ಗುವಾಹಟಿ: ಅಸ್ಸಾಂನ ಕಾಮಾಖ್ಯ-ದೇಕರ್ ಗಾಂವ್ ಇಂಟರ್ ಸಿಟಿ ಎಕ್ಸ್‌ಪ್ರೆಸ್ ರೈಲಿನ ಬೋಗಿಯಲ್ಲಿ ಸ್ಫೋಟ ಸಂಭವಿಸಿ 11 ಜನ ಪ್ರಯಾಣಿಕರು ಗಾಯಗೊಂಡಿದ್ದಾರೆ.
ಗುವಾಹಟಿಯಿಂದ ಸುಮಾರು 95 ಕಿ.ಮೀ. ದೂರದ ಉದಲಗುರಿ ಜಿಲ್ಲೆಯಲ್ಲಿ ಶನಿವಾರ ಸಂಜೆ 7 ಗಂಟೆಗೆ ಘಟನೆ ನಡೆದಿದೆ. ಈ ಕುರಿತು ಮಾಹಿತಿ ಬರುತ್ತಿದ್ದಂತೆ ಘಟನಾ ಸ್ಥಳಕ್ಕೆ ರೈಲ್ವೇ ಅಧಿಕಾರಿಗಳು ಹಾಗೂ ಪೊಲೀಸ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ಈಶಾನ್ಯ ರೈಲ್ವೇ ವಕ್ತಾರರು ತಿಳಿಸಿದ್ದಾರೆ.
Advertisement
Assam: Explosion inside Kamakhya-Dekargaon Intercity Express in Udalguri. 11 persons injured. pic.twitter.com/M61eRSkBnL
— ANI (@ANI) December 1, 2018
Advertisement
ಸ್ಫೋಟವು ಬಾಂಬ್ ಅಥವಾ ಶಾರ್ಟ್ ಸಕ್ರ್ಯೂಟ್‍ನಿಂದ ಸಂಭವಿಸಿದೆಯೇ ಎಂಬುದರ ಕುರಿತು ತನಿಖೆ ನಡೆಸಲಾಗುತ್ತಿದೆ. ಗಾಯಗೊಂಡಿರುವ ಪ್ರಯಾಣಿಕರನ್ನು ಸ್ಥಳೀಯ ಆಸ್ಪತ್ರೆ ದಾಖಲಿಸಲಾಗಿದೆ. ಅವರಲ್ಲಿ ಓರ್ವ ಪ್ರಯಾಣಿಕನ ಸ್ಥಿತಿ ಚಿಂತಾಜನಕವಾಗಿದೆ ಎಂದು ಈಶಾನ್ಯ ರೈಲ್ವೇ ಪಿಆರ್‍ಒ ನೃಪೇನ್ ಭಟ್ಟಾಚಾರ್ಯ ತಿಳಿಸಿದ್ದಾರೆ.
Advertisement
ಅಸ್ಸಾಂನಲ್ಲಿ ಕಳೆದ 15 ದಿನಗಳಲ್ಲಿ ಎರಡು ರೈಲ್ವೇ ಅಪಘಾತಗಳು ಸಂಭವಿಸಿವೆ. ನವೆಂಬರ್ 21ರಂದು ಗುವಾಹಟಿ-ಲೆಡೋ ಇಂಟರ್ ಸಿಟಿ ಎಕ್ಸ್‌ಪ್ರೆಸ್ ರೈಲು ಆನೆಗೆ ಡಿಕ್ಕಿ ಹೊಡೆದು ಹಳಿತಪ್ಪಿತ್ತು. ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದರು. ರೈಲು ಡಿಕ್ಕಿ ಹೊಡೆದ ಪರಿಣಾಮ ಆನೆ ಸ್ಥಳದಲ್ಲಿಯೇ ಮೃತಪಟ್ಟಿತ್ತು.
Advertisement
Police say on 11 persons injured in an explosion inside Kamakhya-Dekargaon Intercity Express in Udalguri, "explosion took place in the running train at around 6:45 pm. Investigation underway to ascertain if it was a bomb". #Assam pic.twitter.com/417XW5PDpk
— ANI (@ANI) December 1, 2018
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live ವೀಕ್ಷಿಸಲು ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv