ಗುವಾಹಟಿ: ಭಯೋತ್ಪಾದಕ ಚಟುವಟಿಕೆಗಳಲ್ಲಿ ತೊಡಗಿದ್ದ ಆರೋಪದಡಿ ಇಬ್ಬರು ಧರ್ಮಗುರುಗಳ ಬಂಧನದ ಬೆನ್ನಲ್ಲೇ ಅಸ್ಸಾಂನಲ್ಲಿ ಹೊರ ರಾಜ್ಯಗಳಿಂದ ಬರುವ ಧರ್ಮಗುರುಗಳು ಹೊಸ ನಿಯಮಗಳನ್ನು ರೂಪಿಸಲಾಗಿದೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ತಿಳಿಸಿದ್ದಾರೆ.
ಅಸ್ಸಾಂ ಮಸೀದಿಗಳು ಮತ್ತು ಮದರಸಾಗಳಲ್ಲಿನ ಧರ್ಮಗುರುಗಳು ರಾಜ್ಯದ ಹೊರಗಿನಿಂದ ಬಂದರೆ ಸರ್ಕಾರಿ ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳಬೇಕಾಗುತ್ತದೆ ಎಂದು ಸಿಎಂ ಸೂಚಿಸಿದ್ದಾರೆ. ಇದನ್ನೂ ಓದಿ: ಪ್ರವಾದಿ ಮೊಹಮ್ಮದ್ ಬಗ್ಗೆ ಅವಹೇಳನ – ತೆಲಂಗಾಣದ ಬಿಜೆಪಿ ಶಾಸಕ ಅರೆಸ್ಟ್
Advertisement
ಬಂಧಿತರಲ್ಲಿ ಒಬ್ಬ ಮಸೀದಿಯಲ್ಲಿ ಇಮಾಮ್ ಆಗಿ ಕೆಲಸ ಮಾಡುತ್ತಿದ್ದ. ಹಲವು ಗ್ರಾಮಗಳಲ್ಲಿ ಜಿಹಾದಿ ಜಾಲವನ್ನು ವಿಸ್ತರಿಸಿದ್ದ. ಜಿಹಾದಿ ಜಾಲವನ್ನು ವಿಸ್ತರಿಸುವುದಕ್ಕಾಗಿ ಆರು ಬಾಂಗ್ಲಾದೇಶಿ ಪ್ರಜೆಗಳು ಅಸ್ಸಾಂ ಪ್ರವೇಶಿಸಿದ್ದರು. ಆರು ಬಾಂಗ್ಲಾದೇಶಿ ಪ್ರಜೆಗಳ ಪೈಕಿ ಒಬ್ಬರನ್ನು ಅಸ್ಸಾಂ ಪೊಲೀಸರು ಬಂಧಿಸಿದ್ದು, ಐವರು ಇನ್ನೂ ತಲೆಮರೆಸಿಕೊಂಡಿದ್ದಾರೆ. ಅಸ್ಸಾಂ ಪೊಲೀಸರು ಕಾರ್ಯಾಚರಣೆ ಮುಂದುವರಿಸಲಿದ್ದಾರೆ ಎಂದು ಸಿಎಂ ಹೇಳಿದ್ದಾರೆ.
Advertisement
ನಾವು ಈಗ ಕೆಲವು ಪ್ರಮಾಣಿತ ಕಾರ್ಯಾಚರಣೆ ವಿಧಾನ (SOP)ಗಳನ್ನು ಮಾಡಿದ್ದೇವೆ. ಯಾವುದೇ ಇಮಾಮ್ ಗ್ರಾಮಕ್ಕೆ ಬಂದರೆ, ನೀವು ಪರಿಶೀಲನೆಗಾಗಿ ಸ್ಥಳೀಯ ಪೊಲೀಸರಿಗೆ ತಿಳಿಸಬೇಕು. ಪೊಲೀಸರು ಪರಿಶೀಲಿಸಿದ ನಂತರ, ಜನರು ಅವರನ್ನು ಇಮಾಮ್ ಆಗಿ ನೇಮಿಸಿಕೊಳ್ಳಬಹುದು. ಅಸ್ಸಾಂನ ಮುಸ್ಲಿಂ ಸಮಾಜವು ಈ ಕುರಿತು ನಮಗೆ ತಮ್ಮ ಬೆಂಬಲವನ್ನು ನೀಡುತ್ತಿದೆ ಎಂದಿದ್ದಾರೆ. ಇದನ್ನೂ ಓದಿ: ಮಹಿಳೆಯನ್ನು ರೈಲ್ವೆ ಹಳಿಗೆ ತಳ್ಳಿ, ಮಕ್ಕಳೊಂದಿಗೆ ವ್ಯಕ್ತಿ ಎಸ್ಕೇಪ್
Advertisement
Advertisement
ಈ ನಿಯಮಗಳು ಅಸ್ಸಾಂ ನಿವಾಸಿಗಳಿಗೆ ಅನ್ವಯಿಸುವುದಿಲ್ಲ. ಅಸ್ಸಾಂ ನಿವಾಸಿಗಳಿಗೆ ತಮ್ಮ ವಿವರಗಳನ್ನು ನೋಂದಾಯಿಸುವ ಅಗತ್ಯವಿಲ್ಲ. ಆದರೆ ಹೊರ ರಾಜ್ಯದಿಂದ ಬರುವವರು ತಮ್ಮ ವಿವರಗಳನ್ನು ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳಬೇಕು ಎಂದು ಸ್ಪಷ್ಟಪಡಿಸಿದ್ದಾರೆ.
ಅಸ್ಸಾಂ ಜಿಹಾದಿ ಚಟುವಟಿಕೆಗಳ ಕೇಂದ್ರವಾಗಿದೆ ಎಂದು ಶರ್ಮಾ ಇತ್ತೀಚೆಗೆ ಹೇಳಿದ್ದರು. ಈ ವರ್ಷದ ಮಾರ್ಚ್‌ನಿಂದ ಇಲ್ಲಿಯವರೆಗೆ 40 ಕ್ಕೂ ಹೆಚ್ಚು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ನೂಪುರ್ ಶರ್ಮಾ ಹತ್ಯೆಗೈಯಲು ಟರ್ಕಿಯಲ್ಲಿ ಉಗ್ರನಿಗೆ ಐಸಿಸ್ ತರಬೇತಿ!
ಎರಡು ದಿನಗಳ ಹಿಂದೆ ಅಸ್ಸಾಂನ ಗೋಲ್ಪಾರಾ ಜಿಲ್ಲೆಯಲ್ಲಿ ಬಂಧನಕ್ಕೊಳಗಾಗಿರುವ ಇಬ್ಬರು ಧರ್ಮಗುರುಗಳು (ಅಬ್ದುಸ್ ಸೊಬಹಾನ್, ಜಲಾಲುದ್ದೀನ್) ರಾಜ್ಯದಲ್ಲಿ ಮುಸ್ಲಿಂ ಯುವಕರನ್ನು ತೀವ್ರಗಾಮಿಗೊಳಿಸುತ್ತಿದ್ದಾರೆ. ಭಯೋತ್ಪಾದಕ ಸಂಘಟನೆ ಅಲ್‌ಖೈದಾದೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ಆರೋಪಿಸಲಾಗಿದೆ.