– ಪಾತ್ರೆ, ಬೂಟು ಸ್ವಚ್ಛಗೊಳಿಸುವ, ಟಾಯ್ಲೆಟ್ ತೊಳೆಯುವ ಶಿಕ್ಷೆಗೆ ಗುರಿಯಾಗಿದ್ದ ಮಾಜಿ ಡಿಸಿಎಂ
ಚಂಡೀಗಢ: ಅಮೃತಸರದಲ್ಲಿರುವ (Amritsar) ಗೋಲ್ಡನ್ ಟೆಂಪಲ್‌ನ (Golden Temple) ಕಾವಲುಗಾರನಾಗಿ ಸೇವೆ ಸಲ್ಲಿಸುತ್ತಿದ್ದ ಪಂಜಾಬ್ ಮಾಜಿ ಉಪಮುಖ್ಯಮಂತ್ರಿ ಸುಖಬೀರ್ ಸಿಂಗ್ ಬಾದಲ್ (Sukhbir Singh Badal) ಮೇಲೆ ಗುಂಡಿನ ದಾಳಿ ನಡೆದಿದೆ.
Advertisement
ಬಾದಲ್ ಅವರು ಶಿರೋಮಣಿ ಅಕಾಲಿ ದಳದ (Shiromani Akali Dal) ನಾಯಕ. ಪಂಜಾಬ್ ಮಾಜಿ ಉಪಮುಖ್ಯಮಂತ್ರಿಯಾಗಿ (Punjab Former DCM) ಕಾರ್ಯನಿರ್ವಹಿಸಿದ್ದರು. ಇದೀಗ ಧಾರ್ಮಿಕ ಶಿಕ್ಷೆಯ ಭಾಗವಾಗಿ ಗೋಲ್ಡನ್ ಟೆಂಪಲ್‌ನ ಪ್ರವೇಶದ್ವಾರದ ಕಾವಲುಗಾರನಾಗಿ ಸೇವೆ ಸಲ್ಲಿಸುತ್ತಿದ್ದರು. ಇಂದು (ಡಿ.04) ಬೆಳಿಗ್ಗೆ ತಪಸ್ಸಿಗೆ ಕುಳಿತಾಗ ಗುಂಡಿನ ದಾಳಿ ಮೂಲಕ ಕೊಲೆಗೆ ಯತ್ನಿಸಲಾಗಿದೆ.ಇದನ್ನೂ ಓದಿ: ತೆಲಂಗಾಣ ಗೋದಾವರಿ ನದಿ ಪಾತ್ರದ ಬಳಿ ಭೂಕಂಪನ
Advertisement
Advertisement
ಆರೋಪಿಯನ್ನು ಅಮೃತಸರದಿಂದ ಸುಮಾರು 75 ಕಿ.ಮೀ ದೂರದಲ್ಲಿರುವ ಗುರುದಾಸ್‌ಪುರ ಜಿಲ್ಲೆಯ ದಾಲ್ ಖಾಲ್ಸಾದ ನರೇನ್ ಸಿಂಗ್ ಚೋರ್ಹಾ ಎಂದು ಗುರುತಿಸಲಾಗಿದ್ದು, ಗುಂಡು ಹಾರಿಸಿದಾಗ ಅಲ್ಲಿನ ಜನರು ಆತನ ಮೇಲೆ ಹಲ್ಲೆ ನಡೆಸಿ ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ.
Advertisement
ಬಾದಲ್ ಅವರು 2007 ರಿಂದ 2017 ರವರೆಗೆ ಪಂಜಾಬ್‌ನ ಉಪಮುಖ್ಯಮಂತ್ರಿಯಾಗಿದ್ದಾಗ ಪಕ್ಷದ ಪ್ರತಿಷ್ಠೆಗೆ ಧಕ್ಕೆ ತರುವಂತಹ ಕೆಲವು ನಿರ್ಧಾರಗಳನ್ನು ತೆಗೆದುಕೊಂಡಿದ್ದರು. ಆದ್ದರಿಂದ ಬಾದಲ್ ಅವರಿಗೆ ಹಾಗೂ ಅಕಾಲಿದಳದ ಇನ್ನಿತರ ನಾಯಕರಿಗೆ `ತಂಖಾ’ (ಧಾರ್ಮಿಕ ಶಿಕ್ಷೆ) ಘೋಷಿಸಲಾಗಿತ್ತು. `ಸೇವಾದರ್’ ಅಡಿಯಲ್ಲಿ ಪಾತ್ರೆ ತೊಳೆಯಲು, ಬೂಟು ಸ್ವಚ್ಛಗೊಳಿಸಲು ತಿಳಿಸಲಾಗಿತ್ತು. ನಿನ್ನೆ (ಡಿ.03) ಗೋಲ್ಡನ್ ಟೆಂಪಲ್‌ನಲ್ಲಿ ತಪಸ್ಸನ್ನು ಆರಂಭಿಸಿದ್ದರು.
ಕಳೆದ ಎರಡು ದಿನಗಳಿಂದ ಬಾದಲ್ ಒಂದು ಕೈಯಲ್ಲಿ ಈಟಿ ಹಿಡಿದು, ನೀಲಿ `ಸೇವಾದರ್’ ಸಮವಸ್ತ್ರವನ್ನು ಧರಿಸಿ ಗೋಲ್ಡನ್ ಟೆಂಪಲ್‌ನ ಗೇಟ್ ಬಳಿ ವ್ಹೀಲ್ ಚೇರ್‌ನಲ್ಲಿ ಕುಳಿತಿದ್ದರು.
ಸಿಸಿಟಿವಿ ದೃಶ್ಯಗಳಲ್ಲಿ ದಾಳಿಕೋರ ನಿಧಾನವಾಗಿ ಗೇಟ್ ಬಳಿ ಬಂದು ಬಂದೂಕನ್ನು ಹೊರತೆಗೆಯುತ್ತಾನೆ. ಬಳಿಕ ಗುಂಡಿನ ದಾಳಿ ನಡೆಸಿರುವುದು ಸೆರೆಯಾಗಿದೆ. ಸದ್ಯ ಆತನನ್ನು ಬಂಧಿಸಲಾಗಿದ್ದು, ದಾಳಿಯ ಹಿಂದಿನ ಉದ್ದೇಶವನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ನರೇನ್ ಸಿಂಗ್ (Naren Singh) ಖಲಿಸ್ತಾನಿ ಭಯೋತ್ಪಾದಕರ ಗುಂಪು ಬಬ್ಬರ್ ಖಾಲ್ಸಾ ಜೊತೆ ಸಂಪರ್ಕ ಹೊಂದಿದ್ದಾನೆ. 2004ರಲ್ಲಿ 94 ಅಡಿ ಸುರಂಗವನ್ನು ಅಗೆದು ಜೈಲಿನಿಂದ ತಪ್ಪಿಸಿಕೊಂಡಿದ್ದ ಬುರೈಲ್ ಜೈಲ್ ಬ್ರೇಕ್ ಪ್ರಕರಣದ ಮಾಸ್ಟರ್ ಮೈಂಡ್ ಆಗಿದ್ದ ಬಬ್ಬರ್ ಖಾಲ್ಸಾ ಜೊತೆ ಸಂಬಂಧವಿದೆ ಎಂದು ಮೂಲಗಳು ತಿಳಿಸಿವೆ.ಇದನ್ನೂ ಓದಿ: ಒಂದೇ ದಿನದಲ್ಲಿ ಮಹಿಳೆಗೆ ಸಿಕ್ತು ನಿವೇಶನ; ಸಿಎಂ ಮುಂದೆ ಗೋಳಾಡಿದ್ದ ರಾಬಿಯಾ