– ವಿವಿಧ ಯೋಜನೆಗಳಿಗೆ ಚಾಲನೆ ನೀಡಿದ ಅಶ್ವಿನಿ ವೈಷ್ಣವ್
ಮಂಗಳೂರು: ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ವಂದೇ ಭಾರತ್ ಲೋಕಾರ್ಪಣೆ ಜೊತೆಗೆ ವಿವಿಧ ರೈಲು ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ಹಸಿರು ನಿಶಾನೆ ತೋರಿಸಿದರು. ನವೀಕರಣಗೊಂಡ ಸುಬ್ರಹ್ಮಣ್ಯ ರಸ್ತೆ ರೈಲ್ವೆ ನಿಲ್ದಾಣ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಕೇಂದ್ರ ಸಚಿವರು, ಮಂಗಳೂರು-ಬೆಂಗಳೂರು (Mangaluru-Bengaluru Vande Bharat Train) ರೈಲು ಮಾರ್ಗದ ವಿದ್ಯುದೀಕರಣ ಬಹುಕಾಲದ ಕನಸಾಗಿತ್ತು. ಕಾಮಗಾರಿ ಅನುಷ್ಠಾನದ ವೇಳೆ ಹಲವು ಸವಾಲುಗಳು ಎದುರಾದರೂ ಎಲ್ಲ ಅಡೆತಡೆಗಳನ್ನು ಯಶಸ್ವಿಯಾಗಿ ನಿವಾರಿಸಿದ್ದೇವೆ ಎಂದರು. ಇದೇ ವೇಳೆ ಈ ಯೋಜನೆ ಸಾಕಾರಗೊಳ್ಳಲು ಶ್ರಮಿಸಿದ ರೈಲ್ವೆ ಅಧಿಕಾರಿಗಳನ್ನು ಅಭಿನಂದಿಸಿದರು. ಇದನ್ನೂ ಓದಿ: ಕೊಂಕಣ ರೈಲ್ವೆ ವಿಲೀನಕ್ಕೆ 4 ರಾಜ್ಯಗಳ ಅನುಮತಿ ಅಗತ್ಯ: ಅಶ್ವಿನಿ ವೈಷ್ಣವ್
ಇದಕ್ಕೂ ಮುನ್ನ ಉಡುಪಿ ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್, ಬಳಿಕ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ ಪಡೆದರು. ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆಯೊಂದಿಗೆ ವಿಲೀನಗೊಳಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ಮಹತ್ವದ ಮಾಹಿತಿ ಉಡುಪಿ ರೈಲ್ವೆ ನಿಲ್ದಾಣವನ್ನು ಸ್ಥಳೀಯ ಪಾರಂಪರಿಕ ಶೈಲಿಯಲ್ಲಿ ಮೇಲ್ದರ್ಜೆಗೇರಿಸುವುದರ ಜತೆಗೆ ಬೈಂದೂರು ರೈಲ್ವೆ ನಿಲ್ದಾಣದ ಅಭಿವೃದ್ಧಿಗೂ ಚಿಂತನೆ ನಡೆಸಲಾಗುವುದು ಎಂದರು.
ಉಡುಪಿ ಪ್ರಮುಖ ಧಾರ್ಮಿಕ ಹಾಗೂ ಶಿಕ್ಷಣ ಕೇಂದ್ರವಾಗಿರುವುದರಿಂದ, ಸ್ಥಳೀಯ ಪಾರಂಪರಿಕ ಶೈಲಿಯನ್ನು ಅಳವಡಿಸಿಕೊಂಡು ರೈಲ್ವೆ ನಿಲ್ದಾಣವನ್ನು ಅಭಿವೃದ್ಧಿಪಡಿಸುವ ಉದ್ದೇಶವಿದೆ ಎಂದರು. ಇತ್ತ 22 ಕೋಟಿ ವೆಚ್ಚದಲ್ಲಿ ನವೀಕರಣಗೊಂಡ ಚಾಮರಾಜನಗರ ರೈಲು ನಿಲ್ದಾಣವನ್ನು ವರ್ಚುವಲ್ ಮೂಲಕ ಪ್ರಧಾನಿ ಮೋದಿ ಉದ್ಘಾಟಿಸಿದರು. ಇದನ್ನೂ ಓದಿ: ಉಡುಪಿ | ನೂತನ FM ಪ್ರಸರಣ ಕೇಂದ್ರ ಕಾರ್ಯಾರಂಭ; 2.85 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ
