ಮುಂಬೈ: ವೆಸ್ಟ್ ಇಂಡೀಸ್ ವಿರುದ್ಧ ನಡೆದ ಏಕದಿನ ಹಾಗೂ ಟಿ20 ಸರಣಿಗಳಲ್ಲಿ ಸಿಕ್ಕ ಅವಕಾಶಗಳನ್ನು ಬಳಸಿಕೊಳ್ಳುವಲ್ಲಿ ಎಡವಿದ ಟೀಂ ಇಂಡಿಯಾ ಆಟಗಾರ ಸಂಜು ಸ್ಯಾಮ್ಸನ್ (Sanju Samson) ಅವರನ್ನ ಏಕದಿನ ಏಷ್ಯಾಕಪ್ ಟೂರ್ನಿಗೆ (Asia Cup 2023) ತಂಡದಿಂದ ಕೈಬಿಡಲು ಮುಂದಾಗಿದೆ.
ಇದೇ ಆಗಸ್ಟ್ 30 ರಿಂದ ಸೆಪ್ಟೆಂಬರ್ 17ರ ವರೆಗೆ ಏಕದಿನ ಏಷ್ಯಾಕಪ್ ಟೂರ್ನಿ ನಡೆಯಲಿದ್ದು, ಈ ಸಲುವಾಗಿ ಬಿಸಿಸಿಐ (BCCI) ಟೀಂ ಇಂಡಿಯಾಕ್ಕೆ ಆಯ್ಕೆ ಕಸರತ್ತು ನಡೆಸಿದೆ. ಈ ಬಾರಿ ಏಷ್ಯಾಕಪ್ ಟೂರ್ನಿಯ ಹಕ್ಕು ಪಾಕಿಸ್ತಾನದ (Pakistan) ಬಳಿಯೇ ಇದ್ದರೂ ಬಿಸಿಸಿಐ ಪಾಕಿಸ್ತಾನಕ್ಕೆ ಭಾರತ ತಂಡವನ್ನ ಕಳುಹಿಸಲು ನಿರಾಕರಿಸಿದ ನಂತರ ಹೈಬ್ರಿಡ್ ಮಾದರಿಯಲ್ಲಿ ನಡೆಸಲು ಏಷ್ಯನ್ ಕ್ರಿಕೆಟ್ ಸಮಿತಿ ನಿರ್ಧರಿಸಿದೆ. ಆದ್ದರಿಂದ ಪಾಕಿಸ್ತಾನ ಮತ್ತು ಶ್ರೀಲಂಕಾ (SriLanka) ಎರಡೂ ದೇಶಗಳಲ್ಲಿ ಪಂದ್ಯ ನಡೆಯುತ್ತಿದೆ.
Advertisement
Advertisement
ಸೆಪ್ಟೆಂಬರ್ 2ರಂದು ಭಾರತ ತಂಡ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ಎದುರು ಪೈಪೋಟಿ ನಡೆಸುವ ಮೂಲಕ ತನ್ನ ಅಭಿಯಾನ ಆರಂಭಿಸಲಿದೆ. ಟೂರ್ನಿಯು ಸೆಪ್ಟೆಂಬರ್ 17ರಂದು ಕೊಲಂಬೊದಲ್ಲಿ ಅಂತ್ಯಗೊಳ್ಳಲಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಪಾಕಿಸ್ತಾನ ಮತ್ತು ಭಾರತ ತಂಡಗಳು ಮೂರು ಬಾರಿ ಏಷ್ಯಾಕಪ್ ಟೂರ್ನಿಯಲ್ಲಿ ಮುಖಾಮುಖಿಯಾಗಲಿವೆ. ಇದನ್ನೂ ಓದಿ: 7 ವರ್ಷಗಳ ಬಳಿಕ ಭಾರತದ ವಿರುದ್ಧ T20 ಸರಣಿ ಜಯ – ಹೊಸ ದಾಖಲೆ ಬರೆದ ವಿಂಡೀಸ್
Advertisement
ಕೊಟ್ಟ ಅವಕಾಶ ಕೈಚೆಲ್ಲಿದ ಸಂಜು:
2021ರಲ್ಲಿ ಟೀಂ ಇಂಡಿಯಾಕ್ಕೆ (Team India) ಎಂಟ್ರಿ ಕೊಟ್ಟಿದ್ದ ಸಂಜು ಸ್ಯಾಮ್ಸನ್ ಕೇವಲ 12 ಇನ್ನಿಂಗ್ಸ್‌ಗಳಲ್ಲಿ ಮಾತ್ರವೇ ಅವಕಾಶ ಪಡೆದುಕೊಂಡಿದ್ದರು. 2022ರಿಂದ ದೀರ್ಘಕಾಲದ ವರೆಗೆ ಟೀಂ ಇಂಡಿಯಾದಿಂದ ಹೊರಗುಳಿದಿದ್ದರು. 2023ರ ವರ್ಷಾರಂಭದಲ್ಲಿ ಶ್ರೀಲಂಕಾ ವಿರುದ್ಧ ನಡೆದ ಟಿ20 ಪಂದ್ಯದಲ್ಲಿ ಅವಕಾಶ ನೀಡಲಾಗಿತ್ತಾದರೂ ಮಂಡಿ ನೋವಿನಿಂದ ಮೊದಲ ಪಂದ್ಯದ ನಂತರ ಹೊರಗುಳಿಯಬೇಕಾಯಿತು. ಆದ್ರೆ 2023ರ ಐಪಿಎಲ್‌ನಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದ್ದರಿಂದಾಗಿ ಸೂರ್ಯಕುಮಾರ್ ಯಾದವ್ ಬದಲಿಗೆ ಟೀಂ ಇಂಡಿಯಾದಲ್ಲಿ ಅವಕಾಶ ನೀಡುವಂತೆ ಅಭಿಮಾನಿಗಳು ಒತ್ತಾಯಿಸಿದ್ದರು.
Advertisement
ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಕ್ರಿಕೆಟ್ ಸರಣಿಯ 3 ಪಂದ್ಯಗಳಲ್ಲಿ ಆಡುವ ಅವಕಾಶ ಪಡೆದ ಸಂಜು ಸ್ಯಾಮ್ಸನ್ ಕ್ರಮವಾಗಿ 12, 7 ಮತ್ತು 13 ರನ್‌ಗಳನ್ನ ಮಾತ್ರವೇ ಗಳಿಸಿದರು. ಏಕದಿನ ಕ್ರಿಕೆಟ್ ಸರಣಿಯ 2 ಪಂದ್ಯಗಳಲ್ಲಿ ಅವಕಾಶ ಪಡೆದು 9 ಮತ್ತು 51 ರನ್ ಕೊಡುಗೆ ಕೊಟ್ಟರು. ಅಂತಿಮ ಒಡಿಐನಲ್ಲಿ ಅರ್ಧಶತಕ ಬಾರಿಸಿದ್ದು ಬಿಟ್ಟರೆ ಉಳಿದ ಅವರ ಬ್ಯಾಟಿಂಗ್ ಬಹಳ ನಿರಾಸೆ ಮೂಡಿಸಿತು. ಅಲ್ಲದೇ ವಿಂಡೀಸ್ ವಿರುದ್ಧ ನಿರ್ಣಾಯಕ ಪಂದ್ಯದಲ್ಲೂ ರನ್ ಗಳಿಸುವಲ್ಲಿ ವಿಫಲರಾದರು. ಹೀಗಾಗಿ ಏಷ್ಯಾ ಕಪ್ ಟೂರ್ನಿಗೆ ಆಯ್ಕೆ ಮಾಡಲಾಗುವ 15 ಆಟಗಾರರ ತಂಡದಲ್ಲಿ ಸ್ಥಾನ ಪಡೆಯಲು ಸಂಜು ವಿಫಲರಾಗಿದ್ದಾರೆ ಎಂದು ವರದಿಯಾಗಿದೆ.
ಸದ್ಯ ಏಷ್ಯಾ ಕಪ್ ಟೂರ್ನಿಯನ್ನು ಗಮನಿಸಿ ಮಾತ್ರ ಆಯ್ಕೆ ಸಮಿತಿ ತಂಡವನ್ನು ರಚನೆ ಮಾಡುತ್ತಿದೆ. ಮುಂದಿನ ದಿನಗಳಲ್ಲಿ ಸಮಯ ತೆಗೆದುಕೊಂಡು ಐಸಿಸಿ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಗೆ ತಂಡ ರಚಣೆ ಮಾಡಲಾಗುವುದು ಎಂದು ಬೆಳವಣಿಗೆಗೆ ಉನ್ನತ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಸೋಲುವುದು ಕೂಡ ಒಳ್ಳೆಯದೇ, ಒಂದು ಸರಣಿ ಮ್ಯಾಟರ್ ಅಲ್ವೇ ಅಲ್ಲ – ಪಾಂಡ್ಯ ಸಮರ್ಥನೆ
ಏಕದಿನ ಕ್ರಿಕೆಟ್‌ನಲ್ಲಿ ಈಗಾಗಲೇ ದ್ವಿಶತಕ ಬಾರಿಸಿ ದಿಗ್ಗಜರೊಂದಿಗೆ ವಿಶ್ವ ದಾಖಲೆಯ ಪಟ್ಟಿ ಸೇರಿರುವ ಇಶಾನ್ ಕಿಶನ್, ವೆಸ್ಟ್ ಇಂಡೀಸ್ ವಿರುದ್ಧದ ಒಡಿಐ ಸರಣಿಯ ಮೂರೂ ಪಂದ್ಯಗಳಲ್ಲಿ ಅರ್ಧಶತಕ ಬಾರಿಸಿ ಅಬ್ಬರಿಸಿದರು. ಹೀಗಾಗಿ ಏಷ್ಯಾ ಕಪ್‌ಗೆ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಆಗಿ ಇಶಾನ್ ಕಿಶನ್ ಆಯ್ಕೆ ಆಗುವುದು ಬಹುತೇಕ ಖಚಿತವಾಗಿದೆ. ಸಂಜು ಏಕದಿನ ಕ್ರಿಕೆಟ್‌ನಲ್ಲಿ ಈವರೆಗೆ ಆಡಿರುವ 13 ಪಂದ್ಯಗಳಲ್ಲಿ 55.71ರ ಗಮನಾರ್ಹ ಸರಾಸರಿ ಹೊಂದಿದ್ದಾರೆ.
Web Stories