ಬೆಂಗಳೂರು: ಉತ್ತರ ಭಾರತ ಮೂಲದ ಬೆಂಗಳೂರಿನಲ್ಲಿ ನೆಲೆಸಿದ್ದ ವ್ಯಕ್ತಿಯೊಬ್ಬರನ್ನು ದುಷ್ಕರ್ಮಿಗಳು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆಗೈದಿರುವ ಘಟನೆ ನಗರದಲ್ಲಿ ನಡೆದಿದೆ.
ಅಸ್ಸಾಂ ಮೂಲದ ಪ್ರಣಯ್(24) ಕೊಲೆಯಾದ ವ್ಯಕ್ತಿ. ಈ ಘಟನೆ ಬೆಂಗಳೂರಿನ ತಾವರೆಕೆರೆ ಮುಖ್ಯರಸ್ತೆಯ ಚಾಕ್ಲೆಟ್ ಫ್ಯಾಕ್ಟರಿ ಬಳಿ ಭಾನುವಾರ ತಡರಾತ್ರಿ ನಡೆದಿದೆ.
ಖಾಸಗಿ ಕಂಪನಿಯಲ್ಲಿ ಸಾಪ್ಟ್ ವೇರ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಪ್ರಣಯ್ ಅವರನ್ನು ಭಾನುವಾರ ರಾತ್ರಿ ಸ್ನೇಹಿತನೊಬ್ಬ ಫೋನ್ ಮಾಡಿ ಕರೆದಿದ್ದ. ಗೆಳೆಯನ ಕರೆಗೆ ಓಗೊಟ್ಟು ಹೋದ ಪ್ರಣಯ್ ನನ್ನು ದುಷ್ಕರ್ಮಿಗಳು ಮಾರಾಕಾಸ್ತ್ರಗಳಿಂದ ಚಾಕುನಿಂದ ಹೊಟ್ಟೆ ಮತ್ತು ಎದೆಯ ಭಾಗಕ್ಕೆ ಚುಚ್ಚಿ ಕೊಲೆ ಮಾಡಿದ್ದಾರೆ. ಕೊಲೆಗೆ ಕಾರಣವೇನೆಂದು ತಿಳಿದುಬಂದಿಲ್ಲ.
ಘಟನಾ ಸ್ಥಳಕ್ಕೆ ಮಡಿವಾಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ತಂಡ ರಚನೆ ಮಾಡಿರುವ ಪೊಲಿಸರು ಅರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
https://www.youtube.com/watch?v=EI1fpzcn3wM