ಗುವಾಹಟಿ: ಇತ್ತೀಚಿನ ದಿನಗಳಲ್ಲಿ ಪರೀಕ್ಷೆಗಳಲ್ಲಿ ಹೆಚ್ಚು ಅಕ್ರಮಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಪರೀಕ್ಷೆ ಸಂದರ್ಭದಲ್ಲಿ ನಡೆಯುತ್ತಿರುವ ಅಕ್ರಮವನ್ನು ತಡೆಗಟ್ಟಲು ಅಸ್ಸಾಂ ಸರ್ಕಾರ ಕೆಲವು ನಿಯಮಗಳನ್ನು ತಂದಿದ್ದು, ಈ ನಿಯಮಾನುಸಾರ ಪರೀಕ್ಷಾ ಕೇಂದ್ರದ ಸುತ್ತಲೂ 4 ಗಂಟೆಗಳ ಕಾಲ ಇಂಟರ್‌ನೆಟ್ ಸೇವೆಯನ್ನು ಸ್ಥಗಿತಗೊಳಿಸಿದೆ.
ಇಂದಿನಿಂದ ನಡೆಯುತ್ತಿರುವ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿನ 27,000 ಹುದ್ದೆಗಳನ್ನು ಭರ್ತಿ ಮಾಡಲು ಅಭ್ಯರ್ಥಿಗಳಿಗೆ ನೇಮಕಾತಿ ಪರೀಕ್ಷೆ ನಡೆಸುತ್ತಿದೆ. ಈ ಪರೀಕ್ಷೆಗೆ ಸುಮಾರು 14 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದಾರೆ. ಈ ಸಂದರ್ಭದಲ್ಲಿ ಯಾವುದೇ ರೀತಿಯ ಅಕ್ರಮಗಳು ನಡೆಯದೇ ಇರಲಿ ಎಂದು ಮುನ್ನೆಚ್ಚರಿಕೆ ಕ್ರಮವಾಗಿ ಪರೀಕ್ಷೆ ನಡೆಯುವ ಎಲ್ಲಾ ಜಿಲ್ಲೆಗಳಲ್ಲಿ ಇಂಟರ್‌ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿದೆ. ಇದನ್ನೂ ಓದಿ: 900 ಉದ್ಯೋಗಿಗಳನ್ನು ಮನೆಗೆ ಕಳುಹಿಸಿದ ಕ್ಸಿಯೋಮಿ
Advertisement
Advertisement
ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಬಿಗಿ ಭದ್ರತೆಯನ್ನು ಮಾಡಲಾಗಿರುವುದರಿಂದ ಸಿಆರ್‌ಪಿಸಿಯ ಸೆಕ್ಷನ್ 144 ಅನ್ನು ವಿಧಿಸಲಾಗಿದೆ. ಅದರ ಜೊತೆಗೆ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಮೊಬೈಲ್ ಫೋನ್ ಅಥವಾ ಇತರ ಯಾವುದೇ ಎಲೆಕ್ಟ್ರಾನಿಕ್ ಗ್ಯಾಜೆಟ್‍ಗಳನ್ನು ಕೊಂಡೊಯ್ಯುವುದನ್ನು ನಿರ್ಬಂಧಿಸಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರದ ಉಸ್ತುವಾರಿ ಕೇಂದ್ರದವರಿಗೆ ಪರೀಕ್ಷಾ ಕೇಂದ್ರದ ವೀಡಿಯೋ ಗ್ರಾಫ್ ಮಾಡಲು ಸೂಚಿಸಲಾಗಿದೆ. ಇದನ್ನೂ ಓದಿ: ಹಿಂದೂ ದೇವರಿಗೆ ಜಾಹೀರಾತಿನಲ್ಲಿ ಅಪಮಾನ – Zomato ಬಾಯ್ಕಟ್‍ಗೆ ಕರೆ