ಹ್ಯಾಂಗ್‌ಝೌ: ಇದೇ ಮೊದಲ ಬಾರಿಗೆ ಏಷ್ಯನ್ ಗೇಮ್ಸ್‌ನಲ್ಲಿ (Asian Games 2023) ಪಾಲ್ಗೊಂಡಿರುವ ಭಾರತೀಯ ಮಹಿಳಾ ಕ್ರಿಕೆಟ್ ತಂಡ (Indian Women’s Team) ಚಿನ್ನದ ಪದಕ ಗೆದ್ದು ಇತಿಹಾಸ ನಿರ್ಮಿಸಿದೆ. 2014ರಲ್ಲಿ ಕಂಚಿನ ಪದಕ ಗೆದ್ದಿದ್ದ ಶ್ರೀಲಂಕಾ ತಂಡ ಈ ಬಾರಿ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡಿದೆ.
???????? ????????????????????????????-????????????????????????!
The incredible women’s cricket team of India strike GOLD for the first time ever, clinching a thrilling victory against Sri Lanka! ???????? Let’s celebrate these remarkable women who’ve made India proud at #AsianGames2022! ???????? #Cheer4India pic.twitter.com/0xUrGdgfbA
— SAI Media (@Media_SAI) September 25, 2023
Advertisement
ಝೆಜಿಯಾಂಗ್ ಟೆಕ್ ವಿವಿ ಕ್ರೀಡಾಂಗಣದಲ್ಲಿಂದು ನಡೆದ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಭಾರತೀಯ ಮಹಿಳಾ ತಂಡ 20 ಓವರ್‌ಗಳಲ್ಲಿ 116 ರನ್ ಗಳಿಸಿತ್ತು. ಅಲ್ಪ ಮೊತ್ತದ ಗುರಿ ಬೆನ್ನತ್ತಿದ್ದ ಶ್ರೀಲಂಕಾ (SriLanka) ತಂಡ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ ಕೇವಲ 97 ರನ್ ಗಳಿಸಲಷ್ಟೇ ಸಾಧ್ಯವಾಗಿ ಸೋಲೊಪ್ಪಿಕೊಂಡಿತು. ಇದರಿಂದ ಭಾರತ 19 ರನ್‌ಗಳ ಜಯ ಸಾಧಿಸಿ ಚಿನ್ನದ ಪದಕ್ಕೆ ಕೊರಳೊಡ್ಡಿತು. ಇದನ್ನೂ ಓದಿ: Asian Games 2023: ಭಾರತಕ್ಕೆ ಮೂರು ಬೆಳ್ಳಿ, ಎರಡು ಕಂಚಿನ ಪದಕ
Advertisement
IT’S A GOLD ????
Congratulations to our Women’s Cricket Team on their astounding debut at the #AsianGames and bring home ????????’s 1st-ever GOLD in Cricket!!
Valiant effort and terrific fielding from the #WomenInBlue, rising from the ashes and leaving cricket fans at the edge of… pic.twitter.com/U8NX4hr55E
— Anurag Thakur (@ianuragthakur) September 25, 2023
Advertisement
2010ರ ಏಷ್ಯನ್ ಗೇಮ್ಸ್ ಟೂರ್ನಿಯಲ್ಲಿ ಪಾಕಿಸ್ತಾನ ಚಿನ್ನ ಗೆದ್ದರೆ, ಬಾಂಗ್ಲಾದೇಶ ಬೆಳ್ಳಿ ಹಾಗೂ ಜಪಾನ್ ಕಂಚಿನ ಪದಕ ಗೆದ್ದುಕೊಂಡಿತ್ತು. 2014ರಲ್ಲಿ ಪಾಕಿಸ್ತಾನ ಸತತ 2ನೇ ಬಾರಿ ಚಿನ್ನ ಗೆದ್ದರೆ, ಬಾಂಗ್ಲಾದೇಶ ತಂಡ ಬೆಳ್ಳಿ ಹಾಗೂ ಶ್ರೀಲಂಕಾ ತಂಡ ಕಂಚಿನ ಪದಕಕ್ಕೆ ತೃಪ್ತಿಪಟ್ಟುಕೊಂಡಿತ್ತು. ಆದ್ರೆ ಇದೇ ಮೊದಲ ಬಾರಿಗೆ ಏಷ್ಯನ್ ಗೇಮ್ಸ್‌ಗೆ ತೆರಳಿದ ಭಾರತ ತಂಡ ಚಿನ್ನ ಗೆದ್ದು ಇತಿಹಾಸ ನಿರ್ಮಿಸಿತು.
Advertisement
ಚೇಸಿಂಗ್ ಆರಂಭಿಸಿದ ಲಂಕಾ ಆರಂಭದಲ್ಲೇ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೀಡಾಯಿತು. ಮಧ್ಯಮ ಕ್ರಮಾಂಕದ ಬ್ಯಾಟರ್‌ಗಳಾದ ಹಾಸಿನಿ ಪೆರೆರಾ, ನೀಲಾಕ್ಷಿ ಡಿ ಸಿಲ್ವಾ ಹಾಗೂ ಓಷದಿ ರಣಸಿಂಗ್ ಅವರಿಂದ ಸಣ್ಣ ಪ್ರಮಾಣದ ಜೊತೆಯಾಟ ಬಂದರೂ ತಂಡ ನಿಗದಿತ ರನ್ ಕಲೆಹಾಕುವಲ್ಲಿ ವಿಫಲವಾಯಿತು. ಟೀಂ ಇಂಡಿಯಾ ಬೌಲರ್‌ಗಳ ದಾಳಿಗೆ ತತ್ತರಿಸಿದ ಲಂಕಾ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 97 ರನ್ ಗಳಿಸಿ ಮಂಡಿಯೂರಿತು.
ಟೀಂ ಇಂಡಿಯಾ ಪರ ಟಿಟಾಸ್ ಸಾಧು 4 ಓವರ್‌ನಲ್ಲಿ 3 ವಿಕೆಟ್ ಕಿತ್ತರೆ, ರಾಜೇಶ್ವರಿ ಗಾಯಕ್ವಾಡ್ 2 ವಿಕೆಟ್ ಹಾಗೂ ದೀಪ್ತಿ ಶರ್ಮಾ, ಪೂಜಾ ವಸ್ತ್ರಕಾರ್, ದೇವಿಕಾ ವೈದ್ಯ ತಲಾ ಒಂದೊಂದು ವಿಕೆಟ್ ಪಡೆದು ಮಿಂಚಿದರು. ಇದನ್ನೂ ಓದಿ: Asian Games Women’s Cricket: ಬಾಂಗ್ಲಾ ಮಣಿಸಿ ಫೈನಲ್‌ಗೆ ಲಗ್ಗೆಯಿಟ್ಟ ಭಾರತ
ಇದಕ್ಕೂ ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಪರ ಆರಂಭಿಕಾರ ಶಫಾಲಿ ವರ್ಮಾ 9 ರನ್‌ಗಳಿಗೆ ವಿಕೆಟ್ ಒಪ್ಪಿಸಿದರು. 2ನೇ ವಿಕೆಟ್‌ಗೆ ಜೊತೆಯಾದ ಸ್ಮೃತಿ ಮಂಧಾನ (Smriti Mandhana) ಹಾಗೂ ಜೆಮಿಮಾ ರೊಡ್ರಿಗಸ್ 67 ಎಸೆತಗಳಲ್ಲಿ 73 ರನ್‌ಗಳ ಜೊತೆಯಾಟ ನೀಡುವ ಮೂಲಕ ಚೇತರಿಕೆ ನೀಡಿದರು. ಇದರಿಂದ 100 ರನ್‌ಗಳ ಗಡಿ ದಾಟುವಲ್ಲಿ ಭಾರತ ತಂಡ ಯಶಸ್ವಿಯಾಯಿತು. ಆದರೆ ರಿಚಾ ಘೋಷ್ 9, ನಾಯಕಿ ಹರ್ಮನ್ ಪ್ರೀತ್ ಕೌರ್ (Harmanpreet Kaur) 2 ರನ್, ಪೂಜಾ ವಸ್ತ್ರಾಕರ್ 2 ರನ್ ಗಳನ್ನು ಮಾತ್ರಗಳಿಸಿ ನಿರಾಸೆ ಮೂಡಿಸಿದರು.
ಶ್ರೀಲಂಕಾ ಪರ ಉದೇಶಿಕ ಪ್ರಬೋಧನಿ, ಸೌಗಂದಿಕಾ ಕುಮಾರಿ ಮತ್ತು ಇನೋಕಾ ರಣವೀರಾ ತಲಾ 2 ವಿಕೆಟ್ ಪಡೆದು ಮಿಂಚಿದರು.
Web Stories