Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಯತ್ನಾಳ್ ಉಚ್ಚಾಟನೆ ವ್ಯತಿರಿಕ್ತ ಪರಿಣಾಮ ಆಗದು, ಹೈಕಮಾಂಡ್ ನಿರ್ಧಾರ ಸ್ವಾಗತ: ಅಶ್ವತ್ಥನಾರಾಯಣ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಯತ್ನಾಳ್ ಉಚ್ಚಾಟನೆ ವ್ಯತಿರಿಕ್ತ ಪರಿಣಾಮ ಆಗದು, ಹೈಕಮಾಂಡ್ ನಿರ್ಧಾರ ಸ್ವಾಗತ: ಅಶ್ವತ್ಥನಾರಾಯಣ್

Bengaluru City

ಯತ್ನಾಳ್ ಉಚ್ಚಾಟನೆ ವ್ಯತಿರಿಕ್ತ ಪರಿಣಾಮ ಆಗದು, ಹೈಕಮಾಂಡ್ ನಿರ್ಧಾರ ಸ್ವಾಗತ: ಅಶ್ವತ್ಥನಾರಾಯಣ್

Public TV
Last updated: March 26, 2025 8:59 pm
Public TV
Share
2 Min Read
Ashwath Narayan 3
SHARE

– ಈ ಹಿಂದೆ ಉಚ್ಚಾಟನೆ ರದ್ದು ಮಾಡಿ ಯಡಿಯೂರಪ್ಪನವರು ಪಕ್ಷಕ್ಕೆ ಸೇರಿಸಿದ್ರು

ಬೆಂಗಳೂರು: ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಅವರ ಉಚ್ಚಾಟನೆಯಿಂದ ಪಕ್ಷದ ಮೇಲೆ ವ್ಯತಿರಿಕ್ತ ಪರಿಣಾಮ ಆಗಲಾರದು ಎಂದು ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ್ (Ashwathnarayan) ಅಭಿಪ್ರಾಯಪಟ್ಟರು.

ಯತ್ನಾಳ್ ಉಚ್ಚಾಟನೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಹ್ಲಾದ್ ಜೋಶಿಯವರು (Prahlad Joshi) ಅಧ್ಯಕ್ಷರಾಗಿದ್ದಾಗ ಹಿಂದೆ ಅವರನ್ನು ಉಚ್ಚಾಟಿಸಲಾಗಿತ್ತು. ಯಡಿಯೂರಪ್ಪನವರು (Yediyurappa) ಅದನ್ನು ರದ್ದು ಮಾಡಿ ಪಕ್ಷಕ್ಕೆ ಸೇರಿಸಿಕೊಂಡಿದ್ದರೂ ಅವರ ವರ್ತನೆಯಲ್ಲಿ ಸುಧಾರಣೆ ಆಗಲಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಆ ಜೀ ಈ ಜೀ ಗಳ ಮಾತುಕೇಳಿ ರಾಜಕೀಯ ಜೀವನ ಹಾಳು ಮಾಡಿಕೊಂಡ ಯತ್ನಾಳ್: ಕಾಂಗ್ರೆಸ್‌ ಲೇವಡಿ

ಕಳೆದ ಒಂದೂವರೆ ವರ್ಷದಿಂದ ಬಿಜೆಪಿ ಶಾಸಕರಾಗಿರುವ, ಕೇಂದ್ರದ ಮಾಜಿ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಅವರು ಪಕ್ಷದ ನಾಯಕರ ವಿರುದ್ಧವಾಗಿ ಅಶಿಸ್ತಿನಿಂದ ವರ್ತಿಸಿದ್ದರು. ಅವರ ವಿರುದ್ಧ ಹೇಳಿಕೆ ನೀಡಿದ್ದಲ್ಲದೇ, ಪಕ್ಷಕ್ಕೆ ಮುಜುಗರ ಆಗುವಂತೆ ಹೇಳಿಕೆ ಬಿಡುಗಡೆ ಮಾಡಿದ್ದರು. ಸುಮಾರು ವರ್ಷಗಳಿಂದ ಇದು ನಡೆದಿತ್ತು ಎಂದು ವಿವರಿಸಿದರು. ಇದನ್ನೂ ಓದಿ: ಯತ್ನಾಳ್ ಉಚ್ಚಾಟನೆ ದುಃಖ ತಂದಿದೆ, ಹೈಕಮಾಂಡ್ ನಿರ್ಧಾರಕ್ಕೆ ತಲೆ ಬಾಗುವೆ: ಬೆಲ್ಲದ್

ಅಟಲ್ ಬಿಹಾರಿ ವಾಜಪೇಯಿ ಮತ್ತು ಅಡ್ವಾಣಿ ಅವರ ವಿರುದ್ಧವಾಗಿ, ಕರ್ನಾಟಕದಲ್ಲಿ ಯಡಿಯೂರಪ್ಪ, ಪ್ರಹ್ಲಾದ್ ಜೋಶಿ, ಜಗದೀಶ್ ಶೆಟ್ಟರ್ ಅವರ ವಿರುದ್ಧವಾಗಿ ಪಕ್ಷಕ್ಕೆ ಮುಜುಗರ ಆಗುವ ರೀತಿಯಲ್ಲಿ ವರ್ತಿಸಿದ್ದರು. ಕೇಂದ್ರ ಶಿಸ್ತು ಸಮಿತಿ 3 ಬಾರಿ ಅವರಿಗೆ ನೋಟಿಸ್ ಕೊಟ್ಟಿತ್ತು. ಅವರು ಸುಧಾರಣೆ ಮಾಡಿಕೊಂಡು ತಪ್ಪನ್ನು ತಿದ್ದಿಕೊಳ್ಳುವ ನಿರೀಕ್ಷೆ ಇಡಲಾಗಿತ್ತು. ತಪ್ಪನ್ನು ಅವರು ತಿದ್ದಿಕೊಂಡಿಲ್ಲ. ಕೇಂದ್ರ ಶಿಸ್ತು ಸಮಿತಿಯು ಯತ್ನಾಳ್‌ರನ್ನು 6 ವರ್ಷ ಉಚ್ಚಾಟನೆ ಮಾಡಿದೆ. ಇದು ಕೇಂದ್ರ ಶಿಸ್ತು ಸಮಿತಿ ಮತ್ತು ಪಕ್ಷದ ತೀರ್ಮಾನವಾಗಿದೆ. ಇದು ಎರಡನೇ ಬಾರಿ ಅವರನ್ನು ಉಚ್ಚಾಟನೆ ಮಾಡಿದ ಘಟನೆ ಎಂದು ತಿಳಿಸಿದರು. ಇದನ್ನೂ ಓದಿ: 2ನೇ ಬಾರಿ ಬಿಜೆಪಿಯಿಂದ ಯತ್ನಾಳ್‌ ಉಚ್ಛಾಟನೆ

ನಮ್ಮ ಅಭ್ಯರ್ಥಿ ವಿರುದ್ಧ ಅವರು ಎಂಎಲ್‌ಸಿ ಸ್ಥಾನಕ್ಕೆ ಸ್ಪರ್ಧಿಸಿ ಎಂಎಲ್‌ಸಿ ಆಗಿದ್ದರು. ಆದರೂ ಯಡಿಯೂರಪ್ಪನವರು ಉಚ್ಚಾಟನೆ ರದ್ದು ಮಾಡಿ ಎಂಎಲ್‌ಎ ಟಿಕೆಟ್ ಕೊಟ್ಟಿದ್ದರು. ಅವರು ಸುಧಾರಣೆ ಆಗಲಿಲ್ಲ. ಟೀಕೆ ಮಾಡುತ್ತ ಬಂದರು ಎಂದು ಹೇಳಿದರು. ಇದನ್ನೂ ಓದಿ: ಸತ್ಯವಂತರಿಗಿದು ಕಾಲವಲ್ಲ.. ದುಷ್ಟಜನರಿಗೆ ಸುಭಿಕ್ಷಕಾಲ: ಉಚ್ಚಾಟನೆಗೆ ದಾಸರ ಹಾಡಿನ ಮೂಲಕ ಯತ್ನಾಳ್ ಕೌಂಟರ್

ಪಕ್ಷ ಇವರ ಹೇಳಿಕೆ, ನಡವಳಿಕೆಯನ್ನು ಗಂಭೀರವಾಗಿ ಪರಿಗಣಿಸಿ ಉಚ್ಚಾಟನೆ ಮಾಡಿದೆ. ಪಕ್ಷದ ತೀರ್ಮಾನವನ್ನು ರಾಜ್ಯ ಬಿಜೆಪಿ ಸ್ವಾಗತಿಸುತ್ತದೆ. ಪಕ್ಷದ ವಿರುದ್ಧ ಅಶಿಸ್ತಿನಿಂದ ನಡೆದುಕೊಳ್ಳುವವರಿಗೆ ಇದೊಂದು ಎಚ್ಚರಿಕೆಯ ಮಾತು ಎಂದು ತಿಳಿದುಕೊಳ್ಳಬೇಕಿದೆ ಎಂದರು. ಇದನ್ನೂ ಓದಿ: ಬಿಜೆಪಿಯಿಂದ ಬಸನಗೌಡ ಪಾಟೀಲ್‌ ಯತ್ನಾಳ್‌ ಉಚ್ಛಾಟನೆ

TAGGED:Ashwath NarayanBasanagouda Patil Yatnalbengalurubjpಅಶ್ವಥ್ ನಾರಾಯಣ್ಬಸನಗೌಡ ಪಾಟೀಲ್ ಯತ್ನಾಳ್ಬೆಂಗಳೂರು
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Abhishek Sharma 2
Cricket

ಹೈದರಾಬಾದ್‌ನಲ್ಲಿ ಸನ್‌ ಶೈನ್‌ – ಸಿಎಸ್‌ಕೆ ವಿರುದ್ಧ 10 ರನ್‌ಗಳ ಸೂಪರ್‌ ಜಯ

Public TV
By Public TV
7 hours ago
Mallikarjun kharge
Latest

543 ಸ್ಥಾನಗಳಲ್ಲೇ ಮಹಿಳೆಯರಿಗೆ 33% ಮೀಸಲಾತಿಯನ್ನು ತಕ್ಷಣವೇ ಜಾರಿಗೆ ತನ್ನಿ: ಮೋದಿಗೆ ಖರ್ಗೆ ಸವಾಲು

Public TV
By Public TV
7 hours ago
Iran Foreign Minister Abbas Araghchi
Latest

ಇರಾನ್‌ ವಿದೇಶಾಂಗ ಸಚಿವರನ್ನೇ ಮೂರ್ಖ ಎಂದ ಐಆರ್‌ಜಿಸಿ

Public TV
By Public TV
7 hours ago
Abhishek Sharma 1
Cricket

ಸಿಎಸ್‌ಕೆ ವಿರುದ್ಧ 15 ಎಸೆತಗಳಲ್ಲಿ ಫಿಫ್ಟಿ – ತನ್ನದೇ ದಾಖಲೆ ಮುರಿದ ಅಭಿ

Public TV
By Public TV
8 hours ago
Caste Census
Bengaluru City

ಜನಗಣತಿಗೆ ಗೈರಾದ್ರೆ ಕಠಿಣ ಕ್ರಮ – 1 ಸಾವಿರ ದಂಡದೊಂದಿಗೆ 3 ವರ್ಷ ಜೈಲು

Public TV
By Public TV
8 hours ago
Narendra Modi
Latest

ಇವರಿಗೆ ಅಧಿಕಾರ ಒಂದೇ ಕುಟುಂಬದ ಕೈಯಲ್ಲಿರಬೇಕು, ಹೆಣ್ಣುಮಕ್ಕಳು ಅಳುತ್ತಿದ್ದರೆ ಕಾಂಗ್ರೆಸ್, ಮಿತ್ರಪಕ್ಷಗಳು ಹಬ್ಬ ಮಾಡುತ್ತಿವೆ: ಮೋದಿ ಆಕ್ರೋಶ

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?