ನವದೆಹಲಿ: ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ACC) ಮುಂಬರುವ ಏಷ್ಯಾ ಕಪ್ 2023 ಟೂರ್ನಿಯ (Asia Cup 2023) ಅಧಿಕೃತ ವೇಳಾಪಟ್ಟಿ ಹೊರಬಿದ್ದಿದೆ. ಪಂದ್ಯಾವಳಿಯು ಆಗಸ್ಟ್ 30 ರಂದು ಪ್ರಾರಂಭವಾಗಲಿದ್ದು, ಸೆಪ್ಟೆಂಬರ್ 17 ರವರೆಗೆ ನಡೆಯಲಿದೆ.
ಟೂರ್ನಿಯಲ್ಲಿ ಒಟ್ಟು 13 ಪಂದ್ಯಗಳು ನಡೆಯಲಿದ್ದು, ಭಾರತ, ಪಾಕಿಸ್ತಾನ, ಶ್ರೀಲಂಕಾ, ಬಾಂಗ್ಲಾದೇಶ, ಅಫ್ಘಾನಿಸ್ತಾನ ಮತ್ತು ನೇಪಾಳ ರಾಷ್ಟ್ರಗಳು ಭಾಗವಹಿಸಲಿವೆ. ಇದನ್ನೂ ಓದಿ: RCB ಏಕೆ ಐಪಿಎಲ್ ಟ್ರೋಫಿ ಗೆದ್ದಿಲ್ಲ – ತಂಡದಿಂದ ಕೈಬಿಟ್ಟ ಮೇಲೆ ಪ್ರಾಮಾಣಿಕ ಉತ್ತರ ಕೊಟ್ಟ ಚಾಹಲ್
Advertisement
Advertisement
ಈ ಕುರಿತು ಏಷ್ಯಾ ಕ್ರಿಕೆಟ್ ಕೌನ್ಸಿಲ್ ಅಧ್ಯಕ್ಷ ಜಯ್ ಶಾ ಟ್ವೀಟ್ ಮಾಡಿ, ಬಹು ನಿರೀಕ್ಷಿತ ಪುರುಷರ ODI Asia Cup 2023 ವೇಳಾಪಟ್ಟಿಯನ್ನು ಪ್ರಕಟಿಸಲು ನನಗೆ ಸಂತೋಷವಾಗಿದೆ. ಇದು ವೈವಿಧ್ಯಮಯ ರಾಷ್ಟ್ರಗಳನ್ನು ಒಟ್ಟಿಗೆ ಬೆಸೆಯುವ ಏಕತೆ ಮತ್ತು ಒಗ್ಗಟ್ಟಿನ ಸಂಕೇತವಾಗಿದೆ. ಕ್ರಿಕೆಟ್ ಶ್ರೇಷ್ಠತೆಯ ಸಂಭ್ರಮದಲ್ಲಿ ಕೈಜೋಡಿಸೋಣ ಎಂದು ಬರೆದುಕೊಂಡಿದ್ದಾರೆ.
Advertisement
ಪಾಕ್-ಭಾರತ ಹೈವೋಲ್ಟೇಜ್ ಪಂದ್ಯ
ಸೆಪ್ಟೆಂಬರ್ 2 ರಂದು ಶ್ರೀಲಂಕಾದ ಕ್ಯಾಂಡಿಯಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ (India – Pakistan Match) ನಡುವಣ ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಇದನ್ನೂ ಓದಿ: Test Cricketː ನಂ.1 ಪಟ್ಟ ಕಳೆದುಕೊಳ್ಳುವ ಭೀತಿಯಲ್ಲಿ ಭಾರತ!
Advertisement
ಏಷ್ಯಾ ಕಪ್ 2023 ಟೂರ್ನಿಯು ಸಂಪೂರ್ಣವಾಗಿ ಪಾಕಿಸ್ತಾನದ ಆತಿಥ್ಯದಲ್ಲಿ ಆಯೋಜನೆ ಆಗಬೇಕಿತ್ತು. ಪಾಕಿಸ್ತಾನದಲ್ಲಿ ನಡೆದರೆ ಟೀಮ್ ಇಂಡಿಯಾ ಪಾಲ್ಗೊಳ್ಳುವುದಿಲ್ಲ ಎಂದು ಬಿಸಿಸಿಐ ಹೇಳಿತ್ತು. ಹೀಗಾಗಿ ಎಸಿಸಿ ಕೂಡ ತನ್ನ ನಿಲುವು ಬದಲಾಯಿಸಿತ್ತು. ಹೈಬ್ರಿಡ್ ನಿಯಮದೊಂದಿಗೆ ಶ್ರೀಲಂಕಾದಲ್ಲಿ ಭಾರತದ ಪಂದ್ಯಗಳನ್ನು ನಡೆಸಲು ಮುಂದಾಗಿದೆ.
ಭಾರತ, ಪಾಕಿಸ್ತಾನ, ನೇಪಾಳ ತಂಡಗಳು ‘ಎ’ ಗುಂಪಿನಲ್ಲಿದ್ದು, ಅಫ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ಶ್ರೀಲಂಕಾ ‘ಬಿ’ ಗುಂಪಿನಲ್ಲಿ ಪೈಪೋಟಿ ನಡೆಸಲಿವೆ. ಗ್ರೂಪ್ ಹಂತದಲ್ಲಿ ಅಗ್ರ ನಾಲ್ಕು ಸ್ಥಾನ ಪಡೆಯುವ ತಂಡಗಳು ಸೂಪರ್ 4 ಹಂತಕ್ಕೆ ತೇರ್ಗಡೆ ಆಗಲಿವೆ. ಸೂಪರ್ 4 ಹಂತದಲ್ಲಿ ಅಗ್ರ 2 ಸ್ಥಾನ ಪಡೆಯುವ ತಂಡಗಳ ನಡುವೆ ಫೈನಲ್ ನಡೆಯಲಿದೆ. ಇದನ್ನೂ ಓದಿ: ಅಂದು ಭಾರತಕ್ಕೆ ವಿಶ್ವಕಪ್ ಗೆದ್ದುಕೊಟ್ಟ ಹೀರೋ, ಈಗ ನೆರೆ ಸಂತ್ರಸ್ತರ ಪಾಲಿನ ಆಪದ್ಬಾಂಧವ!
Web Stories