ಕೊಲಂಬೊ: ಬೌಲಿಂಗ್‌ನಲ್ಲಿ ಉತ್ತಮ ಹಿಡಿತ ಸಾಧಿಸಿದ್ದ ಶ್ರೀಲಂಕಾ (Sri Lanka) ತಂಡ ಮಂದಗತಿಯ ಬ್ಯಾಟಿಂಗ್ ಹೊರತಾಗಿಯೂ ಬಾಂಗ್ಲಾದೇಶದ (Bangladesh) ವಿರುದ್ಧ 5 ವಿಕೆಟ್‌ಗಳ ಜಯ ಸಾಧಿಸಿದೆ. ಈ ಮೂಲಕ ಏಕದಿನ ಏಷ್ಯಾಕಪ್ (AsiaCup) ಟೂರ್ನಿಯಲ್ಲಿ ಶುಭಾರಂಭ ಕಂಡಿದೆ.
ಶ್ರೀಲಂಕಾದ ಪಲ್ಲೆಕೆಲೆ ಕ್ರೀಡಾಂಗಣದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ ತಂಡ 42.4 ಓವರ್‌ಗಳಲ್ಲಿ 164 ರನ್‌ಗಳಿಗೆ ಸರ್ವಪತನ ಕಂಡಿತು. ಅಲ್ಪ ಮೊತ್ತದ ಗುರಿ ಬೆನ್ನತ್ತಿದ್ದ ಲಂಕಾ 39 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 165 ರನ್ ಗಳಿಸಿ ಗೆಲುವು ಸಾಧಿಸಿತು. ಇದನ್ನೂ ಓದಿ: 5,966 ಕೋಟಿ ರೂ.ಗೆ BBCI ಮಾಧ್ಯಮ ಹಕ್ಕು ಪಡೆದ Viacom18
Advertisement
Advertisement
ಅಲ್ಪ ಮೊತ್ತದ ಗುರಿ ಬೆನ್ನತ್ತಿದ್ದ ಲಂಕಾ ತಂಡಕ್ಕೂ ಆರಂಭಿಕ ಆಘಾತ ಎದುರಾಗಿತ್ತು. ಆರಂಭಿಕರಾಗಿ ಕಣಕ್ಕಿಳಿದ ಪಾತುಂ ನಿಸ್ಸಾಂಕ (14 ರನ್) ಹಾಗೂ ದಿಮುತ್ ಕರುಣಾರತ್ನೆ (1 ರನ್) ಜೋಡಿ ಉತ್ತಮ ಆರಂಭ ಪಡೆಯುವಲ್ಲಿ ವಿಫಲವಾಯಿತು. ಈ ಬೆನ್ನಲ್ಲೇ ಕುಸಲ್ ಮೆಂಡೀಸ್ ಸಹ 5 ರನ್‌ಗಳಿಗೆ ವಿಕೆಟ್ ಕೈಚೆಲ್ಲಿ ಪೆವಿಲಿಯನ್ ಸೇರಿಕೊಂಡರು. ಆದ್ರೆ ಮಧ್ಯಮ ಕ್ರಮಾಂಕದಲ್ಲಿ ಜೊತೆಗೂಡಿದ ಸದೀರ ಸಮರವಿಕ್ರಮ, ಚರಿತ್ ಅಸಲಂಕ ಶತಕದ ಜೊತೆಯಾಟದಿಂದ ಗೆಲುವಿನ ಹಾದಿಯತ್ತ ಸಾಗಿತು.
Advertisement
Advertisement
4ನೇ ವಿಕೆಟ್‌ಗೆ ಈ ಜೋಡಿ 119 ರನ್‌ಗಳ ಜೊತೆಯಾಟ ನೀಡಿತು. ಸಮರವಿಕ್ರಮ 77 ಎಸೆತಗಳಲ್ಲಿ 56 ರನ್ ಗಳಿಸಿದ್ರೆ, ಅಸಲಂಕ 92 ಎಸೆತಗಳಲ್ಲಿ ಅಜೇಯ 62 ರನ್ (5 ಬೌಂಡರಿ, 1 ಸಿಕ್ಸರ್) ಸಿಡಿಸಿ ಮಿಂಚಿದರು. ಕೊನೆಯಲ್ಲಿ ನಾಯಕ ದಸುನ್ ಶನಾಕ (Dasun Shanaka) 21 ಎಸೆತಗಳಲ್ಲಿ 14 ರನ್ ಗಳಿಸಿ ಜಯದ ದಡ ಮುಟ್ಟಿಸಿದರು.
ಬಾಂಗ್ಲಾ ಪರ ನಾಯಕ ಶಕೀಬ್ ಅಲ್ ಹಸನ್ 2 ವಿಕೆಟ್ ಕಿತ್ತರೆ, ತಸ್ಕಿನ್ ಅಹ್ಮದ್, ಶೋರಿಫುಲ್ ಇಸ್ಲಾಂ ಹಾಗೂ ಮೆಹದಿ ಹಸನ್ (Shakib Al Hasan) ತಲಾ ಒಂದೊಂದು ವಿಕೆಟ್ ಪಡೆದರು. ಇದನ್ನೂ ಓದಿ: ಭಾರತೀಯರು ಎಲ್ಲಿ ಬೇಕಾದ್ರೂ ಜಯಿಸ್ತಾರೆ ಅನ್ನೋದಕ್ಕೆ ನೀವು ಮಾದರಿ – ಪ್ರಜ್ಞಾನಂದ ಕುಟುಂಬ ಭೇಟಿ ಮಾಡಿದ ಮೋದಿ
ಇದಕ್ಕೂ ಮುನ್ನ ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ ತಂಡ ಲಂಕಾ ಬೌಲರ್‌ಗಳ ದಾಳಿಗೆ ತತ್ತರಿಸಿತು. 3ನೇ ಕ್ರಮಾಂಕದಲ್ಲಿ ಬಂದ ನಜ್ಮುಲ್ ಹೊಸೈನ್ ಶಾಂತೋ 122 ಎಸೆತಗಳಲ್ಲಿ 89 ರನ್ (7 ಬೌಂಡರಿ), ತೌಹಿದ್ ಹೃದಯೊಯ್ 20 ರನ್ ಗಳಿಸಿದರು. ಅಗ್ರ ಕ್ರಮಾಂಕದ ಬ್ಯಾಟರ್‌ಗಳು ಕೈಚೆಲ್ಲಿದ ಪರಿಣಾಮ ತಂಡಕ್ಕೆ ಸೋಲಾಯಿತು.
ತೀಕ್ಷ್ಣ ಬೌಲಿಂಗ್ ಬಾಂಗ್ಲಾ ತತ್ತರ: ಮೊದಲು ಫೀಲ್ಟಿಂಗ್ ಮಾಡುವ ಅವಕಾಶ ಪಡೆದ ಲಂಕಾ ಪರ ಬೌಲರ್‌ಗಳು ಉತ್ತಮ ಹಿಡಿತ ಸಾಧಿಸುವಲ್ಲಿ ಯಶಸ್ವಿಯಾದರು. ಮಾರಕ ಬೌಲಿಂಗ್ ದಾಳಿ ನಡೆಸಿದ ಮಥೀಶ ಪತಿರಣ 7.4 ಓವರ್‌ಗಳಲ್ಲಿ 32 ರನ್ ಬಿಟ್ಟುಕೊಟ್ಟು 4 ವಿಕೆಟ್ ಕಿತ್ತರೆ, ಮಹೀಶ್ ತೀಕ್ಷಣ 2 ವಿಕೆಟ್, ಧನಂಜಯ ಡಿ ಸಿಲ್ವಾ, ದುನಿತ್ ಹಾಗೂ ದಸುನ್ ಶನಾಕ ತಲಾ ಒಂದೊಂದು ವಿಕೆಟ್ ಪಡೆದು ಮಿಂಚಿದರು.
Web Stories