ಡಿಸ್ಪುರ್: ಅಸ್ಸಾಂ ಮತ್ತು ಮೇಘಾಲಯದಲ್ಲಿ ಭಾರೀ ಮಳೆಯಿಂದ ಪ್ರವಾಹ ಪರಿಸ್ಥಿತಿ ತಲೆದೂರಿದೆ. ನೆರೆಯಿಂದಾಗಿ ಇದುವರೆಗೂ ಸಾವನ್ನಪ್ಪಿದವರ ಸಂಖ್ಯೆ 46ಕ್ಕೇರಿದೆ. ಪ್ರವಾಹದಿಂದ ಸುಮಾರು 40 ಲಕ್ಷ ಜನ ಮನೆ, ಆಸ್ತಿ, ಪಾಸ್ತಿ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದಾರೆ.
Advertisement
ಈಶಾನ್ಯ ರಾಜ್ಯದ 33 ಜಿಲ್ಲೆಗಳ ಪೈಕಿ 32 ಜಿಲ್ಲೆಗಳು ಪ್ರವಾಹದಿಂದ ಮುಳುಗಡೆಗೊಂಡಿದೆ. ಬ್ರಹ್ಮಪುತ್ರ, ಸುಬನ್ಸಿರಿ ಮತ್ತು ಮಾನಸ್ ಸೇರಿದಂತೆ ಐದು ಪ್ರಮುಖ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಸುಮಾರು 31 ಲಕ್ಷ ಜನರು ನೆರೆಯಿಂದ ಸಂಕಷ್ಟಕ್ಕೆ ಒಳಗಾಗಿದ್ದು, 1.5 ಲಕ್ಷ ಜನರು 514 ಪರಿಹಾರ ಕೇಂದ್ರಗಳಲ್ಲಿ ಆಶ್ರಯ ಪಡೆಯುತ್ತಿದ್ದಾರೆ. 4,000ಕ್ಕೂ ಹೆಚ್ಚು ಹಳ್ಳಿಗಳು ಹಾನಿಗೊಳಗಾಗಿವೆ. ಇದನ್ನೂ ಓದಿ: ಅಗ್ನಿಪಥ್ ಯೋಜನೆ ವಾಪಸ್ ಇಲ್ಲ – ಗಲಭೆಕೋರರಿಗೆ ಸೇವೆ ಸೇರಲು ಅವಕಾಶವಿಲ್ಲ: ಲೆ.ಜ ಅನಿಲ್‌ಪುರಿ ವಾರ್ನಿಂಗ್
Advertisement
Advertisement
ಅಸ್ಸಾಂ ಪ್ರವಾಹ ಪರಿಸ್ಥಿತಿ ಬಗ್ಗೆ ಖುದ್ದು ಪ್ರಧಾನಿ ನರೇಂದ್ರ ಮೋದಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರೊಂದಿಗೆ ಮಾತನಾಡಿದ್ದು ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಸಾಧ್ಯವಿರುವ ಎಲ್ಲ ಸಹಾಯವನ್ನು ಮಾಡುವುದಾಗಿ ಭರವಸೆ ನೀಡಿದ್ದಾರೆ. ಇದನ್ನೂ ಓದಿ:ಸುರಂಗ ಮಾರ್ಗದಲ್ಲಿ ಬಿದ್ದಿದ್ದ ಕಸವನ್ನು ಬರಿಗೈಯಲ್ಲೇ ತೆಗೆದ ಮೋದಿ
Advertisement
ಅಸ್ಸಾಂನಲ್ಲಿ ಭೂಕುಸಿತ ಮತ್ತು ಹಠಾತ್ ಪ್ರವಾಹದಲ್ಲಿ 24 ಜನರು ಸಾವನ್ನಪ್ಪಿದ್ದಾರೆ. ಈ ಮೂಲಕ ಈ ವರ್ಷ ಪ್ರವಾಹ, ಭೂಕುಸಿತದಿಂದಾಗಿ ಒಟ್ಟು 62 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಮೇಘಾಲಯದ ಚಿರಾಪುಂಜಿಯ ಸೊಹ್ರಾ ಪ್ರದೇಶವು ಅತಿ ಹೆಚ್ಚು ಮಳೆಯಾಗುತ್ತಿದೆ. ಮೇಘಾಲಯದಲ್ಲಿ ಕನಿಷ್ಠ 18 ಮಂದಿ ಸಾವನ್ನಪ್ಪಿದ್ದಾರೆ. ಮೃತರ ಕುಟುಂಬಕ್ಕೆ ತಲಾ 4 ಲಕ್ಷ ರೂ. ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ತಿಳಿಸಿದ್ದಾರೆ. ಅಸ್ಸಾಂ ಮತ್ತು ಮೇಘಾಲಯದಲ್ಲಿ ವಿಪತ್ತು ನಿರ್ವಹಣಾ ಪ್ರಾಧಿಕಾರದ ತಂಡ ರಕ್ಷಣಾ ಕಾರ್ಯಚರಣೆಯಲ್ಲಿ ತೊಡಗಿದೆ.