– ಗುರುದ್ವಾರದಲ್ಲಿ ಬಚ್ಚಿಟ್ಟುಕೊಂಡಿದ್ದ 9 ಮಂದಿ ಅರೆಸ್ಟ್
– ಪಿಸ್ತೂಲ್, ಸೇಬರ್, ಪೆಟ್ರೋಲ್ ಬಾಂಬ್, 7 ಚೀಲ ಗಾಂಜಾ ವಶ
ಪಟಿಯಾಲ: ಕರ್ಫ್ಯೂ ಪಾಸ್ ತೋರಿಸುವಂತೆ ಒತ್ತಾಯಿಸಿದ್ದಕ್ಕೆ ನಿಹಾಂಗ್ ಸಿಖ್ಖರ ಗುಂಪೊಂದು ಪೊಲೀಸರ ಮೇಲೆ ಹಲ್ಲೆ ನಡೆಸಿ, ಓರ್ವ ಅಧಿಕಾರಿಯ ಕೈ ಕತ್ತರಿಸಿದ ಘಟನೆ ಪಂಜಾಬ್‍ನ ಪಟಿಯಾಲ ಜಿಲ್ಲೆಯಲ್ಲಿ ನಡೆದಿದೆ.
ನಿಹಾಂಗ್‍ನ ಎಎಸ್‍ಐ ಹರ್ಜಿತ್ ಸಿಂಗ್ ಅವರ ಕೈಯನ್ನು ವ್ಯಕ್ತಿಯೊಬ್ಬ ಕತ್ತರಿಸಿದ್ದಾನೆ. ಅಲ್ಲಿದ್ದ ಪೊಲೀಸ್ ಸಿಬ್ಬಂದಿಯೊಬ್ಬರು ಗಾಯಗೊಂಡಿದ್ದ ಹರ್ಜಿತ್ ಸಿಂಗ್ ಜೇಬಿನಿಂದ ಕರವಸ್ತ್ರವನ್ನು ತೆಗೆದುಕೊಂಡು ಅವರ ಕೈಗೆ ಕಟ್ಟಿದ್ದರು. ಗಾಯವಾಗಿದ್ದರೂ ಹರ್ಜಿತ್ ಸಿಂಗ್ ದೀರ್ಘಕಾಲ ಸ್ಥಳದಲ್ಲಿಯೇ ಇದ್ದರು. ಸ್ವಲ್ಪ ಸಮಯದ ನಂತರ ಓರ್ವ ಕತ್ತರಿಸಿ ಬಿದ್ದಿದ್ದ ಕೈಯನ್ನು ಅವರಿಗೆ ಕೊಟ್ಟನು. ಆಗ ಹರ್ಜಿತ್ ಸಿಂಗ್ ಅವರು ಮತ್ತೊಂದು ಕೈಯಲ್ಲಿ ಹಿಡಿದುಕೊಂಡು ದ್ವಿಚಕ್ರದಲ್ಲಿ ಆಸ್ಪತ್ರೆಗೆ ಹೋದರು ಎಂದು ವರದಿಯಾಗಿದೆ.
Advertisement
9 persons have been arrested till now in connection with the attack in which a Punjab ASI's hand was chopped off in Patiala earlier today. Weapons including guns and petrol bombs have been recovered: Mandeep Singh, SSP Patiala pic.twitter.com/eX3VfVqUHq
— ANI (@ANI) April 12, 2020
Advertisement
ಎಎಸ್‍ಐ ಹರ್ಜಿತ್ ಸಿಂಗ್ ಅವರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಪಟಿಯಾಲದಿಂದ ಚಂಡೀಗಢ ಆಸ್ಪತ್ರೆಗೆ ದಾಖಲಿಸಿಲಾಗಿದೆ. ನಿಹಾಂಗ್ ಸಿಖ್ಖರು ನಡೆಸಿದ ದಾಳಿಯಲ್ಲಿ ಪೊಲೀಸ್ ಅಧಿಕಾರಿ ಬಿಕರ್ ಸಿಂಗ್ ಮತ್ತು ಓರ್ವ ಪೇದೆ ಸಹ ಗಾಯಗೊಂಡಿದ್ದಾರೆ. ಈ ಪ್ರಕರಣದಲ್ಲಿ ಈವರೆಗೆ 9 ಜನರನ್ನು ಬಂಧಿಸಲಾಗಿದೆ.
Advertisement
ಈ ಕುರಿತು ಮಾಹಿತಿ ನೀಡಿರುವ ಎಸ್‍ಪಿ ಮಂದೀಪ್ ಸಿಂಗ್ ಸಿಧು, ಮಂಡಿ ಬೋರ್ಡ್ ಠಾಣೆಯ ಪೊಲೀಸರು ಪಟಿಯಾಲದ ತರಕಾರಿ ಮಾರುಕಟ್ಟೆಯ ಬಳಿ ನಿಯೋಜನೆಗೊಂಡಿದ್ದರು. ಈ ವೇಳೆ ಇಂದು ಬೆಳಗ್ಗೆ ಆರು ಗಂಟೆಗೆ ಐವರಿಂದ ಆರು ಜನರಿದ್ದ ವಾಹನವನ್ನು ಅವರು ತಡೆದು ಲಾಕ್‍ಡೌನ್ ಪಾಸ್ ತೋರಿಸುವಂತೆ ಒತ್ತಾಯಿಸಿದ್ದರು. ಆಗ ಗುಂಪು ತರಕಾರಿ ಮಾರುಕಟ್ಟೆಯ ಸಿಬ್ಬಂದಿಯೊಂದಿಗೆ ಜಗಳ ಆರಂಭಿಸಿತ್ತು. ಅಷ್ಟೇ ಅಲ್ಲದೆ ಪೊಲೀಸರ ಮೇಲೆ ಹಲ್ಲೆ ನಡೆಸಿ ಬ್ಯಾರಿಕೇಡ್ ಅನ್ನು ಮುರಿದು ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದರು. ಈ ವೇಳೆ ಅಲ್ಲಿ ನಿಂತಿದ್ದ ಪೊಲೀಸರು ವಾಹವನ್ನು ಸುತ್ತುವರಿದರು. ಪೊಲೀಸರು ವಾಹನವನ್ನು ನಿಲ್ಲಿಸಿದ ಕೂಡಲೇ ಕತ್ತಿ, ಮಾರಕಾಸ್ತ್ರಗಳನ್ನು ಎತ್ತಿಕೊಂಡ ಗುಂಪು ದಾಳಿ ನಡೆಸಿ, ಎಎಸ್‍ಐ ಹರ್ಜಿತ್ ಸಿಂಗ್ ಅವರ ಕೈ ಕತ್ತರಿಸಿ ಪರಾರಿಯಾಗಿತ್ತು ಎಂದು ತಿಳಿಸಿದ್ದಾರೆ.
Advertisement
Police Party on Naka duty was attacked today in which one ASI’s hand was cut off & 6 were injured. Police cornered the culprits & have taken them into custody. Have given instructions to Punjab Police to deal with anyone breaking the law in strictest possible manner: Punjab CM pic.twitter.com/6F4AkoI5on
— ANI (@ANI) April 12, 2020
ನಿಹಾಂಗ್ ಬಾಲ್‍ಬರಾ ಪ್ರದೇಶದ ಗುರುದ್ವಾರದಲ್ಲಿ ಆರೋಪಿಗಳು ಅಡಗಿಕೊಂಡಿದ್ದರು. ಪೊಲೀಸ್ ಅಧಿಕಾರಿಗಳು ಆರೋಪಿಗಳನ್ನು ಬೆನ್ನಟ್ಟುವ ಮೂಲಕ ಗುರುದ್ವಾರವನ್ನು ತಲುಪಿದರು. ಪಟಿಯಾಲ ವಲಯದ ಐ.ಜಿ.ಜತೀಂದರ್ ಸಿಂಗ್ ಅವರು ನಿಹಾಂಗ್‍ಗಳನ್ನು ಶರಣಾಗುವಂತೆ ಎಚ್ಚರಿಸಿದರು. ಆದರೆ ಅವರು ಗುರುದ್ವಾರದ ಒಳಗಿನಿಂದ ಪೊಲೀಸರಿಗೆ ಬೆದರಿಕೆ ಹಾಕಲು ಪ್ರಾರಂಭಿಸಿದರು. ಅವರು ಒಳಗಿನಿಂದಲೂ ಗುಂಡು ಹಾರಿಸಿದರು. ನಂತರ ಕಮಾಂಡೋ ತಂಡವನ್ನು ಗುರುದ್ವಾರದೊಳಗೆ ಕಳುಹಿಸಲಾಯಿತು.
#UPDATE 7 fugitives, donning the robes of Nihangs, have been arrested from Gurdwara in village Balbera. One of these was injured in police firing & has been rushed to hospital. Operation was supervised by IG Patiala Zone,Jatinder Singh Aulakh: KBS Sidhu,Spl Chief Secretary,Punjab https://t.co/y2DGargb34 pic.twitter.com/Lg4uRn9U2K
— ANI (@ANI) April 12, 2020
ಗುರುದ್ವಾರದ ಒಳಗೆ ಸ್ಥಳೀಯ ಪಿಸ್ತೂಲ್, ಸೇಬರ್, ಪೆಟ್ರೋಲ್ ಬಾಂಬ್, 7 ಚೀಲ ಗಾಂಜಾ ಮತ್ತು ದೊಡ್ಡ ಪ್ರಮಾಣದ ರಾಸಾಯನಿಕ ತರಹದ ದ್ರವವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಒಟ್ಟು 9 ಜನರನ್ನು ಬಂಧಿಸಲಾಗಿದೆ ಎಂದು ಎಸ್‍ಪಿ ಮಂದೀಪ್ ಸಿಂಗ್ ಸಿಧು ಹೇಳಿದ್ದಾರೆ. ಶಸ್ತ್ರಾಸ್ತ್ರಗಳಲ್ಲದೆ, ಅವರಿಂದಲೂ ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಈವರೆಗೆ 35 ಲಕ್ಷ ರೂ.ಗಳು ಸಿಕ್ಕಿದ್ದು, ಇನ್ನೂ ಕಾರ್ಯಾಚರಣೆ ನಡೆದಿದೆ.
ಪಟಿಯಾಲದಲ್ಲಿ ನಡೆದ ಘಟನೆ ದುರದೃಷ್ಟಕರ ಎಂದು ಪಂಜಾಬ್ ಡಿಜಿಪಿ ದಿನಕರ್ ಗುಪ್ತಾ ಹೇಳಿದ್ದಾರೆ. ಗಾಯಗೊಂಡ ಎಎಸ್‍ಐಗೆ ಚಿಕಿತ್ಸೆ ನೀಡಲು ಪಿಜಿಐಎಂಆರ್ ನ ಉನ್ನತ ಪ್ಲಾಸ್ಟಿಕ್ ಸರ್ಜನ್ ಅವರನ್ನು ನೇಮಿಸಲಾಗಿದೆ.
ASI Harjeet Singh whose hand was cut-off in an attack by a group of Nihangs at Sabzi Mandi, in Patiala (Punjab) today, is undergoing surgery at PGI Chandigarh. As per Punjab Special Secreatry KBS Sidhu, 7 people have been arrested in connection with the incident. pic.twitter.com/8B5zgj0RuB
— ANI (@ANI) April 12, 2020