LatestLeading NewsMain PostNational

ಕರ್ನಾಟಕದಲ್ಲಿ ಮರಾಠಿಗರ ಮೇಲೆ ದಾಳಿ ನಡೆಯುತ್ತಿದೆ – ಸುಳ್ಳು ಆರೋಪ ಹೊರಿಸಿದ ಉದ್ಧವ್ ಠಾಕ್ರೆ

ಮುಂಬೈ: ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದಂತೆ ಇತ್ತ ಕರ್ನಾಟಕದಲ್ಲಿ ಮರಾಠಿಗರ ಮೇಲೆ ದಾಳಿ ನಡೆಯುತ್ತಿದೆ ಎಂದು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಆರೋಪಿಸಿದ್ದಾರೆ.

ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿಗೆ ಟ್ವಿಟ್ಟರ್ ಮೂಲಕ ಟ್ವೀಟ್ ಮಾಡಿರುವ ಠಾಕ್ರೆ, ಕರ್ನಾಟಕದಲ್ಲಿ ಮರಾಠಿಗರ ಮೇಲೆ ದಾಳಿ ನಡೆಯುತ್ತಿದೆ. ಈ ಬಗ್ಗೆ ನೀವು ಮಧ್ಯಪ್ರವೇಶಿಸಬೇಕು. ಶಿವಾಜಿಯನ್ನು ಕೇವಲ ಮಹರಾಷ್ಟ್ರದಲ್ಲಿ ಮಾತ್ರ ಪೂಜಿಸುವುದಿಲ್ಲ ದೇಶದಾದ್ಯಂತ ಗೌರವಿಸುತ್ತಾರೆ. ಆದರೆ ಕರ್ನಾಟಕದಲ್ಲಿ ಮಾತ್ರ ಶಿವಾಜಿ ಪ್ರತಿಮೆಗೆ ಮಸಿ ಬಳಿದಿದ್ದಾರೆ. ಅಲ್ಲಿ ಬಿಜೆಪಿ ಸರ್ಕಾರವಿದೆ ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ಕಿಡಿಗೇಡಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. ಬೆಳಗಾವಿಯಲ್ಲಿ MES ಪುಂಡರ ಅಟ್ಟಹಾಸ – ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಹಾನಿ, ಬಸ್ ಮೇಲೆ ಕಲ್ಲು ತೂರಾಟ

ಬೆಳಗಾವಿಯಲ್ಲಿ ಎಂಇಎಸ್ ಪುಂಡರು ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಕಿಡಿಗೇಡಿಗಳು ಧ್ವಂಸ ಮಾಡಿದ ವೇಳೆ ಸುಮ್ಮನಿದ್ದ ಠಾಕ್ರೆ ಇದೀಗ ಕನ್ನಡಿಗರ ಮೇಲೆ ಸುಳ್ಳು ಆರೋಪ ಹೊರಿಸಿದ್ದಾರೆ. ಅದಲ್ಲದೆ ಮಹರಾಷ್ಟ್ರದಲ್ಲಿ ಕರ್ನಾಟಕದ ಧ್ವಜವನ್ನು ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಮಕ್ಕೆ ಮುಂದಾಗದೇ ಇದೀಗ ಕರ್ನಾಟಕದ ಮೇಲೆ ಆರೋಪ ಮಾಡುತ್ತೀರುವುದು ಎಷ್ಟು ಸರಿ ಎಂಬ ಪ್ರಶ್ನೆ ಎದ್ದಿದೆ. ಇದನ್ನೂ ಓದಿ: ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಮರುಪ್ರತಿಷ್ಠಾಪನೆ

Leave a Reply

Your email address will not be published.

Back to top button