– ಅಸ್ಸಾಂನಲ್ಲಿ ಆಪರೇಷನ್ ಕಮಲ ತಡೆಯಲು ಡಿಸಿಎಂ ಡಿಕೆಶಿ ಎಂಟ್ರಿ
ಬೆಂಗಳೂರು: ರಾಷ್ಟ್ರ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಅಸ್ಸಾಂನ 10ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ ಶಿಫ್ಟ್ ಆಗಿದ್ದಾರೆ.
ಅಸ್ಸಾಂನಲ್ಲಿ ಆಪರೇಷನ್ ಕಮಲ ತಡೆಯಲು ಡಿಸಿಎಂ ಡಿ.ಕೆ.ಶಿವಕುಮಾರ್ ಎಂಟ್ರಿ ಕೊಟ್ಟಿದ್ದಾರೆ. ಅಸ್ಸಾಂನ 10 ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ ಶಿಫ್ಟ್ ಆಗಿದ್ದಾರೆ. ಭುವನೇಶ್ವರ ಹಾಗೂ ಗುಹ್ವಾಟಿಯಿಂದ ಬೆಂಗಳೂರಿಗೆ ಹೊರಟಿದ್ದಾರೆ.
10 ಕ್ಕೂ ಹೆಚ್ಚು ‘ಕೈ’ ಶಾಸಕರು ಬೆಂಗಳೂರಿನ ರಹಸ್ಯ ಸ್ಥಳದಲ್ಲಿ ವಾಸ್ತವ್ಯ ಹೂಡುವ ಸಾಧ್ಯತೆ ಇದೆ. ಅಸ್ಸಾಂನಲ್ಲಿ ಪಕ್ಷ ಬದಲಾವಣೆಯ ಮಹತ್ವದ ಬೆಳವಣಿಗೆಗಳು ನಡೆಯುತ್ತಿರುವ ಹಿನ್ನೆಲೆ ಕಾಂಗ್ರೆಸ್ ತೊರೆದು ಶಾಸಕರು ಎನ್ಡಿಎ ಸೇರುತ್ತಿದ್ದಾರೆ. ‘ಕೈ’ ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಡಿಕೆಶಿ ಮತ್ತೆ ಟ್ರಬಲ್ ಶೂಟರ್ ಆಗಿದ್ದಾರೆ.
ಡಿಕೆ ಶಿವಕುಮಾರ್ ಅಸ್ಸಾಂ ಚುನಾವಣಾ ಉಸ್ತುವಾರಿ. ಅಸ್ಸಾಂ ನಾಯಕ ಗೌರವ್ ಗೊಗೋಯ್ ಜೊತೆಗೆ ಮಾತುಕತೆ ನಡೆಸಿದ್ದರು. ಅಸ್ಸಾಂ ಕಾಂಗ್ರೆಸ್ ಶಾಸಕರನ್ನು ಹಿಡಿದಿಟ್ಟುಕೊಳ್ಳುವ ಮಹತ್ವದ ಜವಾಬ್ದಾರಿಯನ್ನು ಡಿಕೆಶಿ ಹೊತ್ತುಕೊಂಡಿದ್ದಾರೆ. ನಾಳೆ ಪ್ರಧಾನಿ ಮೋದಿ ಅವರು ಅಸ್ಸಾಂಗೆ ತೆರಳುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಅಸ್ಸಾಂ ‘ಕೈ’ ಶಾಸಕರು ಬೆಂಗಳೂರಿಗೆ ಬರುತ್ತಿದ್ದಾರೆ. ಮೇ ತಿಂಗಳಲ್ಲಿ ಚುನಾವಣೆ ನಡೆಯಲಿರುವ ಅಸ್ಸಾಂನ ಕೆಲವು ಶಾಸಕರು ಇಂದು ಮಧ್ಯರಾತ್ರಿ ಬೆಂಗಳೂರಿಗೆ ಆಗಮಿಸುವ ಸಾಧ್ಯತೆ ಇದೆ. ರಾಮನಗರ ಬಳಿಯ ರೆಸಾರ್ಟ್ವೊಂದರಲ್ಲಿ 5-5 ದಿನಗಳ ಕಾಲ ವಾಸ್ತವ್ಯ ಹೂಡುವ ಸಾಧ್ಯತೆ ಇದೆ.

