ಬೀಜಿಂಗ್: ಕರ್ನಾಟಕದ ಗಾಲ್ಫ್ ಆಟಗಾರ್ತಿ ಅದಿತಿ ಅಶೋಕ್ (Aditi Ashok) ಅವರು ಏಷ್ಯನ್ ಗೇಮ್ಸ್ 2023ರಲ್ಲಿ (Asian Games 2023) ಐತಿಹಾಸಿಕ ಬೆಳ್ಳಿ ಪದಕ (Silver Medal) ಗೆದ್ದು ದೇಶಕ್ಕೆ ಹಿರಿಮೆ ತಂದುಕೊಟ್ಟಿದ್ದಾರೆ.
ಭಾನುವಾರ ಬೆಳಗ್ಗೆ ನಡೆದ ಗಾಲ್ಫ್ ಫೈನಲ್ ಪಂದ್ಯದಲ್ಲಿ ಅದಿತಿ ಬೆಳ್ಳಿ ಪದಕಕ್ಕೆ ಭಾಜನರಾಗಿದ್ದಾರೆ. ಈ ಮೂಲಕ ಏಷ್ಯನ್ ಗೇಮ್ಸ್ ಗಾಲ್ಫ್ (Golf) ಕ್ರೀಡೆಯಲ್ಲಿ ಪದಕ ಗೆದ್ದ ಮೊದಲ ಮಹಿಳಾ ಕ್ರೀಡಾಪಟು ಎಂಬ ಹೆಗ್ಗಳಿಕೆಗೆ ಬೆಂಗಳೂರಿನ ಅದಿತಿ ಅಶೋಕ್ ಪಾತ್ರರಾಗಿದ್ದಾರೆ.
ಶನಿವಾರ 3ನೇ ಸುತ್ತಿನ ಪಂದ್ಯದ ಬಳಿಕ ಅದಿತಿ ಚಿನ್ನ ಗಳಿಸಲು ಹೆಜ್ಜೆಯಿಟ್ಟಿದ್ದರು. 7 ಸ್ಟ್ರೋಕ್ ಮುನ್ನಡೆಯೊಂದಿಗೆ ಆಟವನ್ನು ಆರಂಭಿಸಿದ ಅವರಿಗೆ ಮೊದಲ ಸ್ಥಾನವನ್ನು ಗಳಿಸಲು ಉತ್ತಮ ಅವಕಾಶವಿತ್ತು. ಆದರೆ ಕೊನೆಯ 3 ಹೊಡೆತದಲ್ಲಿ ಹಿನ್ನಡೆ ಅನುಭವಿಸಿ ಅವರು ದ್ವಿತೀಯ ಸ್ಥಾನಕ್ಕೆ ತೃಪ್ತಿಪಟ್ಟಿದ್ದಾರೆ. ಥೈಲ್ಯಾಂಡ್ನ ಅರ್ಪಿಚುಯಾ ಯುಬೋಲ್ ಚಿನ್ನದ ಪದಕವನ್ನು ಬಾಚಿಕೊಂಡಿದ್ದಾರೆ. ಇದನ್ನೂ ಓದಿ: Asian Games 2023: ಎದುರಾಳಿ ಪಾಕ್ ವಿರುದ್ಧ ಭಾರತಕ್ಕೆ ಜಯ – ಸ್ಕ್ವಾಷ್ನಲ್ಲಿ ಚಿನ್ನದ ಬೇಟೆ
ಈ ಹಿಂದೆ ಅದಿತಿ ಅಶೋಕ್ ಟೋಕಿಯೋ ಒಲಿಂಪಿಕ್ಸ್ನಲ್ಲಿ ಗಾಲ್ಫ್ನಲ್ಲಿ 4ನೇ ಸ್ಥಾನ ಗಳಿಸಿ ದೇಶದ ಗಮನ ಸೆಳೆದಿದ್ದರು. ಇದೀಗ ಏಷ್ಯನ್ ಗೇಮ್ಸ್ನಲ್ಲಿ ಅದಿತಿ ಪದಕ ಗೆದ್ದು ಬೀಗಿದ್ದಾರೆ. ಇದನ್ನೂ ಓದಿ: Asian Games: ಟೆನ್ನಿಸ್ ಮಿಶ್ರ ಡಬಲ್ಸ್ನಲ್ಲಿ ಭಾರತಕ್ಕೆ ಚಿನ್ನ
Web Stories