ಗುವಾಹಟಿ: ಭೀಕರ ಪ್ರವಾಹ ಮತ್ತು ಭೂ ಕುಸಿತದಿಂದಾಗಿ ಇದುವರೆಗೆ ಅಸ್ಸಾಂನಲ್ಲಿ 14 ಮಂದಿ ಪ್ರಾಣ ಕಳೆದುಕೊಂಡಿದ್ದು, ಲಕ್ಷಾಂತರ ಜನರ ಬದುಕು ಅಸ್ತವ್ಯಸ್ತಗೊಂಡಿದೆ.
Advertisement
ಭಾರೀ ಮಳೆಯಿಂದಾಗಿ ಅಸ್ಸಾಂನಲ್ಲಿ ಪರಿಸ್ಥಿತಿ ಕೈಮೀರಿ ಹೋಗಿದ್ದು, ರಾಜ್ಯದ 29 ಜಿಲ್ಲೆಗಳು ಮಳೆಗಾಹುತಿಯಾಗಿವೆ. ಭೀಕರ ಪ್ರವಾಹದಿಂದಾಗಿ ಜನರ ಜೀವನ ಅಸ್ತವ್ಯಸ್ತಗೊಂಡಿದ್ದು, 7 ಲಕ್ಷಕ್ಕೂ ಹೆಚ್ಚು ಜನರು ಸಂತ್ರಸ್ತರಾಗಿದ್ದಾರೆ. ಇದುವರೆಗೆ 14 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಇದನ್ನೂ ಓದಿ: ಬಿಗಡಾಯಿಸಿತೇ ಬಿಡದಿ ನಿತ್ಯಾನಂದನ ಆರೋಗ್ಯ..?
Advertisement
Advertisement
ಈ ಕುರಿತು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಇದರ ನಡುವೆ ಗುವಾಹಟಿಯ ಪ್ರಾದೇಶಿಕ ಹವಾಮಾನ ಕೇಂದ್ರವು ಅಸ್ಸಾಂ ಮತ್ತು ಮೇಘಾಲಯದಲ್ಲಿ ಮೇ 21 ರವರೆಗೆ ಭಾರೀ ಮಳೆಯಾಗುವ ಎಚ್ಚರಿಕೆಯನ್ನು ನೀಡಿದೆ. ಇದನ್ನೂ ಓದಿ: ವಾಹನ ಸವಾರರಿಗೆ ಕೇಂದ್ರ ಸರ್ಕಾರದಿಂದ ಗುಡ್ನ್ಯೂಸ್ – ಪೆಟ್ರೋಲ್, ಡೀಸೆಲ್ ಅಬಕಾರಿ ಸುಂಕ ಇಳಿಕೆ
Advertisement
ನೈರುತ್ಯ ಮಾರುತದಿಂದಾಗಿ ಬಂಗಾಳಕೊಲ್ಲಿಯಿಂದ ಒತ್ತಡ ಉಂಟಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹೀಗಾಗಿ ಈಶಾನ್ಯ ಭಾಗದಲ್ಲಿ ಭಾರೀ ಮಳೆ ಮುಂದುವರಿಯುವ ನಿರೀಕ್ಷೆ ಇದೆ.