ದಿಸ್ಪುರ: ಹೊಸ ವರ್ಷದ ಸಂದರ್ಭದಲ್ಲಿ ತಂದೆ-ತಾಯಿ ಹಾಗೂ ಅತ್ತೆ-ಮಾವರನ್ನು ಭೇಟಿಯಾಗಲು ನೌಕರರಿಗೆ ನಾಲ್ಕು ದಿನಗಳ ರಜೆ ನೀಡಲು ಅಸ್ಸಾಂ ಸರ್ಕಾರ ನಿರ್ಧರಿಸಿದೆ.
Advertisement
2022ರ ಜನವರಿ ತಿಂಗಳಲ್ಲಿ 6-9ನೇ ತಾರೀಖಿನವರೆಗೆ ಸರ್ಕಾರಿ ನೌಕರರಿಗೆ ರಜೆ ನೀಡಲಾಗುವುದು. ತಂದೆ-ತಾಯಿ ಅಥವಾ ಅತ್ತೆ-ಮಾವ ಬದುಕಿಲ್ಲದಿದ್ದರೆ ಅಂತಹ ನೌಕರರಿಗೆ ಈ ವಿಶೇಷ ರಜೆ ಸಿಗುವುದಿಲ್ಲ ಎಂದು ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ನೇತೃತ್ವದ ಸಂಪುಟ ನಿರ್ಧಾರ ಕೈಗೊಂಡಿದೆ. ಇದನ್ನೂ ಓದಿ: ವಿಶ್ವ ವಿಖ್ಯಾತ ಜೋಗ ಜಲಪಾತವನ್ನು ವೀಕ್ಷಿಸಿದ ರಾಜ್ಯಪಾಲ ಗೆಹ್ಲೋಟ್
Advertisement
ಪಶ್ಚಿಮ ಅಸ್ಸಾಂನ ಬೊಂಗೈಗಾವ್‌ನಲ್ಲಿ ಮೊದಲ ಬಾರಿಗೆ ಸಚಿವ ಸಂಪುಟ ಸಭೆ ನಡೆಯಿತು. ರಾಜ್ಯದಲ್ಲಿ ನಿಯೋಜನೆಗೊಂಡಿರುವ ಸಚಿವರು, ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳು ಸಹ ಈ ರಜೆಗೆ ಅರ್ಹರಾಗಿರುತ್ತಾರೆ. ಆದರೆ ಪೊಲೀಸ್ ವರಿಷ್ಠಾಧಿಕಾರಿ ಶ್ರೇಣಿಯವರೆಗಿನ ಪೊಲೀಸ್ ಅಧಿಕಾರಿಗಳು ಸೇರಿದಂತೆ ಕ್ಷೇತ್ರ ಸೇವಕರು ಈ ರಜೆಯನ್ನು ಪಡೆಯುವಂತಿಲ್ಲ ಎಂದು ಸಂಪುಟ ಸ್ಪಷ್ಟಪಡಿಸಿದೆ. ಇದನ್ನೂ ಓದಿ: ಸ್ವೀಡನ್ ಪ್ರಥಮ ಮಹಿಳಾ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿ ಒಂದೇ ದಿನಕ್ಕೆ ರಾಜೀನಾಮೆ ನೀಡಿದ ಆ್ಯಂಡರ್ಸನ್
Advertisement
Advertisement
ಸರ್ಕಾರಿ ನೌಕರರು ತಮ್ಮ ಕುಟುಂಬದ ಸದಸ್ಯರೊಂದಿಗೆ ಹೊಸ ವರ್ಷ ಆಚರಿಸಲು ರಜೆ ನೀಡಲು ಸರ್ಕಾರ ಈ ನಿರ್ಧಾರ ಕೈಗೊಂಡಿದೆ.