ಬೆಂಗ್ಳೂರಲ್ಲಿ ಬಂಧನವಾಗಿದ್ದ ಶಂಕಿತ ಉಗ್ರನಿಂದ ರಹಸ್ಯ ಸ್ಫೋಟ – ಆ.15ರಂದು ಸ್ಫೋಟಿಸಲು ಇರಿಸಿದ್ದ ಜೀವಂತ IED ವಶ

Public TV
3 Min Read
Suspected ULFA terrorist Girish Bora arrested from Jigani near Bengaluru 1

– ನಾಲ್ವರು ಪಾಕ್ ಪ್ರಜೆಗಳು ಅರೆಸ್ಟ್; ತನಿಖೆ ತೀವ್ರ

ಬೆಂಗಳೂರು: ಅಸ್ಸಾಂ ಎನ್‌ಐಎ ಅಧಿಕಾರಿಗಳಿಂದ ಬೆಂಗಳೂರು ಗ್ರಾಮಾಂತರದ ಜಿಗಣಿಯಲ್ಲಿ ಬಂಧಿತನಾಗಿದ್ದ ಉಲ್ಫಾ ಉಗ್ರನಿಂದ ಸ್ಫೋಟಕ ರಹಸ್ಯವೊಂದು ಬಯಲಾಗಿದೆ. ಶಂಕಿತ ಉಗ್ರನ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿರುವ ಎನ್‌ಐಎ (NIA) ಅಧಿಕಾರಿಗಳು ಮಂಗಳವಾರ ಅಸ್ಸಾಂನ (Assam) ಉತ್ತರ ಲಖೀಂಪುರದಲ್ಲಿ ಜೀವಂತ ಐಇಡಿಗಳನ್ನ (ಸುಧಾರಿತ ಸ್ಫೋಟಕ ಸಾಧನ) ವಶಕ್ಕೆ ಪಡೆದಿದ್ದಾರೆ.

NIA 2

ಎನ್‌ಐಎ ಅಧಿಕಾರಿಗಳ ವಿಚಾರಣೆ ವೇಳೆ ಶಂಕಿತ (Suspected Terrorist) ಉಗ್ರ ಗಿರಿಸ್ ಬೋರಾ ಅಲಿಯಾಸ್‌ ಗೌತಮ್, ಅಸ್ಸಾಂನಲ್ಲಿ ಐಇಡಿ ಇಟ್ಟ ಸ್ಫೋಟಕ ವಿಚಾರ ಬಾಯ್ಬಿಟ್ಟಿದ್ದಾನೆ. ಅಲ್ಲದೇ ಉಲ್ಫಾ(I) ಸಂಘಟನೆಯ ನಾಯಕರು ಹೇಳಿದಂತೆ ಐಇಡಿಗಳನ್ನ ಇಟ್ಟಿದ್ದೆ. ಆಗಸ್ಟ್‌ 15ರಂದು ಸ್ಫೋಟಿಸಲು ಸಂಜು ರೂಪಿಸಲಾಗಿತ್ತು ಎಂದೂ ಸಹ ಒಪ್ಪಿಕೊಂಡಿದ್ದಾನೆ. ಶಂಕಿತ ಉಗ್ರನ ಮಾಹಿತಿ ಮೇರೆಗೆ ತನಿಖೆ ನಡೆಸಿದ ಎನ್‌ಐಎ ಅಧಿಕಾರಿಗಳು ಲಖೀಂಪುರ ಜಿಲ್ಲೆಯಲ್ಲಿ ಇಟ್ಟಿದ್ದ ಕೆಲವು ಜೀವಂತ ಐಇಡಿಗಳನ್ನ ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ತನಿಖೆಯನ್ನೂ ಮುಂದುವರಿಸಿದ್ದಾರೆ. ಇದನ್ನೂ ಓದಿ: ರಸ್ತೆ, ರೈಲು ಹಳಿಗಳನ್ನು ಅತಿಕ್ರಮಿಸುವ ಯಾವುದೇ ಧಾರ್ಮಿಕ ಕಟ್ಟಡಗಳನ್ನು ತೆರವುಗೊಳಿಸಬೇಕು: ಸುಪ್ರೀಂ

Pakistan

ನಾಲ್ವರು ಪಾಕ್ ಪ್ರಜೆಗಳು ಅರೆಸ್ಟ್; ತನಿಖೆ ತೀವ್ರ
ಪಾಕಿಸ್ತಾನಿ ನ್ಯಾಷನಲಾಟಿ ಗುಮಾನಿ ಮೇಲೆ ನಾಲ್ವರು ಪಾಕ್ ಪ್ರಜೆಗಳು ಅರೆಸ್ಟ್ ಪ್ರಕರಣದ ತನಿಖೆ ದಿನ ಕಳೆದಂತೆ ತೀವ್ರಗೊಳ್ಳುತ್ತಿದೆ. IB, NIA ಮತ್ತು ಆನೇಕಲ್ ಉಪವಿಭಾಗದ ಪೊಲೀಸ್ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು, ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಆರ್ ಹಿತೇಂದ್ರ ಭೇಟಿ ನೀಡಿ ತನಿಖೆ ಬಗ್ಗೆ ಚರ್ಚೆ ನಡೆಸಿದ್ದು, ಒಂದಷ್ಟು ಸಲಹೆ ಸೂಚನೆ ನೀಡಿದೆ. ಇದನ್ನೂ ಓದಿ: ಪ್ರವಾದಿ ಮೊಹಮ್ಮದ್‌ರ ವಿರುದ್ಧ ಅವಹೇಳನಕಾರಿ ಹೇಳಿಕೆ – ಧಾರ್ಮಿಕ ಮುಖಂಡ ಮಹಂತ್ ರಾಮಗಿರಿ ಮಹಾರಾಜ್ ವಿರುದ್ಧ 67 FIR

Pakistan 2

ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಜಿಗಣಿ ಪೊಲೀಸರಿಂದ ಬಂಧನಕ್ಕೊಳಗಾಗಿರುವ ರಶೀದ್ ಆಲಿ ಸಿದ್ಧಕಿ ಕುಟುಂಬದ ತನಿಖೆ ಮುಂದುವರಿದಿದೆ. IB, NIA ಮತ್ತು ಆನೇಕಲ್ ಉಪವಿಭಾಗದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿಗಳ ಹಿನ್ನೆಲೆ ಭಾರತಕ್ಕೆ ಅಕ್ರಮವಾಗಿ ಎಂಟ್ರಿ ಕೊಟ್ಟ ಉದ್ದೇಶ ಮತ್ತು ಭಾಗ ದಾಖಲೆಗಳ ಸೃಷ್ಟಿ ಬಗ್ಗೆ ತನಿಖೆಯನ್ನು ಕೇಂದ್ರಿಕರಿಸಲಾಗಿದೆ. ಆರೋಪಿಗಳು ಮೆಹದಿ ಫೌಂಡೇಷನ್ ನ ಪರ್ವೇಜ್ ಭಾರತಕ್ಕೆ ಬರುವಂತೆ ಹೇಳಿ ದಾಖಲೆಗಳು ಸೇರಿದಂತೆ ಅಗತ್ಯ ಸೌಲಭ್ಯ ವ್ಯವಸ್ಥೆ ಕಲ್ಲಿಸಿದನು. ಯೂನಸ್ ಅಲ್ಗೋರ್ ಧರ್ಮ ಗುರುಗಳ ಪ್ರವಚನ ಪ್ರಚಾರಕ್ಕೆ ಹಣ ನೀಡುತ್ತಿದ್ದರು. ಜೀವನಕ್ಕಾಗಿ ಬಿರಿಯಾನಿ ಹೊಟೇಲ್ ವ್ಯವಹಾರ ಮಾಡುತ್ತಿದ್ದೆವು ಎನ್ನುತ್ತಿದ್ದಾರೆ. ಆದ್ರೆ ಆರೋಪಿಗಳ ಹೇಳಿಕೆ ನಂಬಲು ಸಾಧ್ಯವಿಲ್ಲ ಎಂಬ ವಿಚಾರಗಳು ಪ್ರಾಥಮಿಕ ತನಿಖೆಯಲ್ಲಿ ಲಭ್ಯವಾಗಿದೆ. ಇದನ್ನೂ ಓದಿ: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬಳಕೆದಾರರಿಗೆ ದರ ಏರಿಕೆ ಬಿಸಿ – ಇಂದಿನಿಂದಲೇ ಹೊಸ ದರ ಅನ್ವಯ

ಬಂಧಿತ ಪಾಕ್ ಪ್ರಜೆಗಳಾದ ರಶೀದ್ ಅಲಿ ಸಿದ್ಧಕಿ ಮತ್ತು ಆತನ ಪತ್ನಿ ಆಯೇಷಾ ಹನೀಫ್‌ಳನ್ನು IB ಮತ್ತು NIA ಅಧಿಕಾರಿಗಳು ತೀವ್ರ ವಿಚಾರಣೆಗೆ ಒಳಪಡಿಸಿದ್ದು, ಬಾಂಗ್ಲಾದೇಶ ದೇಶದ ಗಲಭೆಯಲ್ಲಿ ಜೈಲಿನಿಂದ ಪರಾರಿಯಾದ ಖೈದಿಗಳ ಸಂಪರ್ಕ. ಪಾಕಿಸ್ತಾನಿ ಉಗ್ರ ಸಂಘಟನೆಗಳ ಲಿಂಕ್ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ. ಸದ್ಯ ಆರೋಪಿಗಳ ವಾಸವಿದ್ದ ಮನೆಯಲ್ಲಿ ಮೊಬೈಲ್, ಲ್ಯಾಪ್‌ಟಾಪ್, ಕೆಲ ಎಲೆಕ್ಟ್ರಾನಿಕ್ ವಸ್ತುಗಳು ದೊರೆತ್ತಿದ್ದು, ಅವುಗಳನ್ನು FSLಗೆ ರವಾನಿಸಲಾಗಿದೆ. ಧರ್ಮ ಪ್ರಚಾರದ ಜೊತೆ ದೇಶದಲ್ಲಿ ವಿಧ್ವಂಸಕ ಕೃತ್ಯ ಎಸಗುವ ಉದ್ದೇಶದ ಬಗ್ಗೆ ಯಾವುದೇ ಪುರಾವೆ ಇಲ್ಲಿಯವರೆಗೆ ಸಿಕ್ಕಿಲ್ಲ. ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಯುತ್ತಿದೆ. ಬಂಧಿತ ಮೊಹಮ್ಮದ್ ಹನೀಫ್ ಮಗಳಾದ ಫಾತಿಮಾ ಪತಿ ಅಲ್ತಾಫ್‌ ದಾವಣಗೆರೆ ಮೂಲದವನಾಗಿದ್ದು, ಚೆನ್ನೈನಲ್ಲಿ ಬಂಧಿಸಲಾಗಿದೆ. ಚೆನ್ನೈ NIA ಅಧಿಕಾರಿಗಳ ಜೊತೆಯು ಸಂಪರ್ಕದಲ್ಲಿದ್ದು, ತನಿಖೆ ಇನ್ನೂ ಪ್ರಗತಿಯಲ್ಲಿದೆ ಎಂದು ಎಡಿಜಿಪಿ ಅರ್‌. ಹಿತೇಂದ್ರ ತಿಳಿಸಿದ್ದಾರೆ.

ಪಾಕ್ ಪ್ರಜೆಗಳ ಬಂಧನದ ಪ್ರಕರಣದ ಜಾಡು ಮುಂಬೈ ಮತ್ತು ದೆಹಲಿವರೆಗೆ ವ್ಯಾಪಿಸಿದ್ದು, ಬಂಧಿತರ ಜೊತೆ ನೂರಕ್ಕೂ ಅಧಿಕ ಮಂದಿ ನಿರಂತರ ಸಂಪರ್ಕದಲ್ಲಿರುವುದು ತನಿಖೆ ವೇಳೆ ಪತ್ತೆಯಾಗಿದ್ದು, ಅವರೆಲ್ಲರೂ ಪಾಕಿಸ್ತಾನ ಮೂಲದವರ ಎಂಬುದು ಪೊಲೀಸರ ತನಿಖೆಯಿಂದ ದೃಢವಾಗಬೇಕಿದೆ.

Share This Article