ಹುಬ್ಬಳ್ಳಿ: ನಗರದ ಬೈರಿದೇವರಕೊಪ್ಪದಲ್ಲಿ ಈಶ್ವರಿ ವಿಶ್ವವಿದ್ಯಾಲಯ ನಿರ್ಮಿಸಿರುವ ಏಷ್ಯಾದದ ಅತಿದೊಡ್ಡ ಭಗವದ್ಗೀತಾ ಜ್ಞಾನಲೋಕ ಮ್ಯುಸಿಯಂ ಮೇ 15 ರಂದು ಲೋಕಾರ್ಪಣೆಗೊಳ್ಳಲಿದೆ.
ಐದೂವರೆ ಎಕರೆಯಲ್ಲಿ ನಿರ್ಮಿಸಿರುವ ಜ್ಞಾನಲೋಕ ಮ್ಯೂಸಿಯಂನಲ್ಲಿ 36/13 ಅಳತೆ 114 ಕೋಣೆಗಳಿವೆ. ಇದರಲ್ಲಿ ಎಲ್ಲರಿಗೂ ಅರ್ಥವಾಗುವ ರೀತಿಯಲ್ಲಿ ಭಗವದ್ಗೀತೆಯ ಶ್ಲೋಕಗಳ ಸಾರಾಂಶವನ್ನು ತಿಳಿಸಲಾಗಿದೆ. ಇದನ್ನೂ ಓದಿ: ನನಗೆ ಅವಕಾಶ ಕೊಟ್ಟಿದ್ದು, ಬೆನ್ನಲೆಬಾಗಿ ನಿಂತಿದ್ದು ರಾಹುಲ್‍ಗಾಂಧಿ: ರಮ್ಯಾ ಟ್ವೀಟ್
Advertisement
Advertisement
ಈಶ್ವರಿ ವಿವಿ ಸಂಚಾಲಕಿ ಬ್ರಹ್ಮಕುಮಾರಿ ನಿರ್ಮಲಾದೇವಿಯವರು ಈ ಬಗ್ಗೆ ಸುದ್ದಿಗೊಷ್ಠಿ ನಡೆಸಿ ಮಾತನಾಡಿದ್ದು, 1,500 ಜನರ ಸಾಮರ್ಥ್ಯದ ಆಧ್ಯಾತ್ಮಿಕ ತರಬೇತಿ ಸಭಾಂಗಣ ಹಾಗೂ ಆಧ್ಯಾತ್ಮಿಕ, ಯೋಗ ತರಬೇತಿ ಶಿಕ್ಷಣ ನೀಡಲಾಗುತ್ತದೆ. 200 ಜನರಿಗೆ ಅನುಕೂಲವಾಗುವಂತೆ ವಸತಿ ವ್ಯವಸ್ಥೆ ನಿರ್ಮಿಸಲಾಗಿದೆ.
Advertisement
Advertisement
15 ರಂದು ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಜಗದೀಶ್ ಶೆಟ್ಟರ್ ಸೇರಿ ವಿವಿಧ ಸಚಿವರು ಹಾಗೂ ಈಶ್ವರಿ ವಿವಿಯ ರಾಜ ಋಷಿಗಳು ಪಾಲ್ಗೊಳ್ಳಲಿದ್ದಾರೆ ಎಂದರು. ಇದನ್ನೂ ಓದಿ: ಯಾವಾಗ ಸಿಎಂ ಸ್ಥಾನಕ್ಕೆ ಕೂರ್ತೀವಿ ಎಂದು ಕನಸು ಕಾಣ್ತಿದ್ದಾರೆ: ಡಿಕೆಶಿಗೆ ಟಾಂಗ್ ಕೊಟ್ಟ ಬಿ.ವೈ.ವಿಜಯೇಂದ್ರ