ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ (Belagavi) ಭೀಕರ ರಸ್ತೆ ಅಪಘಾತದಲ್ಲಿ (Road Accident) ಎಎಸ್‌ಐ (ASI) ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಸ್‌ಐ (PSI) ಸಸ್ಪೆಂಡ್ ಮಾಡಿ ಎಸ್ಪಿ ಡಾ.ಭೀಮಾಶಂಕರ ಗುಳೇದ್ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯ ಯರಗಟ್ಟಿ ಪಟ್ಟಣದ ನಿವಾಸಿ ವಿಜಯಕಾಂತ ಮಿಕಲಿ (51) ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದರು. ಬೈಲಹೊಂಗಲ ತಾಲೂಕಿನ ದೊಡವಾಡ ಠಾಣೆಯಲ್ಲಿ ಎಎಸ್‌ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ವಿಜಯಕಾಂತ ಹೆಲ್ಮೆಟ್ ಧರಿಸದೇ ಬೈಕ್ ಚಲಾಯಿಸಿದ್ದಕ್ಕೆ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಕರ್ತವ್ಯ ಮುಗಿಸಿ ಯರಗಟ್ಟಿಯಲ್ಲಿರುವ ಮನೆಗೆ ಬರುವಾಗ ರಸ್ತೆ ಅಪಘಾತವಾಗಿತ್ತು. ಇದನ್ನೂ ಓದಿ: ಗುಜರಾತ್‌ನ ಹಾಸ್ಟೆಲ್‌ನಲ್ಲಿ ನಮಾಜ್ ಮಾಡುತ್ತಿದ್ದ ವಿದ್ಯಾರ್ಥಿಗಳ ಮೇಲೆ ಗುಂಪಿನಿಂದ ಹಲ್ಲೆ
Advertisement
Advertisement
ಅತಿವೇಗದಿಂದ ಬೈಕ್ ಚಲಾಯಿಸುವಾಗ ಹಂಪ್ ಜಿಗಿಸಿ ರಸ್ತೆ ಅಪಘಾತವಾಗಿದೆ. ಯರಗಟ್ಟಿಯ ಕೃಷ್ಣಾ ಬಡಾವಣೆ ಬಳಿ ತಡರಾತ್ರಿ ಘಟನೆ ನಡೆದಿತ್ತು. ಆದರೆ ಕಳೆದೊಂದು ತಿಂಗಳ ಹಿಂದಷ್ಟೇ ಎಲ್ಲಾ ಪೊಲೀಸರು ಹೆಲ್ಮೆಟ್ ಧರಿಸುವುದನ್ನು ಬೆಳಗಾವಿ ಎಸ್ಪಿ ಕಡ್ಡಾಯಗೊಳಿಸಿ ಆದೇಶ ಹೊರಡಿಸಿದ್ದರು. ಮೇಲಾಧಿಕಾರಿಗಳ ನಿರ್ದೇಶನ ಸಮರ್ಪಕವಾಗಿ ಅನುಷ್ಠಾನಗೊಳಿಸದೇ ನಿರ್ಲಕ್ಷ್ಯ ಆರೋಪದ ಮೇರೆಗೆ ದೊಡವಾಡ ಠಾಣೆ ಪಿಎಸ್‌ಐ ನಂದೀಶ ಎಂಬವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಇದನ್ನೂ ಓದಿ: ವಿದ್ಯಾರ್ಥಿನಿ ನೇಣಿಗೆ ಶರಣು – ಕಳ್ಳತನ ಆರೋಪ ಹೊರಿಸಿ ಸಮವಸ್ತ್ರ ಬಿಚ್ಚಿಸಿ ಪರಿಶೀಲಿಸಿದ್ದಕ್ಕೆ ಆತ್ಮಹತ್ಯೆ?
Advertisement