರ್ – 54 ಕೋಟಿ ವೆಚ್ಚದ ಯೋಜನೆಯ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ಮಾಡಲಿದ್ದಾರೆ ಮತ್ತು ಮಾಗಡಿ ಕೆಂಪೇಗೌಡರ ಸಮಾಧಿ ಸ್ಥಳ ಕೆಂಪಾಪುರಕ್ಕೆ ಭೇಟಿ ನೀಡಲಿದ್ದಾರೆ. ಜೊತೆಗೆ 300 ಕೋಟಿ ವೆಚ್ಚದ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ ಎಂದು ಹೇಳಿದ್ದಾರೆ.