ನವದೆಹಲಿ: ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಹಾಗೂ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ನಡುವಿನ ರಾಜಕೀಯ ಕಿತ್ತಾಟ ಮುದುವರಿದಿದ್ದು, ಹಿಮಂತ ಬಿಸ್ವಾ ಅವರು ಸರ್ಜಿಕಲ್ ಸ್ಟ್ರೈಕ್‍ನ ವೀಡಿಯೋ ಪುರಾವೆಯನ್ನು ನೀಡಿ ತಿರುಗೇಟು ನೀಡಿದ್ದಾರೆ.
ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋವನ್ನು ಪೋಸ್ಟ್ ಮಾಡಿದ್ದಾರೆ. ಕೆಸಿಆರ್ ಅವರಿಗೆ ನಮ್ಮ ವೀರ ಸೇನೆಯ ಸರ್ಜಿಕಲ್ ಸ್ಟ್ರೈಕ್‍ನ ಪುರಾವೆ ಇಲ್ಲಿದೆ. ನೀವು ನಮ್ಮ ಸಶಸ್ತ್ರ ಪಡೆಗಳ ಶೌರ್ಯವನ್ನು ಪ್ರಶ್ನಿಸಿ ಅವರನ್ನು ಅವಮಾನಿಸುತ್ತಿದ್ದಿರಿ. ನವ ಭಾರತವು ನಮ್ಮ ಸೇನೆಗೆ ಅವಮಾನವಾದರೆ ಸಹಿಸುವುದಿಲ್ಲ ಎಂದು ಪೋಸ್ಟ್ ಮಾಡಿದ್ದಾರೆ.
2016ರಲ್ಲಿ ಪಾಕಿಸ್ತಾನದಲ್ಲಿ ಭಾರತ ನಡೆಸಿದ ಸರ್ಜಿಕಲ್ ಸ್ಟ್ರೈಕ್ ಮತ್ತು 2019ರಲ್ಲಿ ನಡೆದ ವೈಮಾನಿಕ ದಾಳಿಯ ಪುರಾವೆಗಳನ್ನು ಕೇಂದ್ರವು ಪ್ರಸ್ತುತಪಡಿಸಬೇಕೆಂದು ರಾಹುಲ್ ಗಾಂಧಿ ಒತ್ತಾಯಿಸಿದ್ದರು. ಇದು ಭಾರೀ ಟೀಕೆಗೆ ಒಳಗಾಗಿತ್ತು. ಆದರೆ ತೆಲಂಗಾಣ ಮುಖ್ಯಮಂತ್ರಿ ಚಂದ್ರಶೇಖರ್ ರಾವ್ ಅವರು ನಿನ್ನೆ ಪತ್ರಿಕಾಗೋಷ್ಠಿ ಮಾಡಿ ರಾಹುಲ್ ಗಾಂಧಿ ಅವರ ಪರ ವಹಿಸಿದ್ದರು.
ರಾಹುಲ್ ಗಾಂಧಿ ಸರ್ಜಿಕಲ್ ಸ್ಟ್ರೈಕ್‍ನ ಪುರಾವೆ ಕೇಳಿದ್ದರಲ್ಲಿ ತಪ್ಪನಿಲ್ಲ, ಸರ್ಜಿಕಲ್ ಸ್ಟ್ರೈಕ್‍ನ ಪುರಾವೆಯನ್ನು ನನಗೂ ತೋರಿಸಿ. ಇದು ಭಾರತ ಸರ್ಕಾರದ ಜವಾಬ್ದಾರಿಯಾಗಿದೆ. ಜನರಲ್ಲಿ ಆತಂಕವಿದೆ. ಬಿಜೆಪಿ ಸುಳ್ಳು ಪ್ರಚಾರ ಮಾಡುತ್ತಿದೆ. ಅದಕ್ಕಾಗುಯೇ ಜನರು ಸಾಕ್ಷಿಯನ್ನು ಕೇಳುತ್ತಿದ್ದಾರೆ ಎಂದ ಅವರು ಇದು ಪ್ರಜಾಪ್ರಜಾಭುತ್ವ ವ್ಯವಸ್ಥೆ ನೀವು ರಾಜನಲ್ಲ ಎಂದು ಕಿಡಿಕಾರಿದ್ದರು. ಇದನ್ನೂ ಓದಿ: ರಾಹುಲ್ ಗಾಂಧಿ ಟ್ವೀಟ್ ವಿರುದ್ಧ ಒಂದು ಸಾವಿರಕ್ಕೂ ಹೆಚ್ಚು ಕೇಸ್ ದಾಖಲು
ಈ ಬಗ್ಗೆ ಮಾತನಾಡಿದ ಹಿಮಂತ ಬಿಸ್ವಾ ಕೆಸಿಆರ್ ಭಾರತ ಸೇನೆಯನ್ನು ಅನುಮಾನಿಸಿದ್ದಕ್ಕಾಗಿ ಕ್ಷಮೆ ಕೋರಬೇಕು ಎಂದು ಒತ್ತಾಯಿಸಿದ್ದರು. ಇದನ್ನೂ ಓದಿ: 7 ರಾಜ್ಯಗಳಲ್ಲಿ 14 ಮಹಿಳೆಯರನ್ನು ಮದುವೆಯಾಗಿದ್ದ ಭೂಪ ಅರೆಸ್ಟ್