ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ಅವರ ಅಕಾಲಿಕ ನಿಧನದ ನೋವು ಇನ್ನೂ ಮಾಸಿಲ್ಲ. ಆದರೂ ನಟನ ಪತ್ನಿ ಪೊಲೀಸ್ ಇಲಾಖೆ ಧನ್ಯವಾದಗಳನ್ನು ತಿಳಿಸಿದ್ದಾರೆ.
ದೊಡ್ಮನೆಯ ದೊಡ್ಡ ಗುಣದಂತೆ ಅಪ್ಪು ಪತ್ನಿ ಅಶ್ವಿನಿಯವರು ಈ ಸಂಬಂಧ ಪ್ರಕಟಣೆ ಹೊರಡಿಸುವ ಮೂಲಕ ಎಲ್ಲರಿಗೂ ಧನ್ಯವಾದಗಳನ್ನು ಅರ್ಪಿಸಿದ್ದಾರೆ. ಪುನೀತ್ ಅಂತ್ಯಸಂಸ್ಕಾರಕ್ಕೆ ಶ್ರಮಿಸಿದ ಬೆಂಗಳೂರು ಜಿಲ್ಲಾಧಿಕಾರಿ, ಪೊಲೀಸರು ಹೀಗೆ ಎಲ್ಲರಿಗೂ ಧನ್ಯವಾದ ತಿಳಿಸಿದ್ದಾರೆ. ಇದನ್ನೂ ಓದಿ: ಆತ್ಮಹತ್ಯೆ ಮಾಡ್ಕೊಂಡ ಅಪ್ಪು ಅಭಿಮಾನಿ ಮನೆಗೆ ರಾಘಣ್ಣ ಭೇಟಿ, ಸಾಂತ್ವನ
Advertisement
Advertisement
ಮಾನ್ಯರೇ,
ವಿಷಯ: ಅಂತ್ಯಸಂಸ್ಕಾರದ ಸಂದರ್ಭದಲ್ಲಿ ನೀಡಿದ ಸಹಕಾರಕ್ಕೆ ಕೃತಜ್ಞತೆ
Advertisement
ಶ್ರೀ ಪುನೀತ್ ರಾಜ್ ಕುಮಾರ್ ಅವರ ಅಕಾಲಿಕ ಅಗಲಿಕೆ ನಮಗಷ್ಟೇ ಅಲ್ಲದೆ ಇಡೀ ರಾಜ್ಯಕ್ಕೆ ಆಘಾತಕಾರಿ ವಿಷಯ. ಪುನೀತ್ ಅವರು ವಿಶ್ವದಾದ್ಯಂತ ಕೋಟ್ಯಂತರ ಅಭಿಮಾನಿಗಳನ್ನು ಹೊಂದಿದ್ದವರು. ನಮ್ಮ ನೋವನ್ನು ಅಡಗಿಸಿಟ್ಟುಕೊಂಡು ಅವರನ್ನು ಸಕಲ ಗೌರವಗಳೊಂದಿಗೆ ಕಳುಹಿಸಿಕೊಡುವುದು ಅನಿವಾರ್ಯತೆಯಾಗಿತ್ತು. ಇಂತಹ ಸಂದರ್ಭದಲ್ಲಿ ಇಡೀ ಪೊಲಿಸ್ ಇಲಾಖೆ ನಮಗೆ ಬೆಂಬಲವಾಗಿ ನಿಂತು ಗೌರವಯುವತವಾಗಿ ಅವರನ್ನು ಕಳುಹಿಸಿಕೊಡಲು ಸಹಕರಿಸಿದೆ. ಅಂತಿಮ ದರ್ಶನಕ್ಕೆ ಸೂಕ್ತ ವ್ಯವಸ್ಥೆ ಮಾಡುವಲ್ಲಿ, ಮೆರವಣಿಗೆಯಲ್ಲಿ ಮತ್ತು ಅಂತ್ಯಸಂಸ್ಕಾರದ ಸಂದರ್ಭದಲ್ಲಿ ಸಾಕಷ್ಟು ಪೊಲೀಸರನ್ನು ನಿಯೋಜಿಸಿ ಎಲ್ಲೂ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ನೋಡಿಕೊಂಡಿದ್ದೀರಿ. ನಿಮ್ಮ ಈ ಸಹಕಾರಕ್ಕೆ ನಮ್ಮ ಇಡೀ ಕುಟುಂಬ ಮತ್ತು ಎಲ್ಲಾ ಅಭಿಮಾನಿಗಳ ಪರವಾಗಿ ನಿಮಗೆ ಮತ್ತು ನಿಮ್ಮ ಎಲ್ಲ ಸಿಬ್ಬಂದಿಗೆ ಹೃತ್ಪೂರ್ವಕ ಕೃತಜ್ಞತೆಗಳು.
Advertisement
ಧನ್ಯವಾದಗಳೊಂದಿಗೆ,
ಶ್ರೀಮತಿ ಅಶ್ವಿನಿ ಪುನೀತ್ ರಾಜ್ ಕುಮಾರ್
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ನಮ್ಮನ್ನೆಲ್ಲ ಅಗಲಿ ಇಂದಿಗೆ 10 ದಿನಗಳೇ ಕಳೆದಿವೆ. ಆದರೂ ಇಂದಿಗೂ ಅವರ ಸಮಾಧಿ ದರ್ಶನ ಪಡೆಯಲು ಅಭಿಮಾನಿಗಳ ಸಾಗರವೇ ಹರಿದಬರುತ್ತಿದೆ. ಈ ಮಧ್ಯೆ ಇಂದು ರಾಜ್ಯದ ಎಲ್ಲಾ ಥಿಯೇಟರ್ ಗಳಲ್ಲಿಯೂ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಯಿತು. ನಾಳೆ 11 ದಿನದ ಕಾರ್ಯಕ್ರಮವನ್ನು ಕುಟುಂಬಸ್ಥರು ನೆರವೇರಿಸಲಿದ್ದಾರೆ.