– 88 ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್ ಮಾಡಿದ ಬಿಜೆಪಿ
ದಿಸ್ಪುರ: ಏಪ್ರಿಲ್ 9 ರಂದು ನಡೆಯಲಿರುವ ಅಸ್ಸಾಂ ವಿಧಾನಸಭಾ ಚುನಾವಣೆಗೆ (Assam Election 2026) ಬಿಜೆಪಿ (BJP) ಇಂದು 88 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ (Himanta Biswa Sarma), ಜಲುಕ್ಬರಿ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ. ಅವರು ಸತತ ಐದು ಬಾರಿ ಈ ಕ್ಷೇತ್ರದಿಂದ ಗೆದ್ದಿದ್ದಾರೆ. ರಾಜ್ಯ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ ಮತ್ತು ಇತ್ತೀಚೆಗೆ ಬಿಜೆಪಿಗೆ ಸೇರಿದ ಮಾಜಿ ಸಂಸದ ಪ್ರದ್ಯುತ್ ಬೋರ್ಡೊಲೊಯ್ ಅವರಿಗೂ ಬಿಜೆಪಿ ಟಿಕೆಟ್ ನೀಡಿದೆ. ಪ್ರದ್ಯುತ್ ಅವರು ದಿಸ್ಪುರ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಇದನ್ನೂ ಓದಿ: ಉಪಚುನಾವಣೆ: ಯುಗಾದಿ ಹಬ್ಬದಂದೇ ಅಭ್ಯರ್ಥಿಗಳನ್ನು ಘೋಷಿಸಿದ ಬಿಜೆಪಿ
ಈ ಹಿಂದೆ ಕಾಂಗ್ರೆಸ್ ಜೊತೆಗಿದ್ದ ಫೈರ್‌ಬ್ರಾಂಡ್ ನಾಯಕ ಶರ್ಮಾ ಬಳಿಕ ಬಿಜೆಪಿ ಸೇರಿದರು. 2021 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಗೆಲುವಿನತ್ತ ಕೊಂಡೊಯ್ದರು. ಐದು ವರ್ಷಗಳ ನಂತರ ಶರ್ಮಾ ಮತ್ತೊಂದು ಗೆಲುವನ್ನು ಎದುರು ನೋಡುತ್ತಿದ್ದಾರೆ. ಬಿಜೆಪಿ ನಾಯಕತ್ವವು ಅವರ ಬಗ್ಗೆ ಪ್ರಭಾವಿತವಾಗಿದೆ ಎಂದು ತಿಳಿದುಬಂದಿದೆ. ಅಸ್ಸಾಂನಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಅವರು ಮುಖ್ಯಮಂತ್ರಿ ಹುದ್ದೆಯನ್ನು ಉಳಿಸಿಕೊಳ್ಳುವ ಸಾಧ್ಯತೆಯಿದೆ.

