ಶಿವಮೊಗ್ಗ: ನಗರದಲ್ಲಿ (Shivamogga) ಕಾಂಗ್ರೆಸ್ (Congress) ಹಮ್ಮಿಕೊಂಡಿದ್ದ ಬಿಜೆಪಿ (BJP) ಕಚೇರಿ ಮುತ್ತಿಗೆ ಪ್ರತಿಭಟನೆಯ ವೇಳೆ ಕರ್ತವ್ಯ ನಿರತ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರ ಕುತ್ತಿಗೆಯಲ್ಲಿದ್ದ ಸುಮಾರು 60 ಗ್ರಾಂ ತೂಕದ ಮಾಂಗಲ್ಯ ಸರವನ್ನು ಕಳ್ಳರು ಕಿತ್ತುಕೊಂಡು ಪರಾರಿಯಾಗಿದ್ದಾರೆ.
ಪ್ರತಿಭಟನಾಕಾರರನ್ನು ನಿಯಂತ್ರಿಸುವಲ್ಲಿ ಪೊಲೀಸರು ನಿರತರಾಗಿದ್ದ ಸಂದರ್ಭದಲ್ಲಿ ಈ ಕಳ್ಳತನ ನಡೆದಿದೆ. ಎಎಸ್ಐ ಅಮೃತಾಬಾಯಿ ಅವರು ಇತ್ತೀಚೆಗಷ್ಟೇ ಹೊಸ ಮಾಂಗಲ್ಯ ಸರವನ್ನು ಮಾಡಿಸಿದ್ದರು ಎನ್ನಲಾಗಿದೆ. ಪ್ರತಿಭಟನೆಯ ತಳ್ಳಾಟ-ನೂಕಾಟದ ವೇಳೆ ಕಳ್ಳರು ಸರವನ್ನು ಎಗರಿಸಿದ್ದಾರೆ. ಮಾಂಗಲ್ಯ ಸರವನ್ನು ಕಳೆದುಕೊಂಡ ಎಎಸ್ಐ ಅಮೃತಾಬಾಯಿ ಕಣ್ಣೀರಿಟ್ಟಿದ್ದಾರೆ. ಇದನ್ನೂ ಓದಿ: ಪ್ರೀತಿ ಹೆಸರಲ್ಲಿ ವಂಚಿಸಿ ಯುವತಿ ಮೇಲೆ ಗ್ಯಾಂಗ್ ರೇಪ್ – ಮೂವರು ಕಾಮುಕರು ಅರೆಸ್ಟ್
ನರೇಗಾ ಹೆಸರು ಬದಲಾವಣೆ, ಇಡಿ ದುರ್ಬಳಕೆಯಾಗುತ್ತಿದೆ ಎಂದು ಬಿಜೆಪಿ ಕಚೇರಿಗೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದರು. ಈ ವೇಳೆ ಎಎಸ್‌ಐ ಬಂದೋಬಸ್ತ್‌ನಲ್ಲಿದ್ದರು. ಇದನ್ನೂ ಓದಿ: ಹೆತ್ತ ತಂದೆ-ತಾಯಿಯನ್ನೇ ಹತ್ಯೆ ಮಾಡಿ ಗರಗಸದಿಂದ ದೇಹಗಳನ್ನು ಕತ್ತರಿಸಿ, ನದಿಗೆ ಎಸೆದ ಮಗ

