ದುಬೈ: ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟಿನ ಪರಿಣಾಮ ಲಂಕಾದಲ್ಲಿ ನಿಗದಿಯಾಗಿದ್ದ ಏಷ್ಯಾಕಪ್ ಟೂರ್ನಿ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ)ಗೆ ಶಿಪ್ಟ್ ಆಗುವ ಸಾಧ್ಯತೆ ಹೆಚ್ಚಿದೆ.
Advertisement
ಆರ್ಥಿಕ ಬಿಕ್ಕಟ್ಟಿನಿಂದ ತತ್ತರಿಸಿರುವ ಶ್ರೀಲಂಕಾದಲ್ಲಿ ಜನಸಾಮಾನ್ಯರು ಮಾತ್ರವಲ್ಲದೇ ಕ್ರಿಕೆಟಿಗರೂ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಭ್ಯಾಸಕ್ಕೆ ತೆರಳಲು ಪೆಟ್ರೋಲ್ ಇಲ್ಲದೆ ಅಭ್ಯಾಸ ಮಾಡಲು ಆಗುತ್ತಿಲ್ಲ ಎಂದು ಇತ್ತೀಚೆಗೆ ಕೆಲ ಕ್ರಿಕೆಟಿಗರು ಅಳಲು ತೋಡಿಕೊಂಡಿದ್ದರು. ಇದನ್ನೂ ಓದಿ: ಸಿಂಧು ಮಡಿಲಿಗೆ ಸಿಂಗಾಪುರ ಓಪನ್ ಕಪ್
Advertisement
Advertisement
ಈ ಎಲ್ಲ ಸ್ಥಿತಿಗತಿಗಳನ್ನು ಕಂಡು ಶ್ರೀಲಂಕಾ ಕ್ರಿಕೆಟ್ ಬೋರ್ಡ್‍ನ ಕಾರ್ಯದರ್ಶಿ ಮೋಹನ್ ಡಿಸಿಲ್ವ ಏಷ್ಯಾಕಪ್-2022 ಟೂರ್ನಿಯನ್ನು ಯುಎಇಗೆ ಸ್ಥಳಾಂತರಿಸುವ ಕುರಿತಾಗಿ ಈಗಾಗಲೇ ಏಷ್ಯಾಕಪ್‍ನಲ್ಲಿ ಭಾಗವಹಿಸುತ್ತಿರುವ ದೇಶಗಳ ಕ್ರಿಕೆಟ್ ಬೋರ್ಡ್‍ಗಳೊಂದಿಗೆ ಮಾತುಕತೆ ನಡೆಸಿದ್ದಾರೆ ಎಂದು ವರದಿಯಾಗಿದೆ. ಶ್ರೀಲಂಕಾ ಬೋರ್ಡ್ ನಡೆಸಿದ ಮಾತುಕತೆ ಯಶಸ್ವಿಯಾಗಿದ್ದು ಯುಎಇಯಲ್ಲಿ ಏಷ್ಯಾಕಪ್ ಪಂದ್ಯಗಳು ನಡೆಯುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ. ಇದನ್ನೂ ಓದಿ: ಇಂದು ಏಕದಿನ ಸರಣಿ ಕೊನೆಯ ಪಂದ್ಯ, ಸರಣಿ ಗೆಲ್ಲುವ ತವಕದಲ್ಲಿ ಭಾರತ
Advertisement
ಏಷ್ಯಾಕಪ್‍ನಲ್ಲಿ ಭಾರತ, ಶ್ರೀಲಂಕಾ, ಪಾಕಿಸ್ತಾನ, ಬಾಂಗ್ಲಾದೇಶ, ಅಫ್ಘಾನಿಸ್ತಾನ ಈಗಾಗಲೇ ನೇರ ಅವಕಾಶ ಪಡೆದಿದೆ. ಹಾಂಕಾಂಗ್, ಸಿಂಗಾಪುರ್, ಕುವೈತ್ ಮತ್ತು ಯುಎಇ ತಂಡಗಳು ಅರ್ಹತಾ ಸುತ್ತಿನಲ್ಲಿ ತೇರ್ಗಡೆಗೊಂಡು 6ನೇ ತಂಡವಾಗಿ ಟೂರ್ನಿಯಲ್ಲಿ ಆಡುವ ಅವಕಾಶ ಪಡೆಯಬೇಕಾಗಿದೆ. ಟೂರ್ನಿ ಆಗಸ್ಟ್ 26 ರಿಂದ ಸೆಪ್ಟೆಂಬರ್ 11ರ ವರೆಗೆ ನಡೆಸಲು ತೀರ್ಮಾನಿಸಲಾಗಿದೆ.
ಟೂರ್ನಿ ಯುಎಇಯಲ್ಲಿ ನಡೆಯುವ ಕುರಿತಾಗಿ ಅಧಿಕೃತವಾಗಿ ಏಷ್ಯಾನ್ ಕ್ರಿಕೆಟ್ ಕೌನ್ಸಿಲ್ ಪ್ರಕಟಿಸುವ ತಯಾರಿಯಲ್ಲಿದೆ ಎಂದು ಮೂಲಗಳಿಂದ ಈಗಾಗಲೇ ವರದಿಯಾಗಿದೆ.
Live Tv
[brid partner=56869869 player=32851 video=960834 autoplay=true]