CinemaKarnatakaLatestMain PostSandalwood

ಅನ್ ಲಾಕ್ ರಾಘವ ಸಿನಿಮಾದ ಟೈಟಲ್ ಅನಾವರಣ ಮಾಡಿದ ಅಶ್ವಿನಿ ಪುನೀತ್ ರಾಜ್ ಕುಮಾರ್

Advertisements

ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ, ‘ ರಾಮಾ ರಾಮಾ ರೇ’, ‘ಒಂದಲ್ಲಾ ಎರಡಲ್ಲಾ’, ‘ಮ್ಯಾನ್ ಆಫ್ ದಿ ಮ್ಯಾಚ್’ನಂತಹ ಅಪರೂಪದ ಸಿನಿಮಾ ಕಥೆ  ಹೇಳಿ ಸಕ್ಸಸ್ ಕಂಡಿರುವ ನಿರ್ದೇಶಕ ಸತ್ಯಪ್ರಕಾಶ್ ನಿರ್ಮಾಣದ ಹೊಸ ಸಿನಿಮಾದ ಟೈಟಲ್ ನ್ನು ರಿವೀಲ್ ಆಗಿದೆ. ಸತ್ಯ & ಮಯೂರ ಪಿಕ್ಚರ್ಸ್ ವತಿಯಿಂದ ನಿರ್ಮಾಣವಾಗುತ್ತಿರುವ ‘ಅನ್ ಲಾಕ್ ರಾಘವ’ ಸಿನಿಮಾದ ಶೀರ್ಷಿಕೆ ಹಾಗೂ ಫಸ್ಟ್ ಲುಕ್ ನ್ನು ಶ್ರೀಮತಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅನಾವರಣಗೊಳಿಸಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ.

ನಿರ್ಮಾಪಕ ಸತ್ಯಪ್ರಕಾಶ್ ಮಾತನಾಡಿ, ಇಂಡಸ್ಟ್ರೀಗೆ ಬಂದಾಗ ದೊಡ್ಡ ಟೀಂ ಕಟ್ಟಬೇಕು ಎಂಬ ಆಸೆ ಇತ್ತು. ದೀಪಕ್ ಮಧುವನಹಳ್ಳಿ ನಿರ್ದೇಶನ ಮಾಡ್ತಿರುವ ಈ ಸಿನಿಮಾ ನಿಜವಾದ ಕಮರ್ಷಿಯಲ್ ಸಿನಿಮಾ. ತುಂಬಾ ಹೊಸ ಪ್ರೆಸೆಂಟೇಷನ್ ನಲ್ಲಿ ಸಿನಿಮಾ ಮಾಡಿದ್ದೇವೆ. ಇಡೀ ಸಿನಿಮಾ ರೋಮ್ಯಾಂಟಿಕ್ ಕಾಮಿಡಿ ಜರ್ನಿ ಇರುತ್ತದೆ. ಮೂರು ರೀತಿ ಕಾಮಿಡಿ ಇರುತ್ತದೆ. ಪಾತ್ರ ಏನು ಮಾತಾಡ್ತಾರೆ ಅಂತಾ ಗೊತ್ತಾಗಲ್ಲ. ಆದ್ರೆ ಪ್ರೇಕ್ಷಕ ನಗ್ತಾರೆ. ಅನೂಪ್ ಸೀಳಿನ್ ಸರ್ ಅದ್ಭುತ ಮ್ಯೂಸಿಕ್ ಕೊಟ್ಟಿದ್ದಾರೆ ಎಂದರು. ಇದನ್ನೂ ಓದಿ: ಶಿವಣ್ಣನನ್ನೇ ಹಿಂದಿಕ್ಕಿದ ಶಿವಣ್ಣನ ಅಭಿಮಾನಿ ಕಾಫಿನಾಡು ಚಂದು!

‘ಭಾಗ್ಯರಾಜ್’, ‘ಕಳ್ಬೆಟ್ಟದ ದರೋಡೆಕೋರರು’, ‘ರಾಜು ಜೇಮ್ಸ್ ಬಾಂಡ್’ ಚಿತ್ರಗಳನ್ನು ನಿರ್ದೇಶಿಸಿರುವ ದೀಪಕ್ ಮಧುವನಹಳ್ಳಿ ನಿರ್ದೇಶಿಸುತ್ತಿರುವ ಈ ಸಿನಿಮಾಗೆ ಡಿ ಸತ್ಯಪ್ರಕಾಶ್ ಕತೆ-ಚಿತ್ರಕತೆ-ಸಂಭಾಷಣೆ ಬರೆದು ನಿರ್ಮಾಣದ ಜವಾಬ್ದಾರಿ ಕೂಡ ಹೊತ್ತುಕೊಂಡಿದ್ದಾರೆ. ‘ವೀಕೆಂಡ್’ ಸಿನಿಮಾ ಮೂಲಕ ಭರವಸೆ ಮೂಡಿಸಿರುವ ನವನಟ ಮಿಲಿಂದ್ ನಾಯಕನಾಗಿ ಹಾಗೂ ‘ಲವ್ ಮಾಕ್ಟೇಲ್ – 2’ ಚಿತ್ರದ ರೇಚಲ್ ಡೇವಿಡ್ ನಾಯಕಿಯಾಗಿ ಬಣ್ಣ ಹಚ್ಚಿದ್ದು, ಸಾಧುಕೋಕಿಲ, ಅವಿನಾಶ್, ರಮೇಶ್ ಭಟ್, ಸುಂದರ್ ವೀಣಾ, ಧರ್ಮಣ್ಣ ಕಡೂರು, ಭೂಮಿಶೆಟ್ಟಿ ಮೊದಲಾದ ಕಲಾವಿದರು ಮುಖ್ಯಭೂಮಿಕೆಯಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾಕ್ಕೆ ಅನೂಪ್ ಸೀಳಿನ್ ಸಂಗೀತ ನೀಡುತ್ತಿದ್ದು, ಲವಿತ್ ಛಾಯಾಗ್ರಹಣ ಹಾಗೂ ಅಜಯ್ ಕುಮಾರ್ ಸಂಕಲನವಿದೆ.

Live Tv

Leave a Reply

Your email address will not be published.

Back to top button