ಮಡಿಕೇರಿ: ಒಂದೆಡೆ ಎನ್‌ಆರ್‌ಸಿ(ರಾಷ್ಟ್ರೀಯ ನಾಗರಿಕ ನೋಂದಣಿ) ಮತ್ತು ಸಿಎಎ ಕಾಯ್ದೆ(ಪೌರತ್ವ ತಿದ್ದುಪಡಿ ಕಾಯ್ದೆ) ಜಾರಿಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದರೆ, ಮತ್ತೊಂದೆಡೆ ಕೊಡಗಿನ ಕಾಫಿ ತೋಟಗಳಲ್ಲಿ ಅಕ್ರಮವಾಗಿ ನೆಲೆಸಿರುವ ಅಸ್ಸಾಂ ಮತ್ತು ಬಾಂಗ್ಲಾ ವಲಸಿಗರ ದಾಖಲೆ ಪರಿಶೀಲನೆ ನಡೆಯುತ್ತಿದೆ.
ಕೊಡಗಿನಲ್ಲಿ ಒಂದು ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ಅಸ್ಸಾಂ ಕಾರ್ಮಿಕರು ನೆಲೆಸಿದ್ದು, ಜಿಲ್ಲೆಯ ಮೂರು ತಾಲೂಕಿನಲ್ಲಿ ದಾಖಲೆ ಪರಿಶೀಲನೆ ನಡೆಯುತ್ತಿದೆ. ಮಡಿಕೇರಿ, ಸೋಮವಾರಪೇಟೆ ಮತ್ತು ವಿರಾಜಪೇಟೆಯಲ್ಲಿ ಪೊಲೀಸರಿಂದ ಅಸ್ಸಾಂ ಕೂಲಿ ಕಾರ್ಮಿಕರ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ.
Advertisement
Advertisement
ಈ ಬಗ್ಗೆ ಪ್ರತಿಕ್ರಿಯಿಸಿದ ವಿರಾಜಪೇಟೆ ಶಾಸಕ ಕೆ.ಜಿ ಬೋಪಯ್ಯ ಅವರು, ಕೊಡಗಿನಲ್ಲಿ ಅಪಾರ ಸಂಖ್ಯೆಯಲ್ಲಿ ಅಸ್ಸಾಂ ಕಾರ್ಮಿಕರು ನೆಲೆಸಿದ್ದಾರೆ. ಒಂದೆಡೆ ಗೋಣಿಕೊಪ್ಪಲಿನಲ್ಲಿ ಉಗ್ರರ ತರಬೇತಿಗೆ ಸ್ಕೆಚ್ ಕೂಡ ಹಾಕಲಾಗಿದೆ ಎಂಬ ದೂರು ಕೇಳಿ ಬಂದಿತ್ತು. ಹೀಗಾಗಿ ಕಟ್ಟುನಿಟ್ಟಿನ ಪರಿಶೀಲನೆ ಆಗಲಿ ಎಂದು ಬೋಪಯ್ಯ ಒತ್ತಾಯಿಸಿದ್ದಾರೆ. ಅಲ್ಲದೆ ಕಾಫಿ ತೋಟದ ಮಾಲೀಕರು ಪೋಲಿಸ್ ಇಲಾಖೆಯೊಂದಿಗೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.