ಮಣಿಪುರದ ಚಾಂದೆಲ್‌ನಲ್ಲಿ ಎನ್‌ಕೌಂಟರ್‌ – 10 ಉಗ್ರರನ್ನು ಹತ್ಯೆ ಮಾಡಿದ ಭಾರತೀಯ ಸೇನೆ

Public TV
1 Min Read
military

ಇಂಫಾಲ: ಮಣಿಪುರದ (Manipur) ಚಾಂದೆಲ್‌ ಜಿಲ್ಲೆಯಲ್ಲಿ ಬುಧವಾರ ಅಸ್ಸಾಂ ರೈಫಲ್ಸ್ (Assam Rifles) ಘಟಕದೊಂದಿಗಿನ ಗುಂಡಿನ ಚಕಮಕಿಯಲ್ಲಿ 10 ಉಗ್ರರು ಸಾವನ್ನಪ್ಪಿದ್ದಾರೆ.

ಕಾರ್ಯಾಚರಣೆ ಇನ್ನೂ ಮುಂದುವರಿದಿದೆ ಎಂದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಪಾಕ್‌ ಕ್ಷಿಪಣಿಯನ್ನು ಧ್ವಂಸಗೊಳಿಸಿದ್ದ AI ಆಧಾರಿತ ಆಕಾಶ್‌ತೀರ್

ಭಾರತ-ಮ್ಯಾನ್ಮಾರ್ ಗಡಿಗೆ ಸಮೀಪವಿರುವ ಚಾಂದೆಲ್ ಜಿಲ್ಲೆಯ ಖೆಂಗ್‌ಜಾಯ್ ತಹಸಿಲ್‌ನ ನ್ಯೂ ಸಮ್ತಾಲ್ ಗ್ರಾಮದ ಬಳಿ ಸಶಸ್ತ್ರ ಹೊಂದಿದ್ದ ವ್ಯಕ್ತಿಗಳ ಚಲನವಲನಗಳ ಬಗ್ಗೆ ನಿರ್ದಿಷ್ಟ ಗುಪ್ತಚರ ಮಾಹಿತಿಯ ಮೇರೆಗೆ, ಸ್ಪಿಯರ್ ಕಾರ್ಪ್ಸ್ ಅಡಿಯಲ್ಲಿ ಅಸ್ಸಾಂ ರೈಫಲ್ಸ್ ಘಟಕವು ಮೇ 14 ರಂದು ಕಾರ್ಯಾಚರಣೆ ನಡೆಸಿತು ಎಂದು ಸೇನೆಯ ಪೂರ್ವ ಕಮಾಂಡ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ.

ಕಾರ್ಯಾಚರಣೆಯ ಸಮಯದಲ್ಲಿ ಉಗ್ರರು, ಪಡೆಗಳ ಮೇಲೆ ಗುಂಡು ಹಾರಿಸಿದರು. ಅದಕ್ಕೆ ಸೇನಾಪಡೆ ತ್ವರಿತವಾಗಿ ಪ್ರತಿಕ್ರಿಯಿಸಿದೆ. ಗುಂಡಿನ ಚಕಮಕಿಯಲ್ಲಿ 10 ಉಗ್ರರನ್ನು ಹತ್ಯೆ ಮಾಡಲಾಗಿದೆ. ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದೆ. ಇದನ್ನೂ ಓದಿ: ಚೀನಿ ಏರ್‌ ಡಿಫೆನ್ಸ್‌ ಜಾಮ್‌ ಮಾಡಿ 23 ನಿಮಿಷದಲ್ಲಿ ಮುಗಿಯಿತು ಕಾರ್ಯಾಚರಣೆ – ಭಾರತದ ದಾಳಿಯ ರೋಚಕ ಕಥೆ ಓದಿ

Share This Article