ಗುವಾಹಟಿ: ಅಸ್ಸಾಂನ ಹೈಲಕಂಡಿ ಜಿಲ್ಲೆಯ ನ್ಯಾಯಾಲಯವೊಂದು 11 ವರ್ಷದ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ವ್ಯಕ್ತಿಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ.
ಹೈಲಕಂಡಿಯ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ (ವಿಶೇಷ ನ್ಯಾಯಾಧೀಶ) ಸಂಜೋಯ್ ಹಜಾರಿಕಾ ಅವರು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 377 (ಅನೈಸರ್ಗಿಕ ಅತ್ಯಾಚಾರ) ಅಡಿಯಲ್ಲಿನ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20,000 ರೂ. ದಂಡವನ್ನು ವಿಧಿಸಿದ್ದಾರೆ. ಇದನ್ನೂ ಓದಿ: ಉಡದ ಮೇಲೆ ಅತ್ಯಾಚಾರಗೈದ ನಾಲ್ವರು ಅರೆಸ್ಟ್
Advertisement
Advertisement
ಒಂದು ವೇಳೆ ದಂಡ ಪಾವತಿಸಲು ತಪ್ಪಿದಲ್ಲಿ ಅಪರಾಧಿ ಆರು ತಿಂಗಳ ಹೆಚ್ಚುವರಿ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ನ್ಯಾಯಾಲಯ ತೀರ್ಪಿನಲ್ಲಿ ಹೇಳಿದೆ. ಇದನ್ನೂ ಓದಿ: ಐಎನ್ಎಸ್ ದೇಣಿಗೆ ವಂಚನೆ: ಬಿಜೆಪಿ ಮುಖಂಡ ಕಿರಿತ್ ಸೋಮಯ್ಯ, ಪುತ್ರನ ವಿರುದ್ಧ ಪ್ರಕರಣ ದಾಖಲು
Advertisement
2018ರ ಜೂನ್ 5ರಂದು ಲಾಲಾ ಪೊಲೀಸ್ ಠಾಣೆಗೆ ನೀಡಿದ ದೂರಿನ ಪ್ರಕಾರ, ಅಪರಾಧಿ ಆಗ 21 ವರ್ಷ ವಯಸ್ಸಿನವನಾಗಿದ್ದನು. ಅವನು ಇಬ್ಬರು ಮಕ್ಕಳೊಂದಿಗೆ ಆಟವಾಡುತ್ತಿದ್ದ ಸಂದರ್ಭದಲ್ಲಿ ಒಬ್ಬ ಬಾಲಕನನ್ನು ಲಾಲಾ ರೂರಲ್ ಕಾಲೇಜು ಆವರಣದಲ್ಲಿರುವ ಶೌಚಾಲಯಕ್ಕೆ ಬಲವಂತವಾಗಿ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ್ದನು.
Advertisement
ನಂತರ ಮಗುವನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಿದ್ದು, ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಪೊಲೀಸರು ಕಳೆದ ವರ್ಷ ಚಾರ್ಜ್ ಶೀಟ್ ಸಲ್ಲಿಸಿದ್ದರು.