ಗುವಾಹಟಿ: ಅಸ್ಸಾಂನಲ್ಲಿ ಹೋಟೆಲ್ (Hotels), ರೆಸ್ಟೋರೆಂಟ್ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಗೋಮಾಂಸ ಮಾರಾಟ ಮತ್ತು ಸೇವನೆಯನ್ನು ನಿಷೇಧಿಸುವುದಾಗಿ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ (Himanta Biswa Sarma) ಘೋಷಿಸಿದ್ದಾರೆ.
ಗೋಮಾಂಸ (Beef )ಸೇವನೆಯ ಬಗ್ಗೆ ಅಸ್ತಿತ್ವದಲ್ಲಿರುವ ಕಾನೂನಿಗೆ ತಿದ್ದುಪಡಿ ತರಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಣಯ ತೆಗೆದುಕೊಳ್ಳಲಾಗಿದೆ. ಮಸೂದೆಯ ನಿಬಂಧನೆಗಳನ್ನು ಉಲ್ಲಂಘಿಸಿದರೆ 3 ರಿಂದ 8 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 3 ಲಕ್ಷ ರೂ. 5 ಲಕ್ಷ ರೂ. ವರೆಗೆ ದಂಡ ವಿಧಿಸಬಹುದು. ಸರ್ಕಾರದ ನಿರ್ಣಯಕ್ಕೆ ಆಕ್ಷೇಪ ವ್ಯಕ್ತಪಡಿಸಿದ ವಿಪಕ್ಷಗಳು ವಿಸ್ತೃತ ಚರ್ಚೆಗಾಗಿ ಕಾನೂನನ್ನು ಆಯ್ಕೆ ಸಮಿತಿಗೆ ಕಳುಹಿಸಬೇಕೆಂದು ಆಗ್ರಹಿಸಿ ಕಲಾಪ ಬಹಿಷ್ಕರಿಸಿದವು. ಇದನ್ನೂ ಓದಿ: ವಿಜಯೇಂದ್ರ ಗುಂಪುಗಾರಿಕೆ ಮಾಡುತ್ತಿದ್ದಾರೆ, ಪಕ್ಷದ ಚೌಕಟ್ಟಿನಲ್ಲಿ ಮಾತನಾಡಿದ್ದೇನೆ: ಯತ್ನಾಳ್ ಚಾರ್ಜ್
Advertisement
Advertisement
ಸಂಪುಟದ ನಿರ್ಣಯ ಸಮರ್ಥಿಸಿಕೊಂಡ ಸಿಎಂ ಶರ್ಮಾ, ಅಸ್ಸಾಂನಲ್ಲಿ ಗೋಮಾಂಸ ಸೇವನೆಯು ಕಾನೂನುಬಾಹಿರವಲ್ಲ. ಆದ್ರೆ 2021ರ ಅಸ್ಸಾಂ ಜಾನುವಾರು ಸಂರಕ್ಷಣಾ ಕಾಯ್ದೆಯು ರಾಜ್ಯದಲ್ಲಿ ಎಲ್ಲಾ ಜಾನುವಾರುಗಳ ಸಾಗಣೆ, ಹತ್ಯೆ, ಗೋಮಾಂಸ ಮತ್ತು ಗೋಮಾಂಸ ಉತ್ಪನ್ನಗಳ ಮಾರಾಟವನ್ನು ನಿಯಂತ್ರಿಸುತ್ತದೆ. ನಾವು ಈ ಹಿಂದೆ ಅಸ್ಸಾಂನಲ್ಲಿ ಗೋವುಗಳನ್ನು ರಕ್ಷಿಸುವ ಮಸೂದೆ ಪರಿಚಯಿಸಿದ್ದೇವೆ, ಅದರಲ್ಲಿ ಯಶಸ್ವಿಯೂ ಆಗಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: Ballari | ಐವಿ ದ್ರಾವಣ ಪೂರೈಕೆ ಮಾಡಿದ ಕಂಪನಿ ವಿರುದ್ಧ ಕೇಸ್ ದಾಖಲಿಸಲು ತಾಕೀತು
Advertisement
ಮುಂದೆ ರಾಜ್ಯದ ಯಾವುದೇ ಹೋಟೆಲ್‌ಗಳು, ರೆಸ್ಟೋರೆಂಟ್‌ಗಳಲ್ಲಿ ಗೋಮಾಂಸ ನೀಡದಂತೆ ನೋಡಿಕೊಳ್ಳಲು ನಾವು ನಿರ್ಧರಿಸಿದ್ದೇವೆ. ಅಲ್ಲದೇ ಸಾರ್ವಜನಿಕ ಸಮಾರಂಭಗಳಲ್ಲೂ ದನದ ಮಾಂಸ ಕೊಡಬಾರದು. ಜೊತೆಗೆ 2021ರ ಅಸ್ಸಾಂ ಜಾನುವಾರು ಸಂರಕ್ಷಣಾ ಕಾಯ್ದೆಯ ಅನ್ವಯ ಹಿಂದೂಗಳು, ಜೈನರು ಮತ್ತು ಸಿಖ್ಖರು ಬಹುಸಂಖ್ಯಾತರಾಗಿರುವ ಪ್ರದೇಶಗಳಲ್ಲಿ ಮತ್ತು ದೇವಸ್ಥಾನ ಅಥವಾ ಸತ್ರ (ವೈಷ್ಣವ ಮಠ)ದ 5 ಕಿಲೋಮೀಟರ್ ವ್ಯಾಪ್ತಿಯೊಳಗೆ ಗೋಹತ್ಯೆ ಮತ್ತು ಗೋಮಾಂಸ ಮಾರಾಟ ಮತ್ತು ಸೇವನೆಯನ್ನು ನಿಷೇಧಿಸಲಾಗಿದೆ ಎಂದು ತಿಳಿಸಿರುವುದಾಗಿ ವರದಿಯಾಗಿದೆ.
Advertisement
ಸರ್ಕಾರದ ಈ ನಿರ್ಣಯಕ್ಕೆ ತೀವ್ರ ವಿರೋಧ ವ್ಯಕ್ತವಾಯಿತು. ಪ್ರತಿಪಕ್ಷ ಆಲ್ ಇಂಡಿಯಾ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಎಐಯುಡಿಎಫ್) ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತು. ಇದು ಪ್ರಮುಖ ವಿಷಯಗಳಿಂದ ರಾಜ್ಯದ ಜನರ ಗಮನವನ್ನು ಬೇರೆಡೆಗೆ ಸೆಳೆಯುತ್ತಿದೆ ಎಂದು ಕಿಡಿ ಕಾರಿತು. ಇದನ್ನೂ ಓದಿ: ಮುಡಾದಲ್ಲಿ ನಡೆದಿರೋದು 4-5 ಸಾವಿರ ಕೋಟಿ ಹಗರಣ: ಆರ್. ಅಶೋಕ್ ಬಾಂಬ್
ರಾಜ್ಯ ಸರ್ಕಾರವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವಲ್ಲಿ, ನಿರುದ್ಯೋಗ ಸಮಸ್ಯೆ ನಿವಾರಿಸುವಲ್ಲಿ, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳ ಸಮಸ್ಯೆ ಬಗೆಹರಿಸುವಲ್ಲಿ ವಿಫಲವಾಗಿದೆ. ಆದ್ರೆ ಈ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯುವ ಸಲುವಾಗಿ ಈ ನಿರ್ಣಯ ತೆಗೆದುಕೊಳ್ಳಲಾಗಿದೆ ಎಂದು ಎಐಯುಡಿಎಫ್ ಶಾಸಕ ಅಮಿನುಲ್ ಇಸ್ಲಾಂ ಹೇಳಿದ್ದಾರೆ.