ಗುವಾಹಟಿ: ಹಿಮಂತ ಬಿಸ್ವಾ ಶರ್ಮಾ(Himanta Biswa Sarma) ಅವರು ಸತತ ಎರಡನೇ ಬಾರಿಗೆ ಅಸ್ಸಾಂನ (Assam) ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಅಸ್ಸಾಂನ ಗುವಾಹಟಿಯ ಖಾನಾಪಾರಾದಲ್ಲಿರುವ ಪಶುವೈದ್ಯಕೀಯ ಕಾಲೇಜು ಮೈದಾನದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ರಾಜ್ಯಪಾಲರಾದ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಅವರು ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಸಚಿವ ಸಂಪುಟಕ್ಕೆ ಪ್ರಮಾಣವಚನ ಬೋಧಿಸಿದರು.
ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸಿದ್ದರು.
VIDEO | Guwahati: Himanta Biswa Sarma (@himantabiswa) takes oath as Assam Chief Minister.
(Source: Third Party)
(Full video available on PTI Videos – https://t.co/n147TvrpG7) pic.twitter.com/F8QGPSlcqA
— Press Trust of India (@PTI_News) May 12, 2026
ಶರ್ಮಾ ಅವರೊಂದಿಗೆ ನಾಲ್ವರು ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಅವರಲ್ಲಿ ಬಿಜೆಪಿಯ ಅಜಂತಾ ನಿಯೋಗ್ ಮತ್ತು ರಾಮೇಶ್ವರ್ ತೇಲಿ, ಎಜಿಪಿಯ ಅತುಲ್ ಬೋರಾ ಹಾಗೂ ಬಿಪಿಎಫ್‌ನ ಚರಣ್ ಬೋರೋ ಸೇರಿದ್ದಾರೆ. ಇದನ್ನೂ ಓದಿ: ಚಿನ್ನ, ಪೆಟ್ರೋಲ್ ಬಳಕೆಗೆ ಬ್ರೇಕ್ – ಮೋದಿ ಕರೆ ಹಿಂದಿದೆ 23 ಲಕ್ಷ ಕೋಟಿ ರೂ. ಉಳಿತಾಯದ ಗುರಿ!
ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವು ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ 102 ಸ್ಥಾನಗಳನ್ನು ಗೆಲ್ಲುವ ಮೂಲಕ ಭರ್ಜರಿ ಜಯ ಸಾಧಿಸಿದ ನಂತರ ಈ ಸರ್ಕಾರ ರಚನೆಯಾಗಿದೆ.

