ಅಪ್ಪು ನೆನಪಿನಲ್ಲಿ ಅಶ್ವಿನಿ- ಎಂದೆಂದಿಗೂ ನಮ್ಮ ಹೃದಯದಲ್ಲಿ ಶಾಶ್ವತ ಎಂದ ಪತ್ನಿ

By
1 Min Read

ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ (Puneeth Rajkumar) ಅವರ ಸ್ಮರಿಸುತ್ತಲೇ ಪತ್ನಿ ಅಶ್ವಿನಿ ಜೀವಿಸುತ್ತಿದ್ದಾರೆ. ಹೀಗಿರುವಾಗ ಪತಿ ಅಪ್ಪು (Appu) ಹುಟ್ಟುಹಬ್ಬಕ್ಕೆ (Birthday) ಎಂದೆಂದಿಗೂ ನಮ್ಮ ಹೃದಯದಲ್ಲಿ ಶಾಶ್ವತ ಎಂದು ಅಶ್ವಿನಿ ಪುನೀತ್ ರಾಜ್‌ಕುಮಾರ್ ಶುಭಹಾರೈಸಿದ್ದಾರೆ. ಇದನ್ನೂ ಓದಿ:‘ಜಾಕಿ’ ಚಿತ್ರದ ಹಾಡಿಗೆ ಸ್ಟೈಲೀಶ್ ಆಗಿ ಹೆಜ್ಜೆ ಹಾಕಿದ ಕಾರ್ತಿಕ್ ಮಹೇಶ್‌, ಕಿಶನ್

ಅಪ್ಪು ಅವರು ತಮ್ಮ ಅಪ್ರತಿಮ ಪ್ರತಿಭೆ, ಕರುಣೆ ಮತ್ತು ಮಾನವೀಯತೆಯಿಂದ ನಮ್ಮ ಹೃದಯಾಂತರಾಳವನ್ನು ಬೆಳಗಿಸುತ್ತಲೇ ಇದ್ದಾರೆ. ಅಪ್ಪು ಅವರು ಮಾನವೀಯತೆಯಲ್ಲಿ ಇರಿಸಿದ್ದ ಅಚಲ ಬದ್ಧತೆ ಅವರ ಹಾದಿಯಲ್ಲಿ ನಡೆಯಲು ನಮಗೆ ಸದಾ ಸ್ಫೂರ್ತಿದಾಯಕವಾಗಿರುತ್ತದೆ ಎಂದು ಅಪ್ಪು ಕುರಿತು ಪತ್ನಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಪೋಸ್ಟ್ ಮಾಡಿದ್ದಾರೆ.

ಪುನೀತ್ ನಂತರ ಪತ್ನಿ ಅಶ್ವಿನಿ, ಕುಟುಂಬದ ಹೊಣೆ ಮತ್ತು ಬ್ಯುಸಿನೆಸ್ ಎರಡನ್ನು ನಿಭಾಯಿಸುತ್ತಿದ್ದಾರೆ. ಪಿಆರ್‌ಕೆ ಸಂಸ್ಥೆ ಮೂಲಕ ಹೊಸ ಪ್ರತಿಭೆಗಳಿಗೆ ಅವಕಾಶ ನೀಡುತ್ತಿದ್ದಾರೆ. ಈ ಮೂಲಕ ಅಶ್ವಿನಿ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ.

Share This Article
Exit mobile version