ಹ್ಯಾಂಗ್‌ಝೌ: ಇಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಟಿ20 ಕ್ರಿಕೆಟ್‌ನಲ್ಲಿ ಟೀಂ ಇಂಡಿಯಾದ (Team India) ಆರಂಭಿಕ ಯುವ ಆಟಗಾರ ಯಶಸ್ವಿ ಜೈಸ್ವಾಲ್ ಮೊದಲ ಪಂದ್ಯದಲ್ಲೇ, ಚೊಚ್ಚಲ ಅಂತಾರಾಷ್ಟ್ರೀಯ ಟಿ20 ಶತಕ ಸಿಡಿಸಿ ಶುಭಮನ್ ಗಿಲ್ (Shubman Gill) ಹೆಸರಿನಲ್ಲಿದ್ದ ದಾಖಲೆ ಮುರಿದಿದ್ದಾರೆ.
Advertisement
ಚೀನಾದ ಹ್ಯಾಂಗ್‌ಝೌನ ಪಿಂಗ್‌ಫೆಂಗ್ ಕ್ಯಾಂಪಸ್ ಕ್ರಿಕೆಟ್ ಫೀಲ್ಡ್‌ನಲ್ಲಿ ನಡೆದ ಏಷ್ಯನ್ ಗೇಮ್ಸ್ (Asian Games 2023) ಟಿ20 ಕ್ರಿಕೆಟ್‌ನಲ್ಲಿ ಋತುರಾಜ್ ಗಾಯಕ್ವಾಡ್ ನೇತೃತ್ವದ ಟೀಂ ಇಂಡಿಯಾ ಗೆಲುವಿನೊಂದಿಗೆ ಶುಭಾರಂಭ ಮಾಡಿದ್ದು, ಸೆಮಿ ಫೈನಲ್ ಪ್ರವೇಶಿಸಿದೆ. ಟೀಂ ಇಂಡಿಯಾ ಪರ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದ ಯಶಸ್ವಿ ಜೈಸ್ವಾಲ್ (Yashasvi Jaiswal) ಶತಕ ಬಾರಿಸಿ ಟಿ20 ಕ್ರಿಕೆಟ್‌ನಲ್ಲಿ ಹೊಸ ದಾಖಲೆ ಬರೆದಿದ್ದಾರೆ. ಅಲ್ಲದೇ ಟೀಂ ಇಂಡಿಯಾದ ಅಗ್ರ ಕ್ರಮಾಂಕದ ಬ್ಯಾಟರ್ ಶುಭಮನ್ ಗಿಲ್ ಅವರ ದಾಖಲೆಯನ್ನೂ ಮುರಿದಿದ್ದಾರೆ. ಇದನ್ನೂ ಓದಿ: Asian Games 2023 ನೇಪಾಳ ವಿರುದ್ಧ 23 ರನ್‌ಗಳ ಜಯ – ಸೆಮಿಫೈನಲ್‌ಗೆ ಭಾರತ
Advertisement
Advertisement
ಹೌದು.. ಆರಂಭಿಕನಾಗಿ ಕಣಕ್ಕಿಳಿದ ಜೈಸ್ವಾಲ್ 48 ಎಸೆತಗಳಲ್ಲಿ 8 ಬೌಂಡರಿ, 7 ಸಿಕ್ಸರ್‌ಗಳೊಂದಿಗೆ 100 ರನ್ ಸಿಡಿಸಿದ್ದಾರೆ. ಈ ಮೂಲಕ ಜೈಸ್ವಾಲ್ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಭಾರತದ ಪರ ಶತಕ ಸಿಡಿಸಿದ ಅತ್ಯಂತ ಕಿರಿಯ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಪ್ರಸಕ್ತ ವರ್ಷದಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆದ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಶುಭಮನ್ ಗಿಲ್ (63 ಎಸೆತಗಳಲ್ಲಿ 126 ರನ್) ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ತಮ್ಮ ಮೊದಲ ಶತಕ ದಾಖಲಿಸಿದ್ದರು. ಈ ವೇಳೆ ಶುಭಮನ್ ಗಿಲ್ ವಯಸ್ಸು 23 ವರ್ಷ 146 ದಿನಗಳಾಗಿತ್ತು. ಆದ್ರೆ ಯಶಸ್ವಿ ಜೈಸ್ವಾಲ್ ತನ್ನ 21 ವರ್ಷ 279 ದಿನಗಳ ವಯಸ್ಸಿನಲ್ಲೇ ಶತಕ ಸಿಡಿಸಿ ಶುಭಮನ್ ಗಿಲ್ ದಾಖಲೆ ಮುರಿದಿದ್ದಾರೆ.
Advertisement
2010ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಸುರೇಶ್ ರೈನಾ 23 ವರ್ಷ 156 ದಿನಗಳ ವಯಸ್ಸಿನವರಾಗಿದ್ದಾಗ ಟಿ20 ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ ಬಾರಿಸಿದ್ದರು. ಆದ್ರೆ ಶುಭ್ಮನ್ ಗಿಲ್ 2023ರಲ್ಲಿ 23 ವರ್ಷ 146 ದಿನಗಳ ವಯಸ್ಸಿನವರಾಗಿದ್ದಾಗ ಶತಕ ಸಿಡಿಸಿ ರೈನಾ ದಾಖಲೆ ಮುರಿದರು. ಇದೀಗ ಯಶಸ್ವಿ 21ನೇ ವಯಸ್ಸಿಗೆ ಶತಕ ಸಿಡಿಸಿ ಈ ಸಾಧನೆ ಮಾಡಿರುವುದು ವಿಶೇಷ. ಇದನ್ನೂ ಓದಿ:
ನೇಪಾಳದ ವಿರುದ್ದ ಅಬ್ಬರಿಸಿದ ರಿಂಕು: ನೇಪಾಳ ವಿರುದ್ಧ ನಡೆದ ಪಂದ್ಯದಲ್ಲಿ ಆರಂಭಿಕರಾಗಿ ಕಣಕ್ಕಿಳಿದಿದ್ದ ನಾಯಕ ಋತುರಾಜ್ ಗಾಯಕ್ವಾಡ್ 25 ರನ್ ಗಳಿಸಿ ನಿರಾಸೆ ಮೂಡಿಸಿದರು. ಕ್ರಮವಾಗಿ 3 ಮತ್ತು 4ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಲು ಬಂದ ತಿಲಕ್ ವರ್ಮಾ ಹಾಗೂ ಜಿತೇಶ್ ಶರ್ಮಾ ಕ್ರಮವಾಗಿ 2ರನ್, 5 ರನ್ ಗಳಿಸಿ ಪೆವಿಲಿಯನ್‌ಗೆ ಮರಳಿದರು. ಶಿವಂ ದುಬೆ 19 ಎಸೆತಗಳಲ್ಲಿ 25 ರನ್‌ಗಳ ಕೊಡುಗೆ ನೀಡಿದರು. ಇನ್ನೂ ಕೊನೆಯಲ್ಲಿ ಸ್ಫೋಟಕ ಬ್ಯಾಟಿಂಗ್ ಮಾಡಿದ ರಿಂಕು ಸಿಂಗ್ 246.66 ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್ ಬೀಸಿದರು. ಕೇವಲ 15 ಎಸೆತಗಳಲ್ಲಿ 4 ಸಿಕ್ಸರ್, 2 ಬೌಂಡರಿಗಳೊಂದಿಗೆ 37 ರನ್ ಚಚ್ಚಿ ಅಜೇಯರಾಗುಳಿದರು.
Web Stories