– ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಮಾಹಿತಿ
ಲಕ್ನೋ: ಜನವರಿ 13ರಿಂದ ಫೆಬ್ರವರಿ 26ರವರೆಗೆ ಪ್ರಯಾಗ್‌ರಾಜ್‌ನಲ್ಲಿ (Prayagraj) ಮಹಾ ಕುಂಭಮೇಳ (Maha Kumbh Mela) ನಡೆಯಲಿದೆ. ಈ ಹಿನ್ನೆಲೆ ಭಕ್ತರಿಗೆ ಸ್ಥಳಾವಕಾಶ ಕಲ್ಪಿಸಲು 3,000 ವಿಶೇಷ ರೈಲುಗಳನ್ನು ಒಳಗೊಂಡಂತೆ 45 ದಿನಗಳಲ್ಲಿ ಒಟ್ಟು 13,000 ರೈಲುಗಳು (Train) ಕಾರ್ಯ ನಿರ್ವಹಿಸಲಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.
Advertisement
ಮಹಾಕುಂಭ ಮೇಳದ ಸಿದ್ಧತೆಗಳನ್ನು ಪರಿಶೀಲಿಸಿದ ಬಳಿಕ ಮಾತನಾಡಿದ ಅವರು, ಮಹಾ ಕುಂಭಕ್ಕಾಗಿ ನಾಲ್ಕು ರಿಂಗ್ ರೈಲ್ ಸರ್ಕಲ್‌ಗಳನ್ನು ನಿರ್ಮಿಸಲಾಗಿದೆ. ಇದರಲ್ಲಿ ವಾರಣಾಸಿ-ಪ್ರಯಾಗ್‌ರಾಜ್, ಪ್ರಯಾಗ್‌ರಾಜ್-ಅಯೋಧ್ಯೆ, ಅಯೋಧ್ಯೆ-ಕಾಶಿ ಮತ್ತು ಪ್ರಯಾಗ್‌ರಾಜ್ ಸರ್ಕಲ್ ಸೇರಿವೆ. ದೇಶದ ವಿವಿಧ ರಾಜ್ಯಗಳ 50 ನಗರಗಳಿಂದ ಪ್ರಯಾಗ್‌ರಾಜ್‌ಗೆ ವಿಶೇಷ ರೈಲುಗಳು ಕಾರ್ಯನಿರ್ವಹಿಸಲಿದೆ ಎಂದರು. ಇದನ್ನೂ ಓದಿ: ಕ್ಷುಲ್ಲಕ ಕಾರಣಕ್ಕೆ ನೇಣಿಗೆ ಶರಣಾದ 10ರ ಬಾಲಕ
Advertisement
Advertisement
Advertisement
ಮಹಾ ಕುಂಭಮೇಳದ ಅವಧಿಯಲ್ಲಿ 18,000 ಆರ್‌ಪಿಎಫ್ ಮತ್ತು ಜಿಆರ್‌ಪಿ ಯೋಧರನ್ನು ನಿಯೋಜಿಸಲಾಗಿದೆ. ಇದರಲ್ಲಿ ಆರ್‌ಪಿಎಫ್ ಯೋಧರ ಸಂಖ್ಯೆ 8,000 ಮತ್ತು ಜಿಆರ್‌ಪಿ ಸೈನಿಕರ ಸಂಖ್ಯೆ 10,000 ಇರಲಿದೆ. ಇದಲ್ಲದೇ ದೇಶಾದ್ಯಂತ 13,000 ರೈಲ್ವೆ ಅಧಿಕಾರಿಗಳು ಮತ್ತು ನೌಕರರನ್ನು ಇಲ್ಲಿಗೆ ನಿಯೋಜಿಸಲಾಗುತ್ತಿದೆ. ಹಿಂದಿ ಮತ್ತು ಇಂಗ್ಲಿಷ್ ಜೊತೆಗೆ ದಕ್ಷಿಣ ಭಾರತ, ಪಂಜಾಬಿ, ಬೆಂಗಾಲಿ, ಮರಾಠಿ, ಗುಜರಾತಿ ಇತ್ಯಾದಿ ಮಾತನಾಡಬಲ್ಲ ಉದ್ಯೋಗಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಕೊನೆಗೂ ಪಂಚಮಸಾಲಿ ಹೋರಾಟಕ್ಕೆ ಬೆಳಗಾವಿ ಜಿಲ್ಲಾಡಳಿತ ಅನುಮತಿ
ಇನ್ನು ಪ್ರಯಾಗ್‌ರಾಜ್‌ನಲ್ಲಿ ಮೊದಲ ಬಾರಿಗೆ ಮೊಬೈಲ್ ಅನ್ ರಿಸರ್ವ್ಡ್ ಟಿಕೆಟ್ ಸಿಸ್ಟಂ (UTS) ಅನ್ನು ಪರಿಚಯಿಸಲಾಗಿದೆ. ಇದಕ್ಕೂ ಮೊದಲು ಪುರಿಯಲ್ಲಿ ರಥಯಾತ್ರೆಯ ಸಮಯದಲ್ಲಿ ಈ ಸಿಸ್ಟಂ ಅನ್ನು ಬಳಸಲಾಗಿತ್ತು. ಮಹಾ ಕುಂಭದ ಸಿದ್ಧತೆಗಾಗಿ ಕಳೆದ 2 ವರ್ಷಗಳಿಂದ 5,000 ಕೋಟಿ ರೂ.ಗೂ ಹೆಚ್ಚು ಹಣವನ್ನು ಬಳಸಲಾಗಿದೆ ಎಂದು ಅಶ್ವಿನಿ ವೈಷ್ಣವ್ (Ashwini Vaishnaw) ತಿಳಿಸಿದ್ದಾರೆ. ಇದನ್ನೂ ಓದಿ: ಕಾರ್ಮಿಕರ ಮೇಲೆ ಕಾಡಾನೆ ದಾಳಿ – ನಾಲ್ವರಿಗೆ ಗಾಯ