ಗುವಾಹಟಿ: ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಹಿಂದೂಗಳ ನರಮೇಧ (Pahalgam Terror Attack) ಕೃತ್ಯಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನವನ್ನು (Pakistan) ಸಮರ್ಥಿಸಿಕೊಂಡಿದ್ದ ಎಐಯುಡಿಎಫ್ ಶಾಸಕ ಅಮಿನುಲ್ ಇಸ್ಲಾಂ ಅವರನ್ನ ಅಸ್ಸಾಂ ಪೊಲೀಸರು ಬಂಧಿಸಿದ್ದಾರೆ.
ನಾಗಾಂವ್ ಜಿಲ್ಲೆಯ ನಿವಾಸದಲ್ಲಿ ಶಾಸಕರನ್ನ ಬಂಧಿಸಲಾಗಿದೆ. ಪಕ್ಷದ ಶಾಸಕರ ಹೇಳಿಕೆ ಕುರಿತು ರಾಜ್ಯದ ವಿರೋಧಪಕ್ಷವಾಗಿರುವ ಎಐಯುಡಿಎಫ್ (AIUDF) ಅಂತರ ಕಾಯ್ದುಕೊಂಡಿದೆ. ಇದು ಅವರ ವೈಯಕ್ತಿಕ ಹೇಳಿಕೆ, ಪಕ್ಷಕ್ಕೂ ಇದಕ್ಕೂ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದೆ. ಇದನ್ನೂ ಓದಿ: Pahalgam Attack | ಕೇಂದ್ರ ಯಾವ್ದೇ ಕ್ರಮ ತೆಗೆದುಕೊಂಡ್ರೂ ಪೂರ್ಣ ಬೆಂಬಲ ಇದೆ: ರಾಹುಲ್ ಗಾಂಧಿ
ಪಾಕಿಸ್ತಾನ ಸಮರ್ಥಿಸಿಕೊಂಡಿರುವ ಶಾಸಕರ ವಿಡಿಯೋ ನೋಡಿದ್ದೇವೆ. ಕ್ರಮಕೈಗೊಳ್ಳಲು ಪೊಲೀಸರಿಗೆ ಸೂಚಿಸಿದ್ದೇನೆ. ಶಾಸಕರನ್ನು ಬಂಧಿಸಲಾಗಿದೆ ಎಂದು ಡಿಜಿಪಿ ಮಾಹಿತಿ ನೀಡಿದ್ದಾರೆ. ಅವರನ್ನು ಕೋರ್ಟ್‌ಗೆ ಹಾಜರುಪಡಿಸಲಿದ್ದು, ಈ ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ಒಯ್ಯಲಾಗುವುದು ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ತಿಳಿಸಿದ್ದಾರೆ. ಇದನ್ನೂ ಓದಿ: ಕಾಶ್ಮೀರದ ಉಗ್ರರ ದಾಳಿ ಹೊಣೆಯನ್ನ ಕೇಂದ್ರ ಸರ್ಕಾರವೇ ಹೊರಬೇಕು: ಹೆಚ್.ಸಿ ಬಾಲಕೃಷ್ಣ