ಕೊಲಂಬೊ: ಟೂರ್ನಿಯುದ್ದಕ್ಕೂ ವರುಣನ ಕಾಟವಿದ್ದರೂ ಲೀಗ್ ಹಂತದಲ್ಲಿ ಭಾರತ ಹಾಗೂ ಪಾಕಿಸ್ತಾನ (Ind vs Pak) ನಡುವಣ ಒಂದೇ ಒಂದು ಪಂದ್ಯ ಮಾತ್ರ ಮಳೆಯಿಂದ (Rain) ರದ್ದಾಗಿತ್ತು. ಇದೀಗ ಫೈನಲ್ ಪಂದ್ಯಕ್ಕೂ ಆರಂಭದಲ್ಲೇ ಮಳೆಯ ಕಾಟ ಶುರುವಾಗಿದೆ.
ಏಷ್ಯಾ ಕಪ್-2023 ಟೂರ್ನಿಯ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ (Team India), ಶ್ರೀಲಂಕಾ ವಿರುದ್ಧ ಸೆಣಸಲು ಕಣಕ್ಕಿಳಿದಿದೆ. ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ ದಾಖಲೆಯ 8ನೇ ಟ್ರೋಫಿ ಗೆಲುವಿನತ್ತ ಕಣ್ಣಿಟ್ಟಿದ್ದು, ಶ್ರೀಲಂಕಾ (Sri Lanka) ತಂಡ 7ನೇ ಬಾರಿ ಟ್ರೋಫಿ ಗೆಲ್ಲುವ ಲೆಕ್ಕಾಚಾರ ಮಾಡಿದೆ. ಅಂದಹಾಗೆ ಏಷ್ಯಾ ಕಪ್ ಇತಿಹಾಸದಲ್ಲಿ ಟೀಂ ಇಂಡಿಯಾ, ಶ್ರೀಲಂಕಾ ಹೆಚ್ಚು ಬಾರಿ ಟ್ರೋಫಿ ಗೆದ್ದ ದಾಖಲೆ ಹೊಂದಿದೆ. ಇದೀಗ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ಬ್ಯಾಟಿಂಗ್ ಆಯ್ದುಕೊಂಡಿದೆ.
Advertisement
Advertisement
ಫೈನಲ್ ಕನದಕ್ಕೆ ಆರಂಭದಲ್ಲೇ ಮಳೆ ಅಡ್ಡಿಯುಂಟುಮಾಡಿದೆ. ಸುಮಾರು 20 ನಿಮಿಷಗಳ ಕಾಲ ಮಳೆ ಸುರಿದು ಬಿಡುವು ನೀಡಿದೆ, ಭಾರತ ಹಾಗೂ ಶ್ರೀಲಂಕಾ ನಡುವಣ ಫೈನಲ್ ಪಂದ್ಯಕ್ಕೆ ಈಗಾಗಲೇ ಮೀಸಲು ದಿನವನ್ನ ನಿಗದಿಪಡಿಸಲಾಗಿದೆ. ಇದಕ್ಕೂ ಮುನ್ನ ಭಾರತ ಹಾಗೂ ಪಾಕಿಸ್ತಾನ ಸೂಪರ್-4ರ ಏಕೈಕ ಪಂದ್ಯಕ್ಕೆ ಮಾತ್ರ ಮೀಸಲು ದಿನ ನಿಗದಿಪಡಿಸಲಾಗಿತ್ತು. ಸೆ.17 ರಂದು ಭಾನುವಾರ ಫೈನಲ್ ಪಂದ್ಯದಲ್ಲಿ ಫಲಿತಾಂಶ ನಿರ್ಧಾರವಾಗದಿದ್ದರೆ, ಮೀಸಲು ದಿನವಾದ ಸೋಮವಾರ (ಸೆಪ್ಟೆಂಬರ್ 18) ಪಂದ್ಯವನ್ನು ಮುಂದುವರಿಸಲಾಗುತ್ತದೆ. ಒಂದು ವೇಳೆ ಮೀಸಲು ದಿನವೂ ಮಳೆ ಅಡಿಯುಂಟುಮಾಡಿದಲ್ಲಿ, ಇತ್ತಂಡಗಳನ್ನೂ ಚಾಂಪಿಯನ್ ಎಂದು ಘೋಷಿಸುವುದಾಗಿ ಏಷ್ಯನ್ ಕ್ರಿಕೆಟ್ ಮಂಡಳಿ ತಿಳಿಸಿದೆ.
Advertisement
Advertisement
ವಾಷಿಂಗ್ಟನ್ ಸುಂದರ್ ಕಣಕ್ಕೆ:
ಟೀಂ ಇಂಡಿಯಾ ತನ್ನ ಆಡುವ 11ರ ಬಳಗದಲ್ಲಿ ಮಹತ್ವದ ಬದಲಾವಣೆ ತಂದುಕೊಂಡಿದೆ. ಗಾಯಾಳು ಅಕ್ಷರ್ ಪಟೇಲ್‌ಗೆ ಬ್ಯಾಕಪ್ ಆಗಿ ತಂಡ ಸೇರಿದ್ದ ಆಲ್‌ರೌಂಡರ್ ವಾಷಿಂಗ್ಟನ್ ಸುಂದರ್ ಫೈನಲ್ ಪಂದ್ಯಕ್ಕೆ ತಂಡದ ಆಡುವ 11ರ ಬಳಗ ಸೇರಿದ್ದಾರೆ. ಈ ವರ್ಷಾರಂಭದಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆದ ಟಿ20 ಸರಣಿಯಲ್ಲೂ ವಾಷಿಂಗ್ಟನ್ ಸುಂದರ್ ಉತ್ತಮ ಬ್ಯಾಟಿಂಗ್ ಹಾಗೂ ಬೌಲಿಂಗ್ ಪ್ರದರ್ಶನ ತೋರಿದ್ದರು. ಇದನ್ನೂ ಓದಿ: Asia Cup 2023ː ಬಿಗಿ ಬೌಲಿಂಗ್ ಹಿಡಿತಕ್ಕೆ ಲಂಕಾ ಭಸ್ಮ – ಭಾರತಕ್ಕೆ 41 ರನ್‌ಗಳ ಭರ್ಜರಿ ಜಯ
ಟೀಂ ಇಂಡಿಯಾ ಪ್ಲೇಯಿಂಗ್-11
ರೋಹಿತ್ ಶರ್ಮಾ (ನಾಯಕ್), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ (ವಿಕೆಟ್‌ಕೀಪರ್), ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಜಸ್‌ಪ್ರೀತ್ ಬುಮ್ರಾ, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್. ಇದನ್ನೂ ಓದಿ: Asia Cup 2023: ಮಳೆ ಬಿಡುವು – ನಿರ್ಣಾಯಕ ಪಂದ್ಯದಲ್ಲಿ ಲಂಕಾ-ಪಾಕ್‌ಗೆ ಶಾಕ್
ಶ್ರೀಲಂಕಾ ತಂಡದ ಪ್ಲೇಯಿಂಗ್-11
ಪತುಮ್ ನಿಸ್ಸಂಕ, ಕುಶಲ್ ಪೆರೇರ, ಕುಶಲ್ ಮೆಂಡಿಸ್ (ವಿಕೆಟ್‌ಕೀಪರ್), ಸಾದೀರ ಸಮರವಿಕ್ರಮ, ಚರಿತ್ ಅಸಲಂಕ, ಧನಂಜಯ ಡಿಸಿಲ್ವಾ, ದಸುನ್ ಶನಕ (ನಾಯಕ), ದುನಿತ್ ವೆಲ್ಲಾಳಗೆ, ದುಶನ್ ಹೇಮಂತ, ಪ್ರಮೋದ್ ಮಧೂಶನ್, ಮತೀಶ ಪತಿರಣ.
Web Stories