ದುಬೈ: ಭಾರತ ಮತ್ತು ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಕ್ರಿಕೆಟ್ ಪಂದ್ಯಕ್ಕೆ ದಿನಾಂಕ ನಿಗದಿಯಾಗಿದೆ. ಏಷ್ಯಾ ಕಪ್ ಟೂರ್ನಿಯ ವೇಳಾಪಟ್ಟಿ ಪ್ರಕಟವಾಗಿದ್ದು, ಆಗಸ್ಟ್ 28 ರಂದು ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ಶಾರ್ಜಾದಲ್ಲಿ ನಡೆಯಲಿದೆ.
ಈ ಬಾರಿ ಏಷ್ಯಾ ಕಪ್ ಪಂದ್ಯಗಳು ಶ್ರೀಲಂಕಾದಲ್ಲಿ ನಡೆಯಬೇಕಿತ್ತು. ಆದರೆ ಆಂತರಿಕ ಬಿಕ್ಕಟ್ಟಿನಿಂದ ಪಂದ್ಯ ಯುಎಇಗೆ ಸ್ಥಳಾಂತರಿಸಲಾಗಿದೆ. ಭಾನುವಾರ ರಾತ್ರಿ 7:30ಕ್ಕೆ ಶಾರ್ಜಾದಲ್ಲಿ ಭಾರತ ಮತ್ತು ಪಾಕಿಸ್ತಾನ ಸೆಣಸಾಡಲಿವೆ.
Advertisement
Advertisement
ಕೊರೊನಾ ಕಾರಣದಿಂದ 2 ವರ್ಷಗಳ ಕಾಲ ಕ್ರಿಕೆಟ್ ಪಂದ್ಯಗಳು ನಡೆದಿರಲಿಲ್ಲ. ಹೀಗಾಗಿ ಈ ಬಾರಿಯ ಟೂರ್ನಿಯ ಮೇಲೆ ಹೆಚ್ಚಿನ ನಿರೀಕ್ಷೆಯಿದೆ. ಇದನ್ನೂ ಓದಿ: ಲಾನ್ ಬಾಲ್ಸ್‌ನಲ್ಲಿ ಇತಿಹಾಸ ಸೃಷ್ಟಿ – ಚಿನ್ನ ಗೆದ್ದ ವನಿತೆಯರು
Advertisement
ಒಟ್ಟು 6 ತಂಡಗಳು ಕಪ್ಗಾಗಿ ಸೆಣಸಾಡಲಿದ್ದು, ಈ 6 ತಂಡಗಳನ್ನು 2 ಗುಂಪುಗಳಾಗಿ ವಿಂಗಡಿಸಲಾಗಿದೆ. ಆಗಸ್ಟ್ 27 ರಿಂದ ಟೂರ್ನಿ ಆರಂಭವಾಗಲಿದ್ದು, ಸೆಪ್ಟೆಂಬರ್ 11ರಂದು ಫೈನಲ್ ಪಂದ್ಯ ನಡೆಯಲಿದೆ. ಎಲ್ಲಾ ಪಂದ್ಯಗಳು ಭಾರತೀಯ ಕಾಲಮಾನ ರಾತ್ರಿ 7:30ಕ್ಕೆ ಆರಂಭವಾಗಲಿದೆ.
Advertisement
The wait is finally over as the battle for Asian supremacy commences on 27th August with the all-important final on 11th September.
The 15th edition of the Asia Cup will serve as ideal preparation ahead of the ICC T20 World Cup. pic.twitter.com/QfTskWX6RD
— Jay Shah (@JayShah) August 2, 2022
ಇಲ್ಲಿಯವರೆಗೆ ನಡೆದ 14 ಆವೃತ್ತಿಗಳಲ್ಲಿ ಭಾರತ 7 ಪ್ರಶಸ್ತಿಯನ್ನು ಗೆದ್ದುಕೊಂಡಿದೆ. 1984, 1988, 1990/91, 1995, 2010, 2016 ಮತ್ತು 2018 ರಲ್ಲಿ ಟ್ರೋಫಿ ಜಯಿಸಿದೆ. ಶ್ರೀಲಂಕಾ 1986, 1997, 2004, 2008 ರಲ್ಲಿ ಜಯಗಳಿಸಿದರೆ 2000, 2012 ರಲ್ಲಿ ಪಾಕಿಸ್ತಾನ ಗೆದ್ದುಕೊಂಡಿದೆ.
ತಂಡಗಳು
ಗ್ರೂಪ್ A – ಭಾರತ, ಪಾಕಿಸ್ತಾನ, ಕ್ವಾಲಿಫೈಯರ್ ತಂಡ
ಗ್ರೂಪ್ B- ಬಾಂಗ್ಲಾದೇಶ, ಅಫ್ಘಾನಿಸ್ತಾನ, ಶ್ರೀಲಂಕಾ