ದುಬೈ: ಏಷ್ಯಾಕಪ್ 2025ರ ತನ್ನ ಮೊದಲ ಪಂದ್ಯದಲ್ಲೇ ಯುಎಇ ವಿರುದ್ಧ ಟೀಂ ಇಂಡಿಯಾ 9 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಕೇವಲ 4.3 ಓವರ್‌ನಲ್ಲೇ ಗುರಿ ತಲುಪಿ ಭಾರತ ತಂಡ ಗೆಲುವಿನ ನಗೆ ಬೀರಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಯುಎಇ 13.1 ಓವರ್‌ಗೆ ಕೇವಲ 57 ರನ್ ಗಳಿಸಿ ಆಲೌಟ್ ಆಯಿತು. ಸಾಧಾರಣ ಮೊತ್ತ ಗುರಿ ಬೆನ್ನತ್ತಿದ ಭಾರತ ತಂಡ ಕೇವಲ 4.3 ಓವರ್‌ನಲ್ಲೇ ಗುರಿ ತಲುಪಿ ಗೆದ್ದು ಬೀಗಿತು.
ಟೀಂ ಇಂಡಿಯಾ ಪರ ಅಭಿಷೇಕ್ ಶರ್ಮಾ 30, ಶುಭಮನ್ ಗಿಲ್ 20 (ಔಟಾಗದೇ), ಸೂರ್ಯಕುಮಾರ್ ಯಾದವ್ 7 (ಔಟಾಗದೇ) ರನ್ ಗಳಿಸಿದರು. ಅಂತಿಮವಾಗಿ ಸೂರ್ಯ ಪಡೆ ಯುಎಇ ವಿರುದ್ಧ 9 ವಿಕೆಟ್‌ಗಳ ಜಯ ಸಾಧಿಸಿತು.
ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಪರ ಅಲಿಶನ್ ಶರಾಫು 22, ಮಹಮ್ಮದ್ ವಾಸಿಮ್ 19 ರನ್ ಗಳಿಸಿದ್ದು ಬಿಟ್ಟರೆ ಯಾವೊಬ್ಬ ಆಟಗಾರನು ಸಹ ಒಂದಂಕಿ ರನ್ ದಾಟಲಿಲ್ಲ. ಟೀಂ ಇಂಡಿಯಾ ಪರ ಸ್ಪಿನ್ನರ್ ಕುಲ್ದೀಪ್ ಯಾದವ್ ಉತ್ತಮ ಬೌಲಿಂಗ್ ಪ್ರದರ್ಶನ ತೋರಿದರು. ಕುಲ್ದೀಪ್ 4 ವಿಕೆಟ್ ಕಿತ್ತರು. ಶಿವಂ ದುಬೆ 3 ವಿಕೆಟ್ ಕಬಳಿಸಿದರು. ಜಸ್ಪ್ರಿತ್ ಬುಮ್ರಾ, ಅಕ್ಷರ್ ಪಟೇಲ್, ವರುಣ್ ಚಕ್ರವರ್ತಿ ತಲಾ 1 ವಿಕೆಟ್ ಪಡೆದರು.

